October 18, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ನಗದು ಕಳವು ಪ್ರಕರಣದ ಕ್ಷೀಪ್ರ ಭೇದನೆ – ಕುಖ್ಯಾತ ಕಳ್ಳ ‘ಜಾಕಿ’ ಬಂಧನ

ಕೇವಲ 24 ಗಂಟೆಗಳಲ್ಲಿ ಭೇದಿಸಿದ ಮಂಗಳೂರು ಉತ್ತರ ಪೊಲೀಸರು

ಮಂಗಳೂರು: ವಾಹನವೊಂದರ ಡ್ಯಾಶ್‌ಬೋರ್ಡ್‌ನಲ್ಲಿದ್ದ ಲಕ್ಷಾಂತರ ರೂಪಾಯಿ ನಗದು ಕಳವು ಮಾಡಿದ ಪ್ರಕರಣವನ್ನು ಮಂಗಳೂರು ಉತ್ತರ ಪೊಲೀಸರು ಕೇವಲ 24 ಗಂಟೆಗಳಲ್ಲಿ ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕುಖ್ಯಾತ ಆರೋಪಿ 38 ವರ್ಷ ಪ್ರಾಯದ ಝಾಕೀರ್ ಹುಸೈನ್ @ ಜಾಕಿ ಎಂಬಾತನನ್ನು ಬಂಧಿಸಿ, ಕಳವು ಮಾಡಿದ ಹಣ ಹಾಗೂ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಘಟನೆಯ ಹಿನ್ನೆಲೆ:

ದಿನಾಂಕ 07-02-2026 ರಂದು ಮಹಮ್ಮದ್ ನಿಜಾಮುದ್ದಿನ್ ಎಂಬವರು ಅಡಿಕೆ ಮಾರಾಟ ಮಾಡಿದ ರೂಪಾಯಿ 1,28,740/- ಹಣವನ್ನು ತಮ್ಮ ಟಾಟಾ ಇಂಟ್ರಾ ವಾಹನದ ಡ್ಯಾಶ್‌ಬೋರ್ಡ್‌ನಲ್ಲಿ ಇರಿಸಿದ್ದರು. ಬಂದರ್‌ನ ಜೆ.ಎಂ. ರೋಡ್ ಬಳಿ ಎಸಿಪಿ ಶೀಟ್ ಖರೀದಿ ಮಾಡಿ ವಾಪಸ್ ಬಂದು ನೋಡಿದಾಗ ಹಣ ಕಳವಾಗಿರುವುದು ಬೆಳಕಿಗೆ ಬಂದಿತ್ತು. ಈ ಕುರಿತು ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪೊಲೀಸರ ಕ್ಷೀಪ್ರ ಕಾರ್ಯಾಚರಣೆ:

ನಗರ ಪೊಲೀಸ್ ಕಮಿಷನರ್ ಮಾರ್ಗದರ್ಶನದಲ್ಲಿ ಕಾರ್ಯಪ್ರವೃತ್ತರಾದ ಇನ್ಸ್‌ಪೆಕ್ಟರ್ ಸಚಿನ್ ಕುಮಾರ್, ಸಬ್ ಇನ್ಸ್‌ಪೆಕ್ಟರ್ ಶೀತಲ್ ಅಲಗೂರು ಮತ್ತು ತಂಡವು ಫೆಬ್ರವರಿ 8ರಂದು ಭಾನುವಾರ ನಗರದ ಮಣ್ಣಗುಡ್ಡ ಜಂಕ್ಷನ್ ಬಳಿ ಆರೋಪಿಯನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದೆ.

ವಶಪಡಿಸಿಕೊಂಡ ಸೊತ್ತುಗಳು:

ಬಂಧಿತ ಆರೋಪಿ ಝಾಕೀರ್ ಹುಸೈನ್‌ನಿಂದ ಪೊಲೀಸರು ಈ ಕೆಳಗಿನವುಗಳನ್ನು ವಶಪಡಿಸಿಕೊಂಡಿದ್ದಾರೆ:

* ರೂಪಾಯಿ 70,000/- ನಗದು ಹಣ.

* ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನ.

* ಕಳ್ಳತನದ ಹಣದಿಂದ ಖರೀದಿಸಿದ್ದ ಹೊಸ ವಿವೋ (Vivo) ಮೊಬೈಲ್ ಫೋನ್.

ಹಲವು ಪ್ರಕರಣಗಳಲ್ಲಿ ಭಾಗಿಯಾದ ಕಿಲಾಡಿ:

ಬಂಧಿತ ಆರೋಪಿ ‘ಜಾಕಿ’ ಒಬ್ಬ ಹಳೆ ಕ್ರಿಮಿನಲ್ ಆಗಿದ್ದು, ಈತನ ವಿರುದ್ಧ ಈ ಹಿಂದೆ ಪಾಂಡೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆಟೋ ರಿಕ್ಷಾದಿಂದ ಹಣ ಕಳವು ಮಾಡಿದ ಪ್ರಕರಣ ಮತ್ತು ಉಡುಪಿ ಜಿಲ್ಲೆಯ ಕುಂದಾಪುರ ಪೊಲೀಸ್ ಠಾಣೆಯಲ್ಲಿ ರಾತ್ರಿ ವೇಳೆ ಮನೆಗಳ್ಳತನ ಮಾಡಿದ ಪ್ರಕರಣಗಳು ದಾಖಲಾಗಿವೆ. ಪ್ರಸ್ತುತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

You may also like

News

ಪುತ್ತೂರು ರಸ್ತೆ ಅಪಘಾತದಲ್ಲಿ ಅಂಚೆ ಇಲಾಖೆ ಸಿಬ್ಬಂದಿ ಮಮತಾ ದುರ್ಮರಣ

ಪುತ್ತೂರು ಮುಕ್ರಂಪಾಡಿಯಲ್ಲಿ ಸ್ಕೂಟರ್ ಮತ್ತು ಆಟೋ ರಿಕ್ಷಾ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪುತ್ತೂರು ಅಂಚೆ ಇಲಾಖೆಯ ಪೋಸ್ಟಲ್ ಅಸಿಸ್ಟೆಂಟ್ ಮಮತಾ ಅವರು ಚಿಕಿತ್ಸೆ
News

Inauguration of RGUHS Mangaluru Zone Throwball (M&W) Tournament 2026-27 at Father Muller Homoeopathic Medical College Deralakatte

RGUHS Mangaluru Zone Throwball (M&W) Tournament 2026-27 was hosted by Father Muller Homoeopathic Medical College, Deralakatte on 17th October 2026.

You cannot copy content of this page