October 14, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸಿನಿಮೀಯ ಸ್ಟೈಲ್ ಚೇಸ್ – 15 ಕಿ.ಮೀ. ಬೆನ್ನಟ್ಟಿ ಲಂಚಬಾಕ ಅಧಿಕಾರಿಣಿಯನ್ನು ಸೆರೆಹಿಡಿದ ಲೋಕಾಯುಕ್ತ

ಲಂಚದ ಹಣದೊಂದಿಗೆ ಕಾರಿನಲ್ಲಿ ಪರಾರಿಯಾಗಲು ಯತ್ನಿಸಿದ ಸಹಾಯಕ ಔಷಧ ನಿಯಂತ್ರಕಿಯನ್ನು ಲೋಕಾಯುಕ್ತ ಪೊಲೀಸರು ಬರೋಬ್ಬರಿ 15 ಕಿಲೋಮೀಟರ್ ಬೆನ್ನಟ್ಟಿ, ಸಿನಿಮೀಯ ಶೈಲಿಯಲ್ಲಿ ಬಂಧಿಸಿರುವ ರೋಚಕ ಘಟನೆ ಕೋಲಾರದಲ್ಲಿ ನಡೆದಿದೆ.

ಬಂಧಿತ ಆರೋಪಿಗಳು:

* ಜೆ. ಶ್ಯಾಮಲಾ: ಸಹಾಯಕ ಔಷಧ ನಿಯಂತ್ರಕಿ, ಕೋಲಾರ.

* ಶ್ರೀನಿವಾಸ್: ನಿವೃತ್ತ ‘ಡಿ’ ಗ್ರೂಪ್ ನೌಕರ.

* ಮಹಾಂತೇಶ್: ಕಾರು ಚಾಲಕ.

ಘಟನೆಯ ವಿವರ:

ಟೇಕಲ್ ಮೂಲದ ಔಷಧ ಅಂಗಡಿ ಮಾಲೀಕರೊಬ್ಬರು ತಮ್ಮ ಮಳಿಗೆಯನ್ನು ಬೇರೆಡೆಗೆ ಸ್ಥಳಾಂತರಿಸಲು ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದರು. ಈ ಕೆಲಸ ಮಾಡಿಕೊಡಲು ಅಧಿಕಾರಿ ಶ್ಯಾಮಲಾ ಅವರು ₹35,000 ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎನ್ನಲಾಗಿದೆ. ಈ ಬಗ್ಗೆ ಸಂತ್ರಸ್ತರು ನೀಡಿದ ದೂರಿನ ಮೇರೆಗೆ ಲೋಕಾಯುಕ್ತ ಪೊಲೀಸರು ಬಲೆ ಬೀಸಿದ್ದರು.

15 ಕಿಲೋಮೀಟರ್ ಹೈ-ಸ್ಪೀಡ್ ಚೇಸಿಂಗ್! :

ಟೇಕಲ್‌ನಲ್ಲಿ ಅಧಿಕಾರಿಯು ತಮ್ಮ ಕಾರಿನಲ್ಲಿ ಕುಳಿತು ಲಂಚದ ಹಣ ಪಡೆಯುತ್ತಿದ್ದಾಗ, ಜಿಲ್ಲಾ ಲೋಕಾಯುಕ್ತ ಎಸ್‌ಪಿ ಆಯಂಟೋನಿ ಜಾನ್ ನೇತೃತ್ವದ ತಂಡ ದಾಳಿ ನಡೆಸಿತು. ಪೊಲೀಸರನ್ನು ಕಂಡ ಕೂಡಲೇ ಗಾಬರಿಗೊಂಡ ಶ್ಯಾಮಲಾ, ಹಣದೊಂದಿಗೆ ಕಾರಿನಲ್ಲಿ ಪರಾರಿಯಾಗಲು ಯತ್ನಿಸಿದರು. ಆರೋಪಿಗಳಿದ್ದ ಕಾರು ಬಂಗಾರಪೇಟೆ ರಸ್ತೆಯಲ್ಲಿ ಅತೀ ವೇಗವಾಗಿ ಸಾಗುತ್ತಿತ್ತು. ಲೋಕಾಯುಕ್ತ ತಂಡವು ಸತತ 15 ಕಿ.ಮೀ. ದೂರ ಬಿಡದೇ ಬೆನ್ನಟ್ಟಿ, ಕೊನೆಗೆ ಸಿನಿಮಾ ಮಾದರಿಯಲ್ಲಿ ಕಾರನ್ನು ಅಡ್ಡಗಟ್ಟಿ ಮೂವರನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಯಿತು.

“ಲಂಚ ಪಡೆಯುವಾಗ ತಪ್ಪಿಸಿಕೊಳ್ಳಲು ಯತ್ನಿಸಿದ ಜೆ. ಶ್ಯಾಮಲಾ ಮತ್ತು ಅವರ ಇಬ್ಬರು ಸಹಚರರನ್ನು ಬಂಧಿಸಲಾಗಿದೆ. ಲಂಚದ ಹಣವನ್ನು ಜಪ್ತಿ ಮಾಡಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಲೋಕಾಯುಕ್ತ SP ಜೋನ್ ಅವರು ತಿಳಿಸಿದ್ದಾರೆ. ಸದ್ಯ ಆರೋಪಿಗಳು ಲೋಕಾಯುಕ್ತ ಪೊಲೀಸರ ಅತಿಥಿಯಾಗಿದ್ದು, ಜಿಲ್ಲೆಯಲ್ಲಿ ಈ ಘಟನೆ ಭಾರೀ ಸಂಚಲನ ಮೂಡಿಸಿದೆ.

You may also like

News

ಮಂಗಳೂರು ಪ್ರೆಸ್ ಕ್ಲಬ್‌ನ ನವೀಕೃತ ‘ಅಕ್ಷರ ಸಭಾಂಗಣ’ ಉದ್ಘಾಟನೆ

ಮಾಧ್ಯಮದ ನೈತಿಕ ಮೌಲ್ಯಗಳ ರಕ್ಷಣೆ ಪತ್ರಕರ್ತರ ಹೊಣೆ – ಡಾ. ಎಂ. ಮೋಹನ್ ಆಳ್ವ ರಾಜಕೀಯ, ಶಿಕ್ಷಣ, ಆರೋಗ್ಯ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಮೌಲ್ಯಗಳು ಮತ್ತು ಪಾವಿತ್ರ್ಯತೆ
News

ಗಂಜಿಮಠ ಗ್ರಾಮ ಪಂಚಾಯತ್ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ

ಜನರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ನೀಡುವುದೇ ಗ್ರಾಮ ಪಂಚಾಯತ್ ವ್ಯವಸ್ಥೆಯ ಉದ್ದೇಶ – ಡಾ. ಭರತ್ ಶೆಟ್ಟಿ ಗುರುಪುರ ಗಂಜಿಮಠ ಗ್ರಾಮ ಪಂಚಾಯತ್‌ನ ನೂತನ ಕಟ್ಟಡ ನಿರ್ಮಾಣಕ್ಕೆ

You cannot copy content of this page