October 17, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪಳ್ಳಿ ಗ್ರಾಮದ ಕೊಡಿಮಲೆ ಎಂಬಲ್ಲಿ ಅಕ್ರಮ ಫಿಶ್ ಮೀಲ್ ಘಟಕಕ್ಕೆ ಗ್ರಾಮಸ್ಥರ ತೀವ್ರ ವಿರೋಧ

ಬೀಗ ಜಡಿಯುವ ಭರವಸೆ ನೀಡಿದ ಕಾರ್ಕಳ ತಹಶೀಲ್ದಾರ್

ಕಾಮಗಾರಿಯನ್ನು ತಕ್ಷಣವೇ ಸ್ಥಗಿತಗೊಳಿಸುವಂತೆ ನೋಟಿಸು ಜಾರಿ

ಕಾರ್ಕಳ ತಾಲೂಕಿನ ಪಳ್ಳಿ ಗ್ರಾಮದ ಕೊಡಿಮಲೆ ಎಂಬಲ್ಲಿ ಯಾವುದೇ ಅಧಿಕೃತ ಪರವಾನಗಿ ಇಲ್ಲದೆ ನಿರ್ಮಾಣವಾಗುತ್ತಿದ್ದ ‘ಫಿಶ್ ಮೀಲ್’ (ಮೀನಿನ ಪುಡಿ ತಯಾರಿಕಾ ಘಟಕ) ವಿರುದ್ಧ ಗ್ರಾಮಸ್ಥರು ಇಂದು ಫೆಬ್ರವರಿ 23ರಂದು ಸೋಮವಾರ ಪಳ್ಳಿ ಪಂಚಾಯತ್ ಮುಂಭಾಗ ಬೃಹತ್ ಪ್ರತಿಭಟನೆ ನಡೆಸಿದರು. ಪ್ರತಿಭಟನೆಗೆ ಮಣಿದ ಅಧಿಕಾರಿಗಳು ಘಟಕಕ್ಕೆ ಬೀಗ ಜಡಿಯುವ ಭರವಸೆ ನೀಡಿದ್ದಾರೆ.

 

ಘಟನೆಯ ವಿವರ:

ಪಡುಬಿದ್ರಿಯಿಂದ ಸ್ಥಳಾಂತರಗೊಂಡು ಇಲ್ಲಿ ಸ್ಥಾಪನೆಯಾಗುತ್ತಿದ್ದ ಈ ಘಟಕವು ಪರಿಸರಕ್ಕೆ ಮಾರಕವಾಗಲಿದೆ ಎಂದು ಆರೋಪಿಸಿ ಗ್ರಾಮಸ್ಥರು ಪಂಚಾಯತ್ ಸದಸ್ಯರ ನೇತೃತ್ವದಲ್ಲಿ ಆಕ್ರೋಶ ವ್ಯಕ್ತಪಡಿಸಿದರು. ಕಂದಾಯ ಸರ್ವೆ ನಂ. 229/1ರ 3.60 ಎಕರೆ ಜಾಗದಲ್ಲಿ ಈ ಕಾಮಗಾರಿ ನಡೆಯುತ್ತಿದ್ದು, ಇದಕ್ಕೆ ಯಾವುದೇ ಇ-ಖಾತಾ, ಭೂಪರಿವರ್ತನೆ ಅಥವಾ ಪಂಚಾಯತ್ ಪರವಾನಗಿ ಇರಲಿಲ್ಲ ಎಂಬುದು ಅಧಿಕಾರಿಗಳ ತಪಾಸಣೆಯಲ್ಲಿ ದೃಢಪಟ್ಟಿದೆ.

ಅಧಿಕಾರಿಗಳ ಭೇಟಿ ಮತ್ತು ಪತ್ತೆಯಾದ ಅಕ್ರಮಗಳು:

ಪ್ರತಿಭಟನಾ ಸ್ಥಳಕ್ಕೆ ಕಾರ್ಕಳ ತಹಶೀಲ್ದಾರ್ ಪ್ರದೀಪ್, ಪಿಡಿಒ ಪ್ರಮೀಳಾ ನಾಯಕ್ ಹಾಗೂ ವಿಎ ಅಭಿಷೇಕ್ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಈ ಕೆಳಗಿನ ಅಕ್ರಮಗಳು ಬೆಳಕಿಗೆ ಬಂದಿವೆ:

* ಅಕ್ರಮ ವಿದ್ಯುತ್ ಬಳಕೆ: ಕೃಷಿ ಬಾವಿಗೆ ನೀಡಲಾಗಿದ್ದ ವಿದ್ಯುತ್ ಸಂಪರ್ಕವನ್ನು ನಿಯಮಬಾಹಿರವಾಗಿ ಕಟ್ಟಡ ನಿರ್ಮಾಣಕ್ಕೆ ಬಳಸಲಾಗುತ್ತಿತ್ತು.

* ಪರವಾನಗಿ ರಹಿತ ಕಾಮಗಾರಿ: ಯಾವುದೇ ಕಟ್ಟಡ ಪರವಾನಗಿ ಇಲ್ಲದೆ ಕಾಮಗಾರಿ ಆರಂಭಿಸಲಾಗಿತ್ತು.

* ಮರಗಳ ಮಾರಣಹೋಮ: ಅರಣ್ಯ ಇಲಾಖೆಯ ಅನುಮತಿ ಪಡೆಯದೆ ಜಮೀನಿನಲ್ಲಿದ್ದ ಮರಗಳನ್ನು ಕಡಿಯಲಾಗಿತ್ತು.

ತಕ್ಷಣದ ಕ್ರಮ:

ಗ್ರಾಮಸ್ಥರ ಅಹವಾಲು ಸ್ವೀಕರಿಸಿದ ತಹಶೀಲ್ದಾರ್ ಪ್ರದೀಪ್ ಅವರು ಘಟಕವನ್ನು ಬಂದ್ ಮಾಡುವುದಾಗಿ ಭರವಸೆ ನೀಡಿದ್ದಾರೆ. ಅಲ್ಲದೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಕಾಮಗಾರಿ ಸ್ಥಗಿತಗೊಳಿಸುವಂತೆ ನೋಟೀಸು ಜಾರಿ ಮಾಡಿದ್ದು, ಅಕ್ರಮ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ಮೆಸ್ಕಾಂಗೆ ಪತ್ರ ಬರೆದಿದ್ದಾರೆ.

ಒಂದು ವೇಳೆ ಘಟಕವನ್ನು ಸಂಪೂರ್ಣವಾಗಿ ನಿಲ್ಲಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಊರಿನ ಗಣ್ಯರು ಹಾಗೂ ನೂರಾರು ಗ್ರಾಮಸ್ಥರು ಉಪಸ್ಥಿತರಿದ್ದರು.

You may also like

News

ಕೋಮುದ್ವೇಷದ ಭಾಷಣ ಆರೋಪ – ಜಗದೀಶ್ ಕಾರಂತ್ ಹಾಗೂ ಶ್ರೀಕಾಂತ್ ಶೆಟ್ಟಿಗೆ ನಿರೀಕ್ಷಣಾ ಜಾಮೀನು

ಪುತ್ತೂರಿನ ವಕೀಲರಾದ ಮಹೇಶ್ ಕಜೆ ಅವರು ಮಂಡಿಸಿದ ವಾದ ಕೋಮುದ್ವೇಷದ ಭಾಷಣ ಮಾಡಿದ ಆರೋಪಕ್ಕೆ ಸಂಬಂಧಿಸಿದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಹಿಂದೂ ಸಂಘಟನೆಗಳ ಮುಖಂಡರಾದ ಜಗದೀಶ್ ಕಾರಂತ್
News

MBA ಬಳಿಕ ಕೃಷಿಯತ್ತ ಮುಖ ಮಾಡಿದ ಯುವತಿ – 25 ಎಕರೆ ಹೈಟೆಕ್ ಕೃಷಿಯಿಂದ ₹4 ಕೋಟಿ ವಹಿವಾಟು

ಎಂಬಿಎ ಪದವಿ, ಕಾರ್ಪೊರೇಟ್ ಉದ್ಯೋಗದ ಅವಕಾಶಗಳನ್ನು ಬದಿಗಿಟ್ಟು ಕೃಷಿಯನ್ನೇ ಉದ್ಯಮವಾಗಿಸಿಕೊಂಡ 27 ವರ್ಷದ ಯುವತಿ ಪ್ರಣೀತಾ ವಾಮನ್ ಇಂದು ಯಶಸ್ವಿ ಕೃಷಿಕ ಉದ್ಯಮಿಯಾಗಿ ಗುರುತಿಸಿಕೊಂಡಿದ್ದಾರೆ. ಮಹಾರಾಷ್ಟ್ರದ ಪುಣೆ

You cannot copy content of this page