October 15, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಂಗಳೂರು ಪಾಲಿಕೆ ಆಡಳಿತ ವೈಫಲ್ಯ – ನಾಳೆ ಬಿಜೆಪಿ ಬೃಹತ್ ಪ್ರತಿಭಟನೆ

ರಾಜ್ಯ ಕಾಂಗ್ರೆಸ್ ಸರ್ಕಾರ ನೇಮಿಸಿರುವ ಆಡಳಿತಾಧಿಕಾರಿಗಳ ಅಧೀನದಲ್ಲಿರುವ ಮಂಗಳೂರು ಮಹಾನಗರ ಪಾಲಿಕೆಯಲ್ಲಿ (MCC) ನಡೆಯುತ್ತಿರುವ ದುರಾಡಳಿತ, ಭ್ರಷ್ಟಾಚಾರ ಮತ್ತು ಜನವಿರೋಧಿ ನೀತಿಗಳನ್ನು ಖಂಡಿಸಿ ಬಿಜೆಪಿ ಮಂಗಳೂರು ದಕ್ಷಿಣ ಹಾಗೂ ಉತ್ತರ ಮಂಡಲದ ವತಿಯಿಂದ ನಾಳೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಪ್ರತಿಭಟನೆಯ ವಿವರ:

* ದಿನಾಂಕ: 18.03.2026 (ಬುಧವಾರ)

* ಸಮಯ: ಮಧ್ಯಾಹ್ನ 3.30ಕ್ಕೆ

* ಸ್ಥಳ: ಲಾಲ್‌ಬಾಗ್‌ನಲ್ಲಿರುವ ಮಂಗಳೂರು ಮಹಾನಗರ ಪಾಲಿಕೆ ಕಚೇರಿ ಮುಂಭಾಗ

ಪ್ರತಿಭಟನೆಯ ಪ್ರಮುಖ ಕಾರಣಗಳು:

ಬಿಜೆಪಿ ಬಿಡುಗಡೆ ಮಾಡಿರುವ ಪ್ರಕಟಣೆಯಂತೆ, ಪಾಲಿಕೆಯಲ್ಲಿ ಚುನಾಯಿತ ಪ್ರತಿನಿಧಿಗಳ ಆಡಳಿತ ಅವಧಿ ಮುಗಿದು ವರ್ಷ ಕಳೆದರೂ ಚುನಾವಣೆ ನಡೆಸದೆ ಆಡಳಿತಾಧಿಕಾರಿಗಳ ಮೂಲಕ ನಡೆಸಲಾಗುತ್ತಿರುವ ಆಡಳಿತವು ಸಂಪೂರ್ಣ ವಿಫಲವಾಗಿದೆ.

* ಜನಸಾಮಾನ್ಯರ ಗೋಳು: ಇ-ಖಾತಾ ಪಡೆಯಲು ಸಾರ್ವಜನಿಕರು ಕಚೇರಿಯಿಂದ ಕಚೇರಿಗೆ ಅಲೆಯುತ್ತಿದ್ದು, ತಿಂಗಳು ಕಳೆದರೂ ಜನನ-ಮರಣ ಪ್ರಮಾಣಪತ್ರಗಳು ಸಿಗದೆ ಜನರು ರೋಸಿ ಹೋಗಿದ್ದಾರೆ.

* ಮೂಲಭೂತ ಸೌಕರ್ಯಗಳ ಕೊರತೆ: ನಗರದ ಹಲವು ವಾರ್ಡ್‌ಗಳಲ್ಲಿ ತೀವ್ರ ಕುಡಿಯುವ ನೀರಿನ ಸಮಸ್ಯೆ ಮತ್ತು ಕಸ ವಿಲೇವಾರಿಯ ಗೊಂದಲಗಳು ತಲೆದೂರಿವೆ.

* ಅಧಿಕಾರಿಗಳ ನಿರ್ಲಕ್ಷ್ಯ: ಪಾಲಿಕೆಯಲ್ಲಿ ಜನಪ್ರತಿನಿಧಿಗಳಿಲ್ಲದ ಕಾರಣ ಅಧಿಕಾರಿಗಳು ಜನರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ನಿಕಟಪೂರ್ವ ಸದಸ್ಯರು ಜನರ ಪರವಾಗಿ ಮಾತನಾಡಿದರೂ ಅಧಿಕಾರಿಗಳು ಅವರಿಗೆ ಮನ್ನಣೆ ನೀಡುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.

ಸಾರ್ವಜನಿಕರಿಗೆ ಕರೆ:

ಪಾಲಿಕೆಯ ದುರಾಡಳಿತದಿಂದ ತೊಂದರೆ ಅನುಭವಿಸುತ್ತಿರುವ ಕುಟುಂಬಗಳು, ಇ-ಖಾತಾ ವಿಳಂಬದಿಂದ ಪರದಾಡುತ್ತಿರುವವರು ಹಾಗೂ ನೀರು ಮತ್ತು ಕಸದ ಸಮಸ್ಯೆಯಿಂದ ಬೇಸತ್ತಿರುವ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಪ್ರತಿಭಟನೆಯಲ್ಲಿ ಭಾಗವಹಿಸಿ ಸರ್ಕಾರದ ವಿರುದ್ಧ ಧ್ವನಿ ಎತ್ತಬೇಕೆಂದು ಬಿಜೆಪಿ ಪ್ರಕಟಣೆಯಲ್ಲಿ ವಿನಂತಿಸಿದೆ.

You may also like

News

ಕಳ್ಳತನ ಪ್ರಕರಣ – ಒಂದೂವರೆ ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ವಿಟ್ಲ ಪೊಲೀಸರಿಂದ ಬಂಧನ

ಕಳ್ಳತನ ಪ್ರಕರಣದಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಒಂದೂವರೆ ವರ್ಷದಿಂದ ತಲೆಮರೆಸಿಕೊಂಡಿದ್ದ ಕೇರಳದ ಮಲಪ್ಪುರಂ ನಿವಾಸಿ ರಂಶೀದ್‌ನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ
News

Father Muller Medical College Hospital Showcases Green Healthcare Initiatives at NABH National Patient Safety Conference in Delhi

Selected for a national-level presentation, FMMCH highlights sustainable environmental practices, responsible resource management and resilience in healthcare delivery Father Muller

You cannot copy content of this page