August 28, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕೆಪಿಸಿಸಿ ಕಾನೂನು–ಮಾನವ ಹಕ್ಕು–RTI ವಿಭಾಗದ ಬಂಟ್ವಾಳ ಕ್ಷೇತ್ರಾಧ್ಯಕ್ಷರಾಗಿ ನೋಟರಿ ಸುರೇಶ್ ಪೂಜಾರಿ ನೇಮಕ

ಕೆಪಿಸಿಸಿ ಕಾನೂನು, ಮಾನವ ಹಕ್ಕುಗಳು ಮತ್ತು ಮಾಹಿತಿ ಹಕ್ಕುಗಳ ವಿಭಾಗದ ಬಂಟ್ವಾಳ ವಿಧಾನಸಭಾ ಕ್ಷೇತ್ರಾಧ್ಯಕ್ಷರಾಗಿ ಬಂಟ್ವಾಳ ಬಾರ್ ಅಸೋಸಿಯೇಶನ್‌ನ ಮಾಜಿ ಅಧ್ಯಕ್ಷ, ನೋಟರಿ ಹಾಗೂ ನ್ಯಾಯವಾದಿ ಸುರೇಶ್ ಪೂಜಾರಿ ಅವರನ್ನು ನೇಮಕ ಮಾಡಲಾಗಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಅನುಮೋದನೆಯೊಂದಿಗೆ, ಕೆಪಿಸಿಸಿ ಕಾನೂನು, ಮಾನವ ಹಕ್ಕುಗಳು ಮತ್ತು ಮಾಹಿತಿ ಹಕ್ಕುಗಳ ವಿಭಾಗದ ರಾಜ್ಯಾಧ್ಯಕ್ಷ ಸಿ.ಎಂ. ಧನುಂಜಯ ಅವರ ಆದೇಶದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಮನೋಜ್ ರಾಜ್ ರಾಜೀವ ಅವರು ಈ ನೇಮಕಾತಿ ಆದೇಶ ಪತ್ರವನ್ನು ಹೊರಡಿಸಿದ್ದಾರೆ.

ಈ ವಿಭಾಗದ ಉಪಾಧ್ಯಕ್ಷರಾಗಿ ಉಮಾಕರ ನೆಕ್ಕರಾಜೆ, ಪ್ರಧಾನ ಕಾರ್ಯದರ್ಶಿಯಾಗಿ ಮುಹಮ್ಮದ್ ಗಝ್ಝಾಲಿ ಕೊಳ್ನಾಡು, ಕಾರ್ಯದರ್ಶಿಯಾಗಿ ವಿನ್ಸೆಂಟ್ ಪಿಂಟೋ ಅಲ್ಲಿಪಾದೆ, ಜೊತೆ ಕಾರ್ಯದರ್ಶಿಯಾಗಿ ನಿರ್ಮಲ ಮೊಡಂಕಾಪು ಹಾಗೂ ಕೋಶಾಧಿಕಾರಿಯಾಗಿ ಮೋಹನ್ ಕುಮಾರ್ ನೆತ್ತರಕೆರೆ ಅವರನ್ನು ಆಯ್ಕೆಗೊಳಿಸಲಾಗಿದೆ.

ಮಾಜಿ ಸಚಿವ ಬಿ. ರಮಾನಾಥ ರೈ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಾಲಕೃಷ್ಣ ಅಂಚನ್ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ಭಂಡಾರಿ ಅವರ ಶಿಫಾರಸ್ಸಿನ ಮೇರೆಗೆ ಈ ನೇಮಕಾತಿ ನಡೆದಿದೆ ಎಂದು ಪ್ರಕಟಣೆ ತಿಳಿಸಿದೆ.

You may also like

News

ಕಾನ್ಪುರ ವಿಮಾನ ದುರಂತ – ಉಡುಪಿ ಮೂಲದ ತರಬೇತಿ ಪೈಲಟ್ ಅಭಿಷೇಕ್ ಪೂಜಾರಿ ಮೃತ್ಯು

ಉತ್ತರ ಪ್ರದೇಶದ ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಪತನಗೊಂಡು ಉಡುಪಿ ಜಿಲ್ಲೆಯ ಮೂಲದ ಯುವ ತರಬೇತಿ ಪೈಲಟ್ 22 ವರ್ಷ ಪ್ರಾಯದ ಅಭಿಷೇಕ್ ಪೂಜಾರಿ ಮೃತಪಟ್ಟಿರುವುದು ದೃಢಪಟ್ಟಿದೆ.
News

“ಕರಾವಳಿಗೆ ಹೈಕೋರ್ಟ್ ಸಂಚಾರಿ ಪೀಠ – ಸಮಿತಿ ರಚನೆಗೆ ಸಿಜೆ ಭರವಸೆ”

ಬೆಂಗಳೂರು: ಕರಾವಳಿ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸಂಚಾರಿ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಸಮಿತಿ ರಚಿಸಿ, ಅಗತ್ಯ ಕ್ರಮ ಕೈಗೊಳ್ಳುವುದಾಗಿ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜಸ್ಟಿಸ್ ವಿಭು

You cannot copy content of this page