October 18, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ದಕ್ಷಿಣ ಕನ್ನಡದ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ವೇಗ ನೀಡಲು ಹೆದ್ದಾರಿ ಸಚಿವಾಲಯದ ಕಾರ್ಯದರ್ಶಿಯನ್ನು ಭೇಟಿಯಾದ ಸಂಸದ ಕ್ಯಾಪ್ಟನ್ ಬ್ರಿಜೇಶ್‌ ಚೌಟ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಕಾಮಗಾರಿಗಳಿಗೆ ವೇಗ ನೀಡುವ ಉದ್ದೇಶದಿಂದ ಸಂಸದ ಕ್ಯಾಪ್ಟನ್ ಬ್ರಿಜೇಶ್‌ ಚೌಟ ಅವರು ನವದೆಹಲಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಕಾರ್ಯದರ್ಶಿ ಉಮಾಶಂಕರ್ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಈ ವೇಳೆ ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಪ್ರಗತಿಯ ಕುರಿತು ಸಂಸದರು ಕಾರ್ಯದರ್ಶಿಗಳ ಗಮನ ಸೆಳೆದರು. ಯಾವುದೇ ಅನಗತ್ಯ ವಿಳಂಬವಿಲ್ಲದೆ ಯೋಜನೆಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನ ನೀಡುವಂತೆ ಅವರು ಮನವಿ ಮಾಡಿದರು.

ಸಭೆಯಲ್ಲಿ ಶಿರಾಡಿ ಘಾಟ್ ಹಾಗೂ ಸುರತ್ಕಲ್–ಬಿ.ಸಿ. ರೋಡ್ ಹೆದ್ದಾರಿ ಅಭಿವೃದ್ಧಿಗೆ ಸಂಬಂಧಿಸಿದ ವಿಸ್ತೃತ ಯೋಜನಾ ವರದಿ (DPR) ಕುರಿತು ಸುದೀರ್ಘ ಚರ್ಚೆ ನಡೆಯಿತು. ಈ ಎರಡೂ ಯೋಜನೆಗಳು ದಕ್ಷಿಣ ಕನ್ನಡ ಜಿಲ್ಲೆಯ ರಸ್ತೆ ಸಂಪರ್ಕ ವ್ಯವಸ್ಥೆಗೆ ಅತ್ಯಂತ ಮಹತ್ವದ್ದಾಗಿರುವುದರಿಂದ, ಅವುಗಳ ಅನುಷ್ಠಾನಕ್ಕೆ ಹೆಚ್ಚಿನ ಆದ್ಯತೆ ನೀಡಿ ಶೀಘ್ರ ಕ್ರಮ ಕೈಗೊಳ್ಳುವಂತೆ ಸಂಸದ ಕ್ಯಾಪ್ಟನ್ ಚೌಟ ಅವರು ಒತ್ತಾಯಿಸಿದರು.

ಅದೇ ರೀತಿ, ಮಾಣಿ–ಸಂಪಾಜೆ ನಡುವಿನ ರಸ್ತೆಯು ಇದೀಗ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (NHAI) ವ್ಯಾಪ್ತಿಗೆ ಒಳಪಟ್ಟಿರುವ ಹಿನ್ನೆಲೆಯಲ್ಲಿ, ಅದರ ಅಭಿವೃದ್ಧಿ ಕಾಮಗಾರಿಗಳನ್ನು ಮರುಪರಿಶೀಲಿಸಿ ವೇಗಗೊಳಿಸುವ ಅಗತ್ಯವಿದೆ ಎಂಬುದನ್ನೂ ಅವರು ಸಭೆಯಲ್ಲಿ ಪ್ರಸ್ತಾಪಿಸಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ ಅವರು ಉಪಸ್ಥಿತರಿದ್ದರು.

You may also like

News

ಪುತ್ತೂರು ರಸ್ತೆ ಅಪಘಾತದಲ್ಲಿ ಅಂಚೆ ಇಲಾಖೆ ಸಿಬ್ಬಂದಿ ಮಮತಾ ದುರ್ಮರಣ

ಪುತ್ತೂರು ಮುಕ್ರಂಪಾಡಿಯಲ್ಲಿ ಸ್ಕೂಟರ್ ಮತ್ತು ಆಟೋ ರಿಕ್ಷಾ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪುತ್ತೂರು ಅಂಚೆ ಇಲಾಖೆಯ ಪೋಸ್ಟಲ್ ಅಸಿಸ್ಟೆಂಟ್ ಮಮತಾ ಅವರು ಚಿಕಿತ್ಸೆ
News

Inauguration of RGUHS Mangaluru Zone Throwball (M&W) Tournament 2026-27 at Father Muller Homoeopathic Medical College Deralakatte

RGUHS Mangaluru Zone Throwball (M&W) Tournament 2026-27 was hosted by Father Muller Homoeopathic Medical College, Deralakatte on 17th October 2026.

You cannot copy content of this page