September 22, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಎರಡು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಪ್ರಕರಣವೊಂದರ ಆರೋಪಿಯನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ಕನ್ಯಾನ ನಿವಾಸಿ ಇಬ್ರಾಹಿಂ ಬಾತೀಸ್ ಬಂಧಿತ ಆರೋಪಿ.

ಪ್ರಕರಣದ ಹಿನ್ನೆಲೆ:

2019ರಲ್ಲಿ ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅಕ್ರಮ ಸಂಖ್ಯೆ 193/2019 ಪ್ರಕರಣದಲ್ಲಿ ಇಬ್ರಾಹಿಂ ಆರೋಪಿಯಾಗಿದ್ದನು. ಈತನ ಮೇಲೆ ಐಪಿಸಿ ಕಲಂ 427, 504, 394, 341 ಮತ್ತು ಸಾರ್ವಜನಿಕ ಆಸ್ತಿ ಪಾಸ್ತಿ ನಾಶ ತಡೆ ಕಾಯ್ದೆ 2(A) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ, ಕಳೆದ ಎರಡು ವರ್ಷಗಳಿಂದ ಈತ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶಕ್ಕೆ ತೆರಳಿ ತಲೆಮರೆಸಿಕೊಂಡಿದ್ದನು.

ಬಂಧನ ಕಾರ್ಯಾಚರಣೆ:

ದಿನಾಂಕ 24/02/2026 ರಂದು ಆರೋಪಿಯು ವಿದೇಶದಿಂದ ಮರಳಿ ಬರುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಮಂಗಳೂರು ವಿಮಾನ ನಿಲ್ದಾಣದ ಇಮಿಗ್ರೇಶನ್ ವಿಭಾಗದ ಅಧಿಕಾರಿಗಳ ಸಹಕಾರದೊಂದಿಗೆ, ವಿಟ್ಲ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ (HC 668) ಮತ್ತು ಕಾನ್ಸ್ಟೇಬಲ್ (PC 2465) ಅವರು ವಿಮಾನ ನಿಲ್ದಾಣದಲ್ಲೇ ಆರೋಪಿಯನ್ನು ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ನ್ಯಾಯಾಂಗ ಬಂಧನ:

ಬಂಧಿತ ಆರೋಪಿಯನ್ನು ಮಾನ್ಯ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ದಿನಾಂಕ 07.03.2026 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

You may also like

News

BPL ಕುಟುಂಬಗಳಿಗೆ ಉಚಿತ ರಕ್ತ: ಮುಂದಿನ ವರ್ಷದಿಂದ ಯೋಜನೆ ಜಾರಿ – ಸಿಎ ಶಾಂತಾರಾಮ ಶೆಟ್ಟಿ

ಜಿಲ್ಲೆಯ ಯಾವುದೇ ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ BPL ಕಾರ್ಡ್‌ದಾರರಿಗೆ ಉಚಿತವಾಗಿ ರಕ್ತ ಪೂರೈಸುವ ಯೋಜನೆಯನ್ನು ಮುಂದಿನ ವರ್ಷದಿಂದ ಜಾರಿಗೊಳಿಸಲು ದಕ್ಷಿಣ ಕನ್ನಡ ಜಿಲ್ಲಾ
News

Free Speech and Hearing Camp inaugurated at Father Muller

A Free Speech and Hearing Camp, organized by Father Muller Medical College Hospital on the occasion of International Hearing-Impaired Week,

You cannot copy content of this page