October 15, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಇಫ್ತಾರ್ ಕೂಟದಿಂದ ವಾಪಸ್ಸಾಗುವಾಗ ದುರಂತ

ಸೈಕಲ್‌ನಿಂದ ಬಿದ್ದು 12 ವರ್ಷದ ಬಾಲಕ ಸಾವು

ಇಫ್ತಾರ್ ಕೂಟದಲ್ಲಿ ಪಾಲ್ಗೊಂಡು ಮನೆಗೆ ಮರಳುತ್ತಿದ್ದ ವೇಳೆ ಸೈಕಲ್‌ನಿಂದ ಬಿದ್ದು ಬಾಲಕನೋರ್ವ ಮೃತಪಟ್ಟಿರುವ ಮನಕಲಕುವ ಘಟನೆ ಕೊಳ್ನಾಡು ಗ್ರಾಮದ ತಾಳಿತ್ತನೂಜಿಯಲ್ಲಿ ನಡೆದಿದೆ.

ಘಟನೆಯ ವಿವರ:

ಕೊಳ್ನಾಡು ಗ್ರಾಮದ ತಾಳಿತ್ತನೂಜಿ ದೇವಸ್ಯ ನಿವಾಸಿ ಅಬೂಬಕ್ಕರ್ ಅವರ ಮೊಮ್ಮಗ, ಅಸ್ಮ ಅವರ ಪುತ್ರ 12 ವರ್ಷ ಪ್ರಾಯದ ಆಸೀಪ್ ಮೃತಪಟ್ಟ ದುರ್ದೈವಿ. ಇಂದು ಮಾರ್ಚ್ 6ರಂದು ಶುಕ್ರವಾರ ಸಂಜೆ ಮದರಸವೊಂದರಲ್ಲಿ ಆಯೋಜಿಸಲಾಗಿದ್ದ ಇಫ್ತಾರ್ ಕೂಟ ಮುಗಿಸಿ ಆಸೀಪ್ ತನ್ನ ಸೈಕಲ್‌ನಲ್ಲಿ ಮನೆಗೆ ಮರಳುತ್ತಿದ್ದನು. ಈ ವೇಳೆ ರಸ್ತೆಯ ತಿರುವಿನಲ್ಲಿ ಸೈಕಲ್ ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ, ಬಾಲಕನ ದೇಹದ ಒಳಭಾಗಕ್ಕೆ ತೀವ್ರ ಸ್ವರೂಪದ ಪೆಟ್ಟು ತಗುಲಿದೆ ಎನ್ನಲಾಗಿದೆ.

ಚಿಕಿತ್ಸೆ ಫಲಕಾರಿಯಾಗಲಿಲ್ಲ:

ಗಂಭೀರ ಸ್ಥಿತಿಯಲ್ಲಿದ್ದ ಬಾಲಕನನ್ನು ತಕ್ಷಣವೇ ತುಂಬೆಯ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅಷ್ಟರಲ್ಲಾಗಲೇ ಆತ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ಪ್ರತಿಭಾವಂತ ವಿದ್ಯಾರ್ಥಿ:

ಮೃತ ಆಸೀಪ್ ತಾಳಿತ್ತನೂಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಯಾಗಿದ್ದನು. ಓದಿನ ಜೊತೆಗೆ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸದಾ ಮುಂಚೂಣಿಯಲ್ಲಿದ್ದ ಪ್ರತಿಭಾವಂತ ಬಾಲಕನಾಗಿದ್ದನು ಎಂದು ಸ್ಥಳೀಯರು ಸ್ಮರಿಸಿದ್ದಾರೆ.

ತಾಯಿಗೆ ಏಕೈಕ ಮಗನಾಗಿದ್ದ ಆಸೀಪ್‌ನ ಅಕಾಲಿಕ ನಿಧನದಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದ್ದು, ಸ್ಥಳೀಯ ಗಣ್ಯರು ಹಾಗೂ ಸಾರ್ವಜನಿಕರು ಸಂತಾಪ ಸೂಚಿಸಿದ್ದಾರೆ.

You may also like

News

ಕಳ್ಳತನ ಪ್ರಕರಣ – ಒಂದೂವರೆ ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ವಿಟ್ಲ ಪೊಲೀಸರಿಂದ ಬಂಧನ

ಕಳ್ಳತನ ಪ್ರಕರಣದಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಒಂದೂವರೆ ವರ್ಷದಿಂದ ತಲೆಮರೆಸಿಕೊಂಡಿದ್ದ ಕೇರಳದ ಮಲಪ್ಪುರಂ ನಿವಾಸಿ ರಂಶೀದ್‌ನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ
News

Father Muller Medical College Hospital Showcases Green Healthcare Initiatives at NABH National Patient Safety Conference in Delhi

Selected for a national-level presentation, FMMCH highlights sustainable environmental practices, responsible resource management and resilience in healthcare delivery Father Muller

You cannot copy content of this page