October 18, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ನರೇಗಾ ಬಚಾವೋ ಸಂಗ್ರಾಮ – ಕೇಂದ್ರ ಸರ್ಕಾರದ ಕ್ರಮ ಖಂಡಿಸಿ ಕನ್ಯಾನದಲ್ಲಿ ಕಾಂಗ್ರೆಸ್‌ನಿಂದ ಬ್ರಹತ್ ಪ್ರತಿಭಟನೆ

ಕೇಂದ್ರ ಸರ್ಕಾರ ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ನರೇಗಾ)ಯ ಹೆಸರು ಹಾಗೂ ಅದರ ಮೂಲ ಸ್ವರೂಪವನ್ನು ಬದಲಾಯಿಸಿರುವ ಕ್ರಮವನ್ನು ಖಂಡಿಸಿ, ಕನ್ಯಾನ ವಲಯ ಕಾಂಗ್ರೆಸ್ ಸಮಿತಿಯ ವತಿಯಿಂದ “ನರೇಗಾ ಬಚಾವೋ ಸಂಗ್ರಾಮ” ದಡಿ ಕನ್ಯಾನ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಇಂದು ಬ್ರಹತ್ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯನ್ನು ವಲಯ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಅಬ್ದುಲ್ ಮಜೀದ್ ಕನ್ಯಾನ ಸ್ವಾಗತಿಸಿ ಮಾತನಾಡಿದರು. ನಂತರ ಮುಖ್ಯ ಭಾಷಣ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಎಂ.ಎಸ್. ಮಹಮ್ಮದ್ ಅವರು, ನರೇಗಾ ಯೋಜನೆಯು ಗ್ರಾಮೀಣ ಜನತೆಗೆ ಉದ್ಯೋಗ ಭದ್ರತೆ, ಜೀವನಾಧಾರ ಮತ್ತು ಸಾಮಾಜಿಕ ನ್ಯಾಯವನ್ನು ಒದಗಿಸಿರುವ ಮಹತ್ವದ ಯೋಜನೆಯಾಗಿದ್ದು, ಅದರ ಹೆಸರನ್ನು ಮಾತ್ರವಲ್ಲದೆ ಅದರ ಆತ್ಮವನ್ನೇ ದುರ್ಬಲಗೊಳಿಸುವ ಕೇಂದ್ರ ಸರ್ಕಾರದ ನೀತಿ ಗ್ರಾಮೀಣ ಬಡವರ ವಿರುದ್ಧವಾದ ಕ್ರಮ ಎಂದು ತೀವ್ರವಾಗಿ ಟೀಕಿಸಿದರು.

ಈ ಸಂದರ್ಭದಲ್ಲಿ ಕನ್ಯಾನ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಕೆ.ಪಿ. ಅಬ್ದುಲ್ ರಹಿಮಾನ್ ಹಾಗೂ ಪಂಚಾಯತ್ ಸದಸ್ಯ ಗಣೇಶ್ ಭಟ್ ನೀರ್ಪಾಜೆ ಅವರು ಮಾತನಾಡಿ, ನರೇಗಾ ಯೋಜನೆಯ ಸಾಧನೆಗಳು ಅಪಾರವಾಗಿದ್ದು, ಗ್ರಾಮೀಣ ಬಡವರ ಪಾಲಿಗೆ ಇದು ಆಶಾಕಿರಣವಾಗಿದೆ. ಈ ಯೋಜನೆಯನ್ನು ದುರ್ಬಲಗೊಳಿಸುವ ಯಾವುದೇ ಪ್ರಯತ್ನವನ್ನು ಸಹಿಸಬಾರದು ಎಂದು ಅವರು ಒತ್ತಾಯಿಸಿದರು.

ಕಾರ್ಯಕ್ರಮದಲ್ಲಿ ಕನ್ಯಾನ ಗ್ರಾಮ ಪಂಚಾಯತ್ ಅಧ್ಯಕ್ಷೆ ರೇಖಾ ರಮೇಶ್, ಪಂಚಾಯತ್ ಸದಸ್ಯರು, ಬೂತ್ ಅಧ್ಯಕ್ಷರು, ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರು ಹಾಗೂ ಕಾರ್ಯಕರ್ತರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಪ್ರತಿಭಟನೆಯ ಅಂತ್ಯದಲ್ಲಿ, ನರೇಗಾ ಯೋಜನೆಗೆ ಸಂಪೂರ್ಣ ಬೆಂಬಲ ಸೂಚಿಸಿ ಹಾಗೂ ‘ವಿಕಸಿತ ಭಾರತ ಗ್ರಾಮೀಣ ಉದ್ಯೋಗ ಖಾತರಿ (ವಿ.ಬಿ. ಗ್ರಾಮ್ ಜಿ)’ ಅನುಷ್ಠಾನಕ್ಕೆ ವಿರೋಧ ವ್ಯಕ್ತಪಡಿಸಿ, ಗ್ರಾಮ ಪಂಚಾಯತ್ ಪಿಡಿಒ ಅವರ ಮೂಲಕ ಮೇಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಜೊತೆಗೆ ಈ ವಿಷಯವನ್ನು ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಚರ್ಚಿಸಿ ನಿರ್ಣಯ ಕೈಗೊಳ್ಳಲು ತೀರ್ಮಾನಿಸಲಾಯಿತು.

You may also like

News

ಪುತ್ತೂರು ರಸ್ತೆ ಅಪಘಾತದಲ್ಲಿ ಅಂಚೆ ಇಲಾಖೆ ಸಿಬ್ಬಂದಿ ಮಮತಾ ದುರ್ಮರಣ

ಪುತ್ತೂರು ಮುಕ್ರಂಪಾಡಿಯಲ್ಲಿ ಸ್ಕೂಟರ್ ಮತ್ತು ಆಟೋ ರಿಕ್ಷಾ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪುತ್ತೂರು ಅಂಚೆ ಇಲಾಖೆಯ ಪೋಸ್ಟಲ್ ಅಸಿಸ್ಟೆಂಟ್ ಮಮತಾ ಅವರು ಚಿಕಿತ್ಸೆ
News

Inauguration of RGUHS Mangaluru Zone Throwball (M&W) Tournament 2026-27 at Father Muller Homoeopathic Medical College Deralakatte

RGUHS Mangaluru Zone Throwball (M&W) Tournament 2026-27 was hosted by Father Muller Homoeopathic Medical College, Deralakatte on 17th October 2026.

You cannot copy content of this page