October 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ದಕ್ಷಿಣ ಕನ್ನಡಕ್ಕೆ ಬಜೆಟ್ ಕೊಡುಗೆ – ಮಾಣಿಯಲ್ಲಿ ನೂತನ ಪೊಲೀಸ್ ಠಾಣೆ ಸ್ಥಾಪನೆಗೆ ಅಧಿಕೃತ ಮುದ್ರೆ

ಬಹುಕಾಲದ ಬೇಡಿಕೆಗೆ ಸ್ಪಂದನೆ ಮಾಡಿದ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್

ರಾಜ್ಯ ಸರ್ಕಾರವು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಜನತೆಯ ಬಹುಕಾಲದ ಬೇಡಿಕೆಯಾಗಿದ್ದ ಬಂಟ್ವಾಳ ತಾಲೂಕಿನ ಮಾಣಿ (Mani) ಗ್ರಾಮದಲ್ಲಿ ನೂತನ ಪೊಲೀಸ್ ಠಾಣೆಯನ್ನು ಸ್ಥಾಪಿಸಲು ಅಧಿಕೃತವಾಗಿ ಅನುಮೋದನೆ ನೀಡಲಾಗಿದೆ.

ಬಜೆಟ್ ಪ್ರತಿಯ ಅನುಬಂಧ-8ರ ಕಂಡಿಕೆ 464ರ ಅನ್ವಯ, ರಾಜ್ಯದಲ್ಲಿ ಹೊಸದಾಗಿ ಪ್ರಾರಂಭವಾಗಲಿರುವ ಪೊಲೀಸ್ ಠಾಣೆಗಳ ಪಟ್ಟಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಾಣಿ ಪೊಲೀಸ್ ಠಾಣೆಗೆ ಮೊದಲ ಆದ್ಯತೆ ನೀಡಲಾಗಿದೆ. ಗೃಹ ಇಲಾಖೆಯ (ಒಳಾಡಳಿತ) ಅಡಿಯಲ್ಲಿ ಈ ಠಾಣೆಯು ಕಾರ್ಯನಿರ್ವಹಿಸಲಿದ್ದು, ಈ ಭಾಗದ ಕಾನೂನು ಸುವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಇದು ಪ್ರಮುಖ ಹೆಜ್ಜೆಯಾಗಿದೆ.

ಹೆಚ್ಚಿದ ಭದ್ರತೆ:

ಮಾಣಿ ಭಾಗವು ರಾಷ್ಟ್ರೀಯ ಹೆದ್ದಾರಿಯ ಪ್ರಮುಖ ಜಂಕ್ಷನ್ ಆಗಿರುವುದರಿಂದ ಮತ್ತು ದಿನೇ ದಿನೇ ಬೆಳೆಯುತ್ತಿರುವ ಜನಸಂಖ್ಯೆಯ ಹಿನ್ನೆಲೆಯಲ್ಲಿ ಇಲ್ಲಿ ಪ್ರತ್ಯೇಕ ಪೊಲೀಸ್ ಠಾಣೆಯ ಅಗತ್ಯವಿತ್ತು. ಸರ್ಕಾರದ ಈ ನಿರ್ಧಾರದಿಂದ ಸ್ಥಳೀಯ ನಿವಾಸಿಗಳಿಗೆ ಹಾಗೂ ಪ್ರಯಾಣಿಕರಿಗೆ ಹೆಚ್ಚಿನ ಸುರಕ್ಷತೆ ದೊರೆಯಲಿದ್ದು, ಅಪರಾಧ ತಡೆಗಟ್ಟುವಿಕೆಗೆ ಸಹಕಾರಿಯಾಗಲಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾಣಿ ಮಾತ್ರವಲ್ಲದೆ, ‘ಸಜೀಪನಡು’ವಿನಲ್ಲೂ ನೂತನ ಪೊಲೀಸ್ ಠಾಣೆ ಸ್ಥಾಪನೆಗೆ ಬಜೆಟ್‌ನಲ್ಲಿ ಅವಕಾಶ ಕಲ್ಪಿಸಲಾಗಿದೆ. ಸರ್ಕಾರದ ಈ ಘೋಷಣೆಗೆ ಸ್ಥಳೀಯ ಸಾರ್ವಜನಿಕ ವಲಯದಿಂದ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ.

You may also like

News

ಕೋಮುದ್ವೇಷದ ಭಾಷಣ ಆರೋಪ – ಜಗದೀಶ್ ಕಾರಂತ್ ಹಾಗೂ ಶ್ರೀಕಾಂತ್ ಶೆಟ್ಟಿಗೆ ನಿರೀಕ್ಷಣಾ ಜಾಮೀನು

ಪುತ್ತೂರಿನ ವಕೀಲರಾದ ಮಹೇಶ್ ಕಜೆ ಅವರು ಮಂಡಿಸಿದ ವಾದ ಕೋಮುದ್ವೇಷದ ಭಾಷಣ ಮಾಡಿದ ಆರೋಪಕ್ಕೆ ಸಂಬಂಧಿಸಿದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಹಿಂದೂ ಸಂಘಟನೆಗಳ ಮುಖಂಡರಾದ ಜಗದೀಶ್ ಕಾರಂತ್
News

MBA ಬಳಿಕ ಕೃಷಿಯತ್ತ ಮುಖ ಮಾಡಿದ ಯುವತಿ – 25 ಎಕರೆ ಹೈಟೆಕ್ ಕೃಷಿಯಿಂದ ₹4 ಕೋಟಿ ವಹಿವಾಟು

ಎಂಬಿಎ ಪದವಿ, ಕಾರ್ಪೊರೇಟ್ ಉದ್ಯೋಗದ ಅವಕಾಶಗಳನ್ನು ಬದಿಗಿಟ್ಟು ಕೃಷಿಯನ್ನೇ ಉದ್ಯಮವಾಗಿಸಿಕೊಂಡ 27 ವರ್ಷದ ಯುವತಿ ಪ್ರಣೀತಾ ವಾಮನ್ ಇಂದು ಯಶಸ್ವಿ ಕೃಷಿಕ ಉದ್ಯಮಿಯಾಗಿ ಗುರುತಿಸಿಕೊಂಡಿದ್ದಾರೆ. ಮಹಾರಾಷ್ಟ್ರದ ಪುಣೆ

You cannot copy content of this page