October 14, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

2026-27 ಶಾಲಾ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ – ಮೇ 29ರಿಂದ ತರಗತಿ ಆರಂಭ

2026-27ನೇ ಸಾಲಿನ ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶೈಕ್ಷಣಿಕ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿದೆ. ಹೊಸ ಶೈಕ್ಷಣಿಕ ವರ್ಷದಲ್ಲಿ ಮೇ 29ರಿಂದ ತರಗತಿಗಳು ಆರಂಭವಾಗಲಿವೆ.

ಒಟ್ಟು 245 ಶಾಲಾ ಕೆಲಸದ ದಿನಗಳನ್ನು ನಿಗದಿಪಡಿಸಲಾಗಿದ್ದು, ಅಕ್ಟೋಬರ್ 3ರಿಂದ 21ರವರೆಗೆ ದಸರಾ ರಜೆ ಹಾಗೂ ಏಪ್ರಿಲ್ 11, 2027ರಿಂದ ಬೇಸಿಗೆ ರಜೆ ಘೋಷಿಸಲಾಗಿದೆ. ಮೊದಲ ಅವಧಿ ಮೇ 29ರಿಂದ ಅಕ್ಟೋಬರ್ 2ರವರೆಗೆ ಹಾಗೂ ಎರಡನೇ ಅವಧಿ ಅಕ್ಟೋಬರ್ 22ರಿಂದ 2027ರ ಏಪ್ರಿಲ್ 10ರವರೆಗೆ ನಡೆಯಲಿದೆ. ಜೂನ್ ಮೊದಲ ವಾರದಲ್ಲೇ ಸಮವಸ್ತ್ರ ಮತ್ತು ಪಠ್ಯಪುಸ್ತಕ ವಿತರಣೆಗೆ ಆದೇಶಿಸಲಾಗಿದೆ. ಮಕ್ಕಳ ದಾಖಲಾತಿ ಪ್ರಕ್ರಿಯೆಯನ್ನು ಜೂನ್ 30ರೊಳಗೆ ಪೂರ್ಣಗೊಳಿಸಲು ಸೂಚಿಸಲಾಗಿದ್ದು, ಶಾಲೆಯಿಂದ ಹೊರಗುಳಿದ 6 ರಿಂದ 18 ವರ್ಷದ ಮಕ್ಕಳನ್ನು ಮರಳಿ ಶಾಲೆಗೆ ಕರೆತರಲು ವಿಶೇಷ ದಾಖಲಾತಿ ಅಭಿಯಾನ ನಡೆಸಲು ಇಲಾಖೆಯು ತಿಳಿಸಿದೆ.

ಒಟ್ಟು 365 ದಿನಗಳಲ್ಲಿ 119 ರಜಾ ದಿನಗಳಿದ್ದು, ಕಲಿಕಾ ಚಟುವಟಿಕೆ, ಪರೀಕ್ಷೆ, ಮೌಲ್ಯಮಾಪನ ಹಾಗೂ ಪಠ್ಯೇತರ ಚಟುವಟಿಕೆಗಳಿಗೆ ಪ್ರತ್ಯೇಕ ಅವಧಿಗಳನ್ನು ನಿಗದಿಪಡಿಸಲಾಗಿದೆ. ಈ ವೇಳಾಪಟ್ಟಿಯನ್ನು ಎಲ್ಲಾ ರಾಜ್ಯ ಪಠ್ಯಕ್ರಮ ಶಾಲೆಗಳಲ್ಲಿ ಕಡ್ಡಾಯವಾಗಿ ಅನುಷ್ಠಾನಗೊಳಿಸಲು ಸೂಚಿಸಲಾಗಿದೆ.

You may also like

News

ಮಂಗಳೂರು ಪ್ರೆಸ್ ಕ್ಲಬ್‌ನ ನವೀಕೃತ ‘ಅಕ್ಷರ ಸಭಾಂಗಣ’ ಉದ್ಘಾಟನೆ

ಮಾಧ್ಯಮದ ನೈತಿಕ ಮೌಲ್ಯಗಳ ರಕ್ಷಣೆ ಪತ್ರಕರ್ತರ ಹೊಣೆ – ಡಾ. ಎಂ. ಮೋಹನ್ ಆಳ್ವ ರಾಜಕೀಯ, ಶಿಕ್ಷಣ, ಆರೋಗ್ಯ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಮೌಲ್ಯಗಳು ಮತ್ತು ಪಾವಿತ್ರ್ಯತೆ
News

ಗಂಜಿಮಠ ಗ್ರಾಮ ಪಂಚಾಯತ್ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ

ಜನರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ನೀಡುವುದೇ ಗ್ರಾಮ ಪಂಚಾಯತ್ ವ್ಯವಸ್ಥೆಯ ಉದ್ದೇಶ – ಡಾ. ಭರತ್ ಶೆಟ್ಟಿ ಗುರುಪುರ ಗಂಜಿಮಠ ಗ್ರಾಮ ಪಂಚಾಯತ್‌ನ ನೂತನ ಕಟ್ಟಡ ನಿರ್ಮಾಣಕ್ಕೆ

You cannot copy content of this page