October 18, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸೈಂಟ್ ಮೇರಿಸ್ ಶಾಲೆಯಲ್ಲಿ ‘ಕನ್ನಡದ ನಡಿಗೆ ಶಾಲೆಯ ಕಡೆಗೆ’ ಸಾಹಿತ್ಯ ಅಭಿಯಾನ

“ವಿದ್ಯಾರ್ಥಿ ದೆಸೆಯಲ್ಲಿಯೇ ಕನ್ನಡ ಸಾಹಿತ್ಯದ ಬಗ್ಗೆ ಒಲವು ಮತ್ತು ಆಸಕ್ತಿಯನ್ನು ಬೆಳೆಸಿಕೊಳ್ಳುವುದು ಇಂದಿನ ಅಗತ್ಯ” – ಡಾ. ವಾಮನ್ ರಾವ್ ಬೇಕಲ್

ಮಂಗಳೂರು: ಕನ್ನಡ ಭವನ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ವಿದ್ಯಾರ್ಥಿಗಳಲ್ಲಿ ಸಾಹಿತ್ಯದ ಬಗ್ಗೆ ಆಸಕ್ತಿ ಮೂಡಿಸುವ ನಿಟ್ಟಿನಲ್ಲಿ ‘ಕನ್ನಡದ ನಡಿಗೆ ಶಾಲೆಯ ಕಡೆಗೆ’ ಎಂಬ ಏಕದಿನ ಸಾಹಿತ್ಯ ಅಭಿಯಾನವು ಮಂಗಳೂರಿನ ಪಳ್ನೀರಿನ ಸೈಂಟ್ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಫೆಬ್ರವರಿ 10ರಂದು ಮಂಗಳವಾರ ಯಶಸ್ವಿಯಾಗಿ ನಡೆಯಿತು.

ಮಧ್ಯಾಹ್ನ 2:00 ಗಂಟೆಗೆ ಶಾಲಾ ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷರಾದ ರೇಖಾ ಸುದೇಶ್ ರಾವ್ ಅವರು ಎಲ್ಲರನ್ನೂ ಸ್ವಾಗತಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಸಿಂತಿಯ ಡಿಸೋಜ ಅವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ದಕ್ಷಿಣ ಕನ್ನಡ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷರಾದ ಉಮೇಶ್ ರಾವ್ ಕುಂಬಳೆ ಅವರು ಪ್ರಾಸ್ತಾವಿಕ ನುಡಿಗಳನ್ನಾಡುತ್ತಾ ಅಭಿಯಾನದ ಉದ್ದೇಶವನ್ನು ವಿವರಿಸಿದರು. ಕಾಸರಗೋಡಿನ ಕನ್ನಡ ಭವನ ಮತ್ತು ಗ್ರಂಥಾಲಯದ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಹಿತನುಡಿಗಳನ್ನು ಹಂಚಿಕೊಂಡರು. “ವಿದ್ಯಾರ್ಥಿ ದೆಸೆಯಲ್ಲಿಯೇ ಕನ್ನಡ ಸಾಹಿತ್ಯದ ಬಗ್ಗೆ ಒಲವು ಮತ್ತು ಆಸಕ್ತಿಯನ್ನು ಬೆಳೆಸಿಕೊಳ್ಳುವುದು ಇಂದಿನ ಅಗತ್ಯವಾಗಿದೆ” ಎಂದು ಅವರು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಕನ್ನಡ ಭವನ ಕಾಸರಗೋಡಿನ ಸಂಚಾಲಕಿ ಸಂಧ್ಯಾ ರಾಣಿ ಟೀಚರ್ ಉಪಸ್ಥಿತರಿದ್ದರು. ಶಿಕ್ಷಕಿ ಲವೀನ ಅನಿಟ ಡಿಸೋಜ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.

ಕಾರ್ಯಕ್ರಮದ ಮುಖ್ಯಾಂಶಗಳು:

* ಸುಮಾರು 35ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉತ್ಸಾಹದಿಂದ ಕವನ ವಾಚನ ಹಾಗೂ ರಸಪ್ರಶ್ನೆ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು.

* ಕವನ ವಾಚನ ಮಾಡಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಪತ್ರಗಳನ್ನು ವಿತರಿಸಿ ಪ್ರೋತ್ಸಾಹಿಸಲಾಯಿತು.

* ಇದೇ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಸಿಂತಿಯ ಡಿಸೋಜ ಹಾಗೂ ಶಿಕ್ಷಕಿ ಲವೀನ ಅನಿಟ ಡಿಸೋಜ ಅವರನ್ನು ಕನ್ನಡ ಭವನ ಜಿಲ್ಲಾ ಘಟಕದ ವತಿಯಿಂದ ಆತ್ಮೀಯವಾಗಿ ಗೌರವಿಸಲಾಯಿತು.

ಕೊನೆಯಲ್ಲಿ ಶಿಕ್ಷಕಿ ಶ್ರೀಲಕ್ಷ್ಮಿ ಕೀಕಾನ ವಂದಿಸಿದರು. ರೇಖಾ ಸುದೇಶ್ ರಾವ್ ಅವರು ಧನ್ಯವಾದ ಸಮರ್ಪಣೆ ಮಾಡಿದರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮವು ಮಕ್ತಾಯಗೊಂಡಿತು.

 

You may also like

News

ಪುತ್ತೂರು ರಸ್ತೆ ಅಪಘಾತದಲ್ಲಿ ಅಂಚೆ ಇಲಾಖೆ ಸಿಬ್ಬಂದಿ ಮಮತಾ ದುರ್ಮರಣ

ಪುತ್ತೂರು ಮುಕ್ರಂಪಾಡಿಯಲ್ಲಿ ಸ್ಕೂಟರ್ ಮತ್ತು ಆಟೋ ರಿಕ್ಷಾ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪುತ್ತೂರು ಅಂಚೆ ಇಲಾಖೆಯ ಪೋಸ್ಟಲ್ ಅಸಿಸ್ಟೆಂಟ್ ಮಮತಾ ಅವರು ಚಿಕಿತ್ಸೆ
News

Inauguration of RGUHS Mangaluru Zone Throwball (M&W) Tournament 2026-27 at Father Muller Homoeopathic Medical College Deralakatte

RGUHS Mangaluru Zone Throwball (M&W) Tournament 2026-27 was hosted by Father Muller Homoeopathic Medical College, Deralakatte on 17th October 2026.

You cannot copy content of this page