August 28, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬೆಳ್ತಂಗಡಿಯ ಪ್ರತಿಭೆ ಜೋಷ್ಮಾ ಲೀರಾ ಮೊನಿಸ್‌ ಅವರಿಗೆ ಪುಣೆ ವಿವಿಯ ಕಾನೂನು ಪದವಿಯಲ್ಲಿ 3ನೇ ರ್‍ಯಾಂಕ್

ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ಪ್ರತಿಭಾನ್ವಿತ ಯುವತಿ ಜೋಷ್ಮಾ ಲೀರಾ ಮೊನಿಸ್ ಅವರು ಮಹಾರಾಷ್ಟ್ರದ ಪ್ರತಿಷ್ಠಿತ ಸಾವಿತ್ರಿಬಾಯಿ ಫುಲೆ ಪುಣೆ ವಿಶ್ವವಿದ್ಯಾಲಯದ ಕಾನೂನು ಪದವಿ ಪರೀಕ್ಷೆಯಲ್ಲಿ ಸಮಗ್ರವಾಗಿ 3ನೇ ರ್‍ಯಾಂಕ್ ಪಡೆಯುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

ಕುಟುಂಬದ ಹಿನ್ನೆಲೆ:

ಜೋಷ್ಮಾ ಲೀರಾ ಅವರು ಗರ್ಡಾಡಿಯ ಜೆರಾಲ್ಡ್ ಮೊನಿಸ್ ಪರಿಮುಖ ಹಾಗೂ ಕರಿಮಣೇಲು ಸಂತ ಜೂಡರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಮಾರ್ಸೆಲಿನ್ ಲೀನಾ ಪಿರೇರಾ ದಂಪತಿಯ ಪುತ್ರಿ.

ಗ್ರಾಮೀಣ ಭಾಗದ ಪ್ರತಿಭೆಯಾಗಿ ಬೆಳೆದು, ಹೊರರಾಜ್ಯದ ಪ್ರಸಿದ್ಧ ವಿಶ್ವವಿದ್ಯಾಲಯದಲ್ಲಿ ಉನ್ನತ ಸಾಧನೆ ಮಾಡಿರುವ ಜೋಷ್ಮಾ ಅವರ ಈ ಸಾಧನೆಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಇವರ ಸಾಧನೆಯು ಜಿಲ್ಲೆಯ ಹಾಗೂ ತಾಲೂಕಿನ ಕಾನೂನು ಆಸಕ್ತ ವಿದ್ಯಾರ್ಥಿಗಳಿಗೆ ಸ್ಫೂರ್ತಿಯಾಗಿದೆ.

You may also like

News

CODP ಮಂಗಳೂರು ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ಇವರ ಸಹಯೋಗದಲ್ಲಿ ಸ್ಥಳೀಯ ಆಡಳಿತದಲ್ಲಿ ಮಹಿಳಾ ನಾಯಕತ್ವಕ್ಕೆ ತರಬೇತಿ

ಸ್ಥಳೀಯ ಆಡಳಿತದಲ್ಲಿ ಮಹಿಳೆಯರ ನಾಯಕತ್ವವನ್ನು ಬಲಪಡಿಸುವ ಉದ್ದೇಶದಿಂದ ಸಿಓಡಿಪಿ ಮಂಗಳೂರು ಹಾಗೂ ಕ್ರಾಸ್ ಸಂಸ್ಥೆ, ಬೆಂಗಳೂರು ಇವರ ಸಹಯೋಗದಲ್ಲಿ ಮಹಿಳಾ ಸಬಲೀಕರಣ ಯೋಜನೆಯಡಿ “ಸ್ಥಳೀಯ ಆಡಳಿತದಲ್ಲಿ ನಾಯಕತ್ವ”
News

ಮಿಲಾಗ್ರಿಸ್ ಸೊಸೈಟಿಯಿಂದ ಪಾನೀರ್ ಅನಾಥಾಶ್ರಮದ ವಿದ್ಯಾರ್ಥಿಗಳಿಗೆ ಅಗತ್ಯ ವಸ್ತುಗಳ ನೆರವು

ಆಶ್ರಮಗಳಿಗೆ ಅಗತ್ಯ ವಸ್ತುಗಳನ್ನು ವಿತರಿಸುತ್ತಿರುವುದು ಶ್ಲಾಘನೀಯ – ಜೆ. ಆರ್. ಲೋಬೊ ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ., ಕಾರವಾರ ಇದರ ಉರ್ವಾ ಶಾಖೆಯ ಆಶ್ರಯದಲ್ಲಿ

You cannot copy content of this page