ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯ ಶವ ವಿಟ್ಲದ ಗುರುಕುಲದ ಕೆರೆಯಲ್ಲಿ ಪತ್ತೆ
ಬಂಟ್ವಾಳ ತಾಲೂಕಿನ ವಿಟ್ಲದ ಗುರುಕುಲವೊಂದರಲ್ಲಿ ಸಂಸ್ಕೃತ ಶಿಕ್ಷಣ ಪಡೆಯುತ್ತಿದ್ದ ಅಪ್ರಾಪ್ತ ಬಾಲಕಿಯೋರ್ವಳು ನಾಪತ್ತೆಯಾದ ಮರುದಿನವೇ ಶವವಾಗಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಸಂಭವಿಸಿದೆ.

ಪ್ರಕರಣದ ಹಿನ್ನೆಲೆ:
ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಯಾದ ದೂರುದಾರರ ಮಗಳು ಗುರುಕುಲದಲ್ಲಿ ಕಲಿಯುತ್ತಿದ್ದರು. ಫೆಬ್ರವರಿ 22ರ ಭಾನುವಾರ ಸಂಜೆ ಬಾಲಕಿಯು ಶಾಲೆಯಲ್ಲಿ ಪತ್ರವೊಂದನ್ನು ಬರೆದಿಟ್ಟು ನಾಪತ್ತೆಯಾಗಿದ್ದರು. ಈ ಬಗ್ಗೆ ಬಾಲಕಿಯ ಪೋಷಕರು ನೀಡಿದ ದೂರಿನ ಮೇರೆಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 44/2026, ಕಲಂ: 137(2) BNS 2023 ರಡಿ ಪ್ರಕರಣ ದಾಖಲಾಗಿತ್ತು.

ಕೆರೆಯಲ್ಲಿ ಪತ್ತೆಯಾದ ಮೃತದೇಹ:
ನಾಪತ್ತೆಯಾದ ಬಾಲಕಿಗಾಗಿ ಪೊಲೀಸರು ತನಿಖೆ ಮುಂದುವರಿಸಿದ್ದ ಸಂದರ್ಭದಲ್ಲಿ ಇಂದು ಫೆಬ್ರವರಿ 23ರ ಸೋಮವಾರ ಬೆಳಿಗ್ಗೆ ಅವಳು ಕಲಿಯುತ್ತಿದ್ದ ಗುರುಕುಲದ ಆವರಣದಲ್ಲಿರುವ ಕೆರೆಯಲ್ಲಿ ಮೃತದೇಹ ಪತ್ತೆಯಾಗಿದೆ.


ಪೊಲೀಸ್ ತನಿಖೆ:
ಮೃತದೇಹ ಪತ್ತೆಯಾದ ಬೆನ್ನಲ್ಲೇ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಈ ಘಟನೆಗೆ ಸಂಬಂಧಿಸಿದಂತೆ ಯುಡಿಆರ್ (UDR): 03/2026 ಕಲಂ: 194(1) BNSS 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.




