October 18, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ವಿಟ್ಲ ಬಸ್ ನಿಲ್ದಾಣ ಬಳಿ ಭೀಕರ ಅಪಘಾತ

ಬೈಕ್ ಢಿಕ್ಕಿಯಾಗಿ ಮಹಿಳೆ ಸಾವು – ಸವಾರನ ಸ್ಥಿತಿ ಗಂಭೀರ

ವಿಟ್ಲ: ಇಲ್ಲಿನ ಬಸ್ ನಿಲ್ದಾಣದ ಸಮೀಪ ಇಂದು ಫೆಬ್ರವರಿ 8ರಂದು ಭಾನುವಾರ ಬೆಳಿಗ್ಗೆ ಸಂಭವಿಸಿದ ದಾರುಣ ರಸ್ತೆ ಅಪಘಾತದಲ್ಲಿ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರು ಮೃತಪಟ್ಟು, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ವಿಟ್ಲ ಮುಡ್ನೂರು ಗ್ರಾಮದ ಮರುವಾಳ ನಿವಾಸಿ 68 ವರ್ಷ ಪ್ರಾಯದ ಸೀತಾ ಶೆಟ್ಟಿ ಎಂದು ಗುರುತಿಸಲಾಗಿದೆ. ಅಪಘಾತದ ತೀವ್ರತೆಗೆ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯ ವಿವರ:

ಪುತ್ತೂರು ಕಡೆಯಿಂದ ಅತೀ ವೇಗವಾಗಿ ಬಂದ ಬೈಕ್, ಬಸ್ ನಿಲ್ದಾಣದ ಬಳಿ ರಸ್ತೆ ದಾಟುತ್ತಿದ್ದ ಸೀತಾ ಶೆಟ್ಟಿ ಅವರಿಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಬೈಕ್ ನಿಯಂತ್ರಣ ತಪ್ಪಿ ಸುಮಾರು 50 ಮೀಟರ್‌ಗಳಷ್ಟು ದೂರ ರಸ್ತೆಯಲ್ಲಿ ಎಳೆಯಲ್ಪಟ್ಟಿದೆ. ಘಟನೆಯಲ್ಲಿ ಸವಾರನಿಗೆ ತಲೆಯ ಭಾಗಕ್ಕೆ ತೀವ್ರ ಪೆಟ್ಟಾಗಿದ್ದು, ಆತನ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ. ಬೈಕ್ ಸವಾರ ಪುತ್ತೂರು ಮೂಲದವನೆಂದು ಗುರುತಿಸಲಾಗಿದೆ.

ಮಾನವೀಯತೆ ಮೆರೆದ ಪ್ರತಾಪ್:

ಅಪಘಾತದ ನಂತರ ರಸ್ತೆಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಸವಾರನನ್ನು ಕಂಡು ಜನಸ್ತೋಮ ಜಮಾಯಿಸಿದ್ದರೂ, ಯಾರೂ ಸಹಾಯಕ್ಕೆ ಬಂದಿರಲಿಲ್ಲ. ಈ ಸಂದರ್ಭದಲ್ಲಿ ಕಾಶಿಮಠ ನಿವಾಸಿ ಪ್ರತಾಪ್ ಎಂಬುವವರು ತಕ್ಷಣ ಕಾರ್ಯಪ್ರವೃತ್ತರಾಗಿ, ಗಾಯಾಳುವನ್ನು ತಮ್ಮದೇ ದ್ವಿಚಕ್ರ ವಾಹನದಲ್ಲಿ ಕೂರಿಸಿಕೊಂಡು ಖಾಸಗಿ ಆಸ್ಪತ್ರೆಗೆ ದಾಖಲಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಅವರ ಈ ಸಮಯೋಚಿತ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

ಸ್ಥಳಕ್ಕೆ ಭೇಟಿ :

ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ವಿಟ್ಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.

You may also like

News

ಪುತ್ತೂರು ರಸ್ತೆ ಅಪಘಾತದಲ್ಲಿ ಅಂಚೆ ಇಲಾಖೆ ಸಿಬ್ಬಂದಿ ಮಮತಾ ದುರ್ಮರಣ

ಪುತ್ತೂರು ಮುಕ್ರಂಪಾಡಿಯಲ್ಲಿ ಸ್ಕೂಟರ್ ಮತ್ತು ಆಟೋ ರಿಕ್ಷಾ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪುತ್ತೂರು ಅಂಚೆ ಇಲಾಖೆಯ ಪೋಸ್ಟಲ್ ಅಸಿಸ್ಟೆಂಟ್ ಮಮತಾ ಅವರು ಚಿಕಿತ್ಸೆ
News

Inauguration of RGUHS Mangaluru Zone Throwball (M&W) Tournament 2026-27 at Father Muller Homoeopathic Medical College Deralakatte

RGUHS Mangaluru Zone Throwball (M&W) Tournament 2026-27 was hosted by Father Muller Homoeopathic Medical College, Deralakatte on 17th October 2026.

You cannot copy content of this page