July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಸ್ ನಿಲ್ದಾಣಗಳಲ್ಲಿ ಸರಣಿ ಬ್ಯಾಗ್ ಕಳ್ಳತನ – ಅಂತರ್‌ಜಿಲ್ಲಾ ಕಳ್ಳನ ಬಂಧನ

₹6.47 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಬಸ್ ನಿಲ್ದಾಣಗಳಲ್ಲಿ ಮಹಿಳೆಯರು ಹಾಗೂ ಹಿರಿಯ ನಾಗರಿಕರನ್ನು ಗುರಿಯಾಗಿಸಿಕೊಂಡು ಬ್ಯಾಗ್ ಕಳ್ಳತನ ಮಾಡುತ್ತಿದ್ದ ಅಂತರ್‌ಜಿಲ್ಲಾ ಸರಣಿ ಕಳ್ಳನನ್ನು ಮಂಗಳೂರು ಬರ್ಕೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಬಿಜೈ KSRTC ಬಸ್ ನಿಲ್ದಾಣದಲ್ಲಿ ದಿನಾಂಕ 23-01-2026 ರಂದು ಸಂಜೆ 7 ಗಂಟೆಯ ಸುಮಾರಿಗೆ, ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಇಬ್ಬರು ಮಹಿಳೆಯರು ಹಾಗೂ ಹಿರಿಯ ನಾಗರಿಕರು ಕುಳಿತಿದ್ದ ಬಸ್ಸಿನಿಂದ ಸುಮಾರು 45 ಗ್ರಾಂ ಚಿನ್ನಾಭರಣ ಮತ್ತು ₹20,000 ನಗದು ಹೊಂದಿದ್ದ ಟ್ರಾಲಿ ಬ್ಯಾಗ್ ಕಳ್ಳತನವಾದ ಕುರಿತು ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಮೊ.ನಂ. 10/2026, ಕಲಂ 303(2) BNS-2023 ರಂತೆ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು.

ಪ್ರಕರಣದ ಪತ್ತೆಗೆ ವಿಶೇಷ ತಂಡವನ್ನು ರಚಿಸಲಾಗಿದ್ದು, ಸಹಾಯಕ ಪೊಲೀಸ್ ಆಯುಕ್ತರು, ಕೇಂದ್ರ ಉಪವಿಭಾಗರ ಮಾರ್ಗದರ್ಶನದಲ್ಲಿ ತನಿಖಾಧಿಕಾರಿ ವಿನಾಯಕ ತೊರಗಲ್ (ಪಿಎಸ್ಐ) ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ, ಜನವರಿ 28ರಂದು ಬುಧವಾರ ಮಂಗಳೂರು ಸೆಂಟ್ರಲ್ ರೈಲ್ವೇ ನಿಲ್ದಾಣದ ಸಮೀಪ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕೊಡಗು ಜಿಲ್ಲೆಯ ಮಡಿಕೇರಿ ತ್ಯಾಗರಾಜ್ ಕಾಲೋನಿ, ಗಫರ್ ಬಿಲ್ಡಿಂಗ್ ದಾಸವಾಳ ರಸ್ತೆ ನಿವಾಸಿ 44 ವರ್ಷ ಪ್ರಾಯದ ಮಹಮ್ಮದ್ ಇಮ್ರಾನ್ ಎಂದು ಗುರುತಿಸಲಾಗಿದೆ. ಆರೋಪಿತನಿಂದ ಒಟ್ಟು ₹6,47,920 ಮೌಲ್ಯದ 46.28 ಗ್ರಾಂ ಚಿನ್ನಾಭರಣ ಹಾಗೂ ₹5,000 ನಗದು ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಬಂಧಿತನನ್ನು ಜನವರಿ 29ರಂದು ಗುರುವಾರ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಪೊಲೀಸರ ತನಿಖೆಯಲ್ಲಿ, ಆರೋಪಿತನು ಬಸ್ ನಿಲ್ದಾಣಗಳಲ್ಲಿ ಬ್ಯಾಗ್ ಕಳ್ಳತನ ಮಾಡುವ ರೂಢಿಗತ ಅಪರಾಧಿಯಾಗಿದ್ದು, ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 11 ಕಳ್ಳತನ ಪ್ರಕರಣಗಳು ದಾಖಲಾಗಿರುವುದು ಬೆಳಕಿಗೆ ಬಂದಿದೆ. ಅಲ್ಲದೆ, ಹಾಸನ ಜಿಲ್ಲೆಯ ಮನೆ ಕಳ್ಳತನ ಪ್ರಕರಣವೊಂದರಲ್ಲಿ ಜಾಮೀನಿನ ಮೇಲೆ ಹೊರಬಂದಿದ್ದ ಆತ, ನ್ಯಾಯಾಲಯಕ್ಕೆ ಹಾಜರಾಗದೇ ಇರುವ ಹಿನ್ನೆಲೆಯಲ್ಲಿ ನ್ಯಾಯಾಲಯದಿಂದ ವಾರೆಂಟ್ ಕೂಡ ಜಾರಿಗೊಳಿಸಲಾಗಿತ್ತು. ಈ ಯಶಸ್ವಿ ಕಾರ್ಯಾಚರಣೆಯನ್ನು ಮಂಗಳೂರು ನಗರ ಪೊಲೀಸ್ ಆಯುಕ್ತರು ಶ್ಲಾಘಿಸಿದ್ದಾರೆ.

You may also like

News

Father Muller Principal Wins Prestigious Global Young Investigator Award at MASCC/ISOO Congress in Australia

In a moment of immense pride for the nation and the physiotherapy fraternity, Prof. Cherishma Dsilva, Principal of Father Muller
News

ಮಂಗಳೂರಿನ ಸಂದೇಶ ಫೌಂಡೇಶನ್‌ನಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿಯ ಹೊಸ ಅಧ್ಯಾಯ

‘Mangalore IAS – A School for Civil Services’ಗೆ ಚಾಲನೆ ನೀಡಿದ ಬಳ್ಳಾರಿ ಧರ್ಮಕ್ಷೇತ್ರದ ಬಿಷಪ್ ಹೆನ್ರಿ ಡಿಸೋಜ ನಾಗರಿಕ ಸೇವೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ

You cannot copy content of this page