October 15, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಧರ್ಮಸ್ಥಳಕ್ಕೆ ಸೋದೆ ಮಠದ ಶ್ರೀಗಳ ಭೇಟಿ – ಹೆಗ್ಗಡೆಯವರ ಬೀಡಿನಲ್ಲಿ ಪಾದಪೂಜೆ, ಗೌರವ ಸಮರ್ಪಣೆ

ಉಡುಪಿಯ ಅಷ್ಟಮಠಗಳಲ್ಲಿ ಒಂದಾದ ಸೋದೆ ಮಠದ ಶ್ರೀ ವಿಶ್ವವಲ್ಲಭತೀರ್ಥ ಸ್ವಾಮೀಜಿಯವರು ಮಾರ್ಚ್ 11ರಂದು ಬುಧವಾರ ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಿದರು. ಕ್ಷೇತ್ರಕ್ಕೆ ಆಗಮಿಸಿದ ಶ್ರೀಗಳನ್ನು ಭವ್ಯ ಮೆರವಣಿಗೆಯ ಮೂಲಕ ಅತ್ಯಂತ ಸಡಗರದಿಂದ ಸ್ವಾಗತಿಸಲಾಯಿತು.

ಕ್ಷೇತ್ರದ ಸಂಪ್ರದಾಯದಂತೆ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಸ್ವಾಮೀಜಿಯವರು, ದೇವರಿಗೆ ವಿಶೇಷ ಪೂಜೆ ಹಾಗೂ ಪ್ರಾರ್ಥನೆಗಳನ್ನು ಸಲ್ಲಿಸಿದರು.

ಬೀಡಿನಲ್ಲಿ ಧಾರ್ಮಿಕ ವಿಧಿವಿಧಾನ:

ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ನಿವಾಸವಾದ ‘ಬೀಡು’ವಿಗೆ ಸ್ವಾಮೀಜಿಯವರು ಆಗಮಿಸಿದರು. ಈ ಸಂದರ್ಭದಲ್ಲಿ ಹೆಗ್ಗಡೆಯವರ ಕುಟುಂಬಸ್ಥರು ಶ್ರೀಗಳ ಪಾದಪೂಜೆ ನೆರವೇರಿಸಿ ಆಶೀರ್ವಾದ ಪಡೆದರು. ಡಾ. ವೀರೇಂದ್ರ ಹೆಗ್ಗಡೆಯವರು ಶ್ರೀಗಳಿಗೆ ಶಾಲು ಹೊದಿಸಿ ಭಕ್ತಿಪೂರ್ವಕವಾಗಿ ಗೌರವಿಸಿದರು.

ಉಪಸ್ಥಿತರಿದ್ದ ಗಣ್ಯರು:

ಈ ಸಂದರ್ಭದಲ್ಲಿ ಹೇಮಾವತಿ ವೀ. ಹೆಗ್ಗಡೆ, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್ ಹಾಗೂ ಶ್ರೇಯಸ್ ಕುಮಾರ್ ಅವರು ಉಪಸ್ಥಿತರಿದ್ದು ಸ್ವಾಮೀಜಿಯವರ ಕೃಪೆಗೆ ಪಾತ್ರರಾದರು.

You may also like

News

ಕಳ್ಳತನ ಪ್ರಕರಣ – ಒಂದೂವರೆ ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ವಿಟ್ಲ ಪೊಲೀಸರಿಂದ ಬಂಧನ

ಕಳ್ಳತನ ಪ್ರಕರಣದಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಒಂದೂವರೆ ವರ್ಷದಿಂದ ತಲೆಮರೆಸಿಕೊಂಡಿದ್ದ ಕೇರಳದ ಮಲಪ್ಪುರಂ ನಿವಾಸಿ ರಂಶೀದ್‌ನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ
News

Father Muller Medical College Hospital Showcases Green Healthcare Initiatives at NABH National Patient Safety Conference in Delhi

Selected for a national-level presentation, FMMCH highlights sustainable environmental practices, responsible resource management and resilience in healthcare delivery Father Muller

You cannot copy content of this page