May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

MLC ಮಂಜುನಾಥ ಭಂಡಾರಿ ಆರೋಗ್ಯ ವಿಚಾರಿಸಿದ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಅನಾರೋಗ್ಯದ ಕಾರಣದಿಂದಾಗಿ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಅವರನ್ನು AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಫೆಬ್ರವರಿ 16ರಂದು ಸೋಮವಾರ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

ಪತ್ನಿ ಸಮೇತ ಭೇಟಿ ನೀಡಿದ ಖರ್ಗೆ:

ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಪತ್ನಿಯೊಂದಿಗೆ ಆಸ್ಪತ್ರೆಗೆ ಭೇಟಿ ನೀಡಿ, ಗುಣಮುಖರಾಗುತ್ತಿರುವ ಮಂಜುನಾಥ ಭಂಡಾರಿ ಅವರ ಯೋಗಕ್ಷೇಮ ವಿಚಾರಿಸಿದರು. ಇದೇ ಸಂದರ್ಭದಲ್ಲಿ ಚಿಕಿತ್ಸೆ ನೀಡುತ್ತಿರುವ ಖ್ಯಾತ ವೈದ್ಯರಾದ ಡಾ. ದೇವಿಪ್ರಸಾದ್ ಶೆಟ್ಟಿ ಅವರೊಂದಿಗೆ ಭಂಡಾರಿಯವರ ಆರೋಗ್ಯ ಸ್ಥಿತಿಗತಿಯ ಬಗ್ಗೆ ಸಮಾಲೋಚನೆ ನಡೆಸಿದರು.

ಶೀಘ್ರ ಗುಣಮುಖರಾಗಲು ಹಾರೈಕೆ:

ಮಂಜುನಾಥ ಭಂಡಾರಿ ಅವರು ಶೀಘ್ರವಾಗಿ ಚೇತರಿಸಿಕೊಂಡು ಮತ್ತೆ ಸಕ್ರಿಯವಾಗಿ ಜನಸೇವೆಯಲ್ಲಿ ತೊಡಗಿಸಿಕೊಳ್ಳಲಿ ಎಂದು ಖರ್ಗೆ ಅವರು ಈ ಸಂದರ್ಭದಲ್ಲಿ ಶುಭ ಹಾರೈಸಿದರು. ಭೇಟಿಯ ವೇಳೆ ಮಂಜುನಾಥ ಭಂಡಾರಿ ಅವರ ಕುಟುಂಬ ಸದಸ್ಯರು ಉಪಸ್ಥಿತರಿದ್ದರು.

You may also like

News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು
News

ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಮೂಲಭೂತ ಸೌಕರ್ಯ ಒದಗಿಸಲು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ MLC ಐವನ್ ಡಿಸೋಜ

ಕರಾವಳಿ ಕರ್ನಾಟಕದ ಜನರ ದಶಕಗಳ ಬೇಡಿಕೆಯಾಗಿರುವ ಹೈಕೋರ್ಟ್ ಸಂಚಾರಿ ಪೀಠವನ್ನು ಮಂಗಳೂರಿನಲ್ಲಿ ಸ್ಥಾಪಿಸುವ ಪ್ರಕ್ರಿಯೆಗೆ ವೇಗ ನೀಡುವ ನಿಟ್ಟಿನಲ್ಲಿ, ಹೋರಾಟ ಸಮಿತಿಯ ಸಂಚಾಲಕ ಹಾಗೂ ಶಾಸಕ MLC

You cannot copy content of this page