October 15, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷದ ಹೇಳಿಕೆ – ಕಂಕನಾಡಿ ನಗರ ಪೊಲೀಸರಿಂದ ಆರೋಪಿಯ ಬಂಧನ

ಫೇಸ್‌ಬುಕ್‌ನಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಹ ಮತ್ತು ಕೋಮು ಪ್ರಚೋದಿತ ಕಾಮೆಂಟ್ ಪೋಸ್ಟ್ ಮಾಡಿದ ಆರೋಪದ ಮೇಲೆ ಕಾಸರಗೋಡು ಮೂಲದ ವ್ಯಕ್ತಿಯನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಘಟನೆಯ ಹಿನ್ನೆಲೆ:

ಕಳೆದ ಜನವರಿ 2026ರಲ್ಲಿ ಮಂಗಳೂರಿನ ಇಂಡಿಯಾನಾ ಕನ್ವೆನ್ಷನ್ ಸೆಂಟರ್‌ನಲ್ಲಿ ‘ಕಿರಾತ್’ (ಕುರಾನ್ ಪಠಣ) ಸ್ಪರ್ಧೆ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದ ವಿಡಿಯೋವನ್ನು ‘ಉದಯವಾಣಿ’ ಫೇಸ್‌ಬುಕ್ ಪುಟದಲ್ಲಿ ಪ್ರಸಾರ ಮಾಡಲಾಗಿತ್ತು. ಈ ವಿಡಿಯೋಗೆ ಪ್ರತಿಕ್ರಿಯಿಸಿದ್ದ ಆರೋಪಿ ಗಣೇಶ್ ಪ್ರಸಾದ್, “ಮಕ್ಕಳ ತಲೆಯನ್ನು ಬ್ರೈನ್ ವಾಶ್ ಮಾಡಿ ನಾಳೆ ದೇಶಕ್ಕೆ ಬಾಂಬ್ ಇಡೋಕೆ ಕಳಿಸೋದು ಅಷ್ಟೇ” ಎಂಬ ವಿವಾದಾತ್ಮಕ ಹಾಗೂ ಪ್ರಚೋದನಕಾರಿ ಕಾಮೆಂಟ್ ಹಾಕಿದ್ದನು.

ಪೊಲೀಸ್ ಕ್ರಮ ಮತ್ತು ನ್ಯಾಯಾಲಯದ ಆದೇಶ :

ಈ ಸಂಬಂಧ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು (ಅ.ಕ್ರ. 15/2026). ತನಿಖೆ ಕೈಗೆತ್ತಿಕೊಂಡ ಪೊಲೀಸರು ತಾಂತ್ರಿಕ ಸಾಕ್ಷ್ಯಗಳ ಆಧಾರದ ಮೇಲೆ ಆರೋಪಿಯನ್ನು ಪತ್ತೆಹಚ್ಚಿ ದಸ್ತಗಿರಿ ಮಾಡಿದ್ದಾರೆ.

* ಆರೋಪಿಯ ವಿವರ: ಗಣೇಶ್ ಪ್ರಸಾದ್ (41 ವರ್ಷ), ತಂದೆ: ಎಸ್.ಎನ್. ಕಬನುರಾಯ.

* ವಾಸಸ್ಥಳ: ಮಂಜೇಶ್ವರ, ಕಾಸರಗೋಡು ಜಿಲ್ಲೆ.

* ದಾಖಲಾದ ಸೆಕ್ಷನ್‌ಗಳು: ಬಿ.ಎನ್.ಎಸ್ (BNS) ಸೆಕ್ಷನ್ 196 ಮತ್ತು ಐಟಿ ಕಾಯ್ದೆಯ ಸೆಕ್ಷನ್ 66.

ಬಂಧಿತನಾದ ಆರೋಪಿಯನ್ನು ಪೊಲೀಸರು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿದ ನ್ಯಾಯಾಧೀಶರು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದಾರೆ.

You may also like

News

ಕಳ್ಳತನ ಪ್ರಕರಣ – ಒಂದೂವರೆ ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ವಿಟ್ಲ ಪೊಲೀಸರಿಂದ ಬಂಧನ

ಕಳ್ಳತನ ಪ್ರಕರಣದಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಒಂದೂವರೆ ವರ್ಷದಿಂದ ತಲೆಮರೆಸಿಕೊಂಡಿದ್ದ ಕೇರಳದ ಮಲಪ್ಪುರಂ ನಿವಾಸಿ ರಂಶೀದ್‌ನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ
News

Father Muller Medical College Hospital Showcases Green Healthcare Initiatives at NABH National Patient Safety Conference in Delhi

Selected for a national-level presentation, FMMCH highlights sustainable environmental practices, responsible resource management and resilience in healthcare delivery Father Muller

You cannot copy content of this page