August 27, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಫೆಬ್ರವರಿ 1ರಂದು ಬಂಟ್ವಾಳದಲ್ಲಿ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ – ವಿಶ್ರಾಂತ ನೌಕರರು, ಸಾಧಕರಿಗೆ ಅಭಿನಂದನೆ

ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಬಂಟ್ವಾಳ ತಾಲೂಕು ಶಾಖೆಯ 2023–24 ಹಾಗೂ 2024–25ನೇ ಸಾಲಿನ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ನೌಕರರಿಗೆ ಅಭಿನಂದನಾ ಸಮಾರಂಭವು ಫೆಬ್ರವರಿ 1ರಂದು ಭಾನುವಾರ ಬೆಳಿಗ್ಗೆ 10 ಗಂಟೆಗೆ ಬಿ.ಸಿ. ರೋಡಿನ ಸರಕಾರಿ ನೌಕರರ ಸಭಾ ಭವನದಲ್ಲಿ ನಡೆಯಲಿದೆ.

ಸಮಾರಂಭವನ್ನು ಬಂಟ್ವಾಳ ಶಾಸಕ ಯು. ರಾಜೇಶ್ ನಾಯಕ್ ಉದ್ಘಾಟಿಸಲಿದ್ದು, ಮಾಜಿ ಸಚಿವ ಬಿ. ರಮಾನಾಥ ರೈ ಗಣ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ನವೀನ್ ಕುಮಾರ್ ಎಂ.ಎಸ್. ಅವರು ಸಾಧಕರನ್ನು ಅಭಿನಂದಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಬಂಟ್ವಾಳ ತಹಶೀಲ್ದಾರ್ ಜಿ. ಮಂಜುನಾಥ್, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಸಚಿನ್ ಕುಮಾರ್, ತಾಲೂಕು ಆರೋಗ್ಯಾಧಿಕಾರಿ ಡಾ. ಅಶೋಕ್ ಕುಮಾರ್ ರೈ, ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಮಾಲತಿ, ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪವಿಭಾಗದ ಎಇಇ ತಾರನಾಥ ಸಾಲ್ಯಾನ್ ಪಿ., ಬಂಟ್ವಾಳ ಪಿಂಚಣಿದಾರರ ಸಂಘದ ಅಧ್ಯಕ್ಷ ಪಿ. ಲೋಕನಾಥ ಶೆಟ್ಟಿ, ಸರಕಾರಿ ನೌಕರರ ಸಂಘದ ಬಂಟ್ವಾಳ ಶಾಖೆಯ ನಿಕಟಪೂರ್ವ ಅಧ್ಯಕ್ಷ ಉಮಾನಾಥ ರೈ ಮೇರಾವು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಈ ವಿಷಯವನ್ನು ಸಂಘದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

You may also like

News

ಮಿಲಾಗ್ರಿಸ್ ಸೊಸೈಟಿಯಿಂದ ಪಾನೀರ್ ಅನಾಥಾಶ್ರಮದ ವಿದ್ಯಾರ್ಥಿಗಳಿಗೆ ಅಗತ್ಯ ವಸ್ತುಗಳ ನೆರವು

ಆಶ್ರಮಗಳಿಗೆ ಅಗತ್ಯ ವಸ್ತುಗಳನ್ನು ವಿತರಿಸುತ್ತಿರುವುದು ಶ್ಲಾಘನೀಯ – ಜೆ. ಆರ್. ಲೋಬೊ ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ., ಕಾರವಾರ ಇದರ ಉರ್ವಾ ಶಾಖೆಯ ಆಶ್ರಯದಲ್ಲಿ
News

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ DAPC ಬಿಷಪ್‌ಗಳು – ಕ್ರೈಸ್ತ ಸಮುದಾಯದ ಬೇಡಿಕೆಗಳ ಕುರಿತು ಮನವಿ

ಡಯಾಸಿಸ್ ಆಫ್ ಆಲ್ ಪ್ರೊಟೆಸ್ಟಂಟ್ ಚರ್ಚಸ್ (DAPC) ನಿಯೋಗವು ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ, ರಾಜ್ಯದ ಪ್ರೊಟೆಸ್ಟಂಟ್, ಪೆಂಟೆಕೋಸ್ಟಲ್ ಹಾಗೂ ಸ್ವತಂತ್ರ ಕ್ರೈಸ್ತ

You cannot copy content of this page