August 26, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಹಾವು ಕಚ್ಚಿ 2.5 ವರ್ಷದ ಮಗು ಸಾವು

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಎಸ್‌ಎನ್ ನಗರದಲ್ಲಿ ಮನಕಲಕುವ ಘಟನೆ ನಡೆದಿದೆ. ಮನೆ ಮುಂದೆ ಆಟವಾಡುತ್ತಿದ್ದ ಎರಡುವರೆ ವರ್ಷದ ಮಗು ಹಾವು ಕಚ್ಚಿ ಮೃತಪಟ್ಟಿದೆ.

ಮೃತ ಮಗುವನ್ನು ಭವಿನ್ ಎಂದು ಗುರುತಿಸಲಾಗಿದ್ದು, ಇವರು ಗಣೇಶ್ ಅವರ ಪುತ್ರ. ರಜೆ ಹಿನ್ನೆಲೆಯಲ್ಲಿ ಕುಟುಂಬದೊಂದಿಗೆ ಅಜ್ಜಿ ಮನೆಗೆ ಬಂದಿದ್ದ ವೇಳೆ ಈ ದುರಂತ ಸಂಭವಿಸಿದೆ. ಆಟವಾಡುತ್ತಿದ್ದಾಗ ಮಗುವಿನ ಕೈಗೆ ನಾಗರಹಾವು ಕಚ್ಚಿದುದಾಗಿ ತಿಳಿದುಬಂದಿದೆ.

ಘಟನೆ ತಿಳಿದ ತಕ್ಷಣ ಆತಂಕಗೊಂಡ ಕುಟುಂಬಸ್ಥರು ಮಗುವನ್ನು ಸಾಗರ ಉಪವಿಭಾಗೀಯ ಆಸ್ಪತ್ರೆಗೆ ಕರೆದೊಯ್ದರು. ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ವೈದ್ಯರ ಎಲ್ಲಾ ಪ್ರಯತ್ನಗಳಿಗೂ ಮಧ್ಯೆ ಮಗು ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆಗೆ ಮೃತಪಟ್ಟಿದೆ.

ಮಗುವಿನ ಮರಣೋತ್ತರ ಪರೀಕ್ಷೆ ಮೆಗ್ಗಾನ್ ಆಸ್ಪತ್ರೆಯಲ್ಲಿ ನಡೆಸಲಾಗಿದ್ದು, ಘಟನೆ ಕುಟುಂಬದವರಲ್ಲಿ ದುಃಖದ ವಾತಾವರಣ ನಿರ್ಮಿಸಿದೆ. ಸ್ಥಳೀಯರು ಸಹ ಸಂತಾಪ ಸೂಚಿಸಿದ್ದಾರೆ.

You may also like

News

ಮೊಬೈಲ್‌ಗಾಗಿ ಜಗಳ ತಂಗಿಯ ಕೊಲೆ – ಸಹೋದರ ಸ್ಯಾಮ್ಸನ್ ಫ್ರಾನ್ಸಿಸ್ ಕುಟಿನ್ಹಾನಿಗೆ 5 ವರ್ಷ ಜೈಲು!

ಮೊಬೈಲ್ ವಿಚಾರವಾಗಿ ನಡೆದ ಜಗಳದ ವೇಳೆ ಸ್ವಂತ ತಂಗಿಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿ ಆಕೆಯ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರು ನ್ಯಾಯಾಲಯ ಶಿಕ್ಷೆ ವಿಧಿಸಿದೆ.
News

ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ಧರ್ಮಸ್ಥಳದಲ್ಲಿ 28ನೇ ಭಜನಾ ಕಮ್ಮಟ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ನಡೆಯಲಿರುವ 28ನೇ ವರ್ಷದ ಭಜನಾ ಕಮ್ಮಟದ ಪೂರ್ವಭಾವಿ ಸಭೆ ಮಂಗಳವಾರ ಮಹೋತ್ಸವ ಸಭಾಭವನದಲ್ಲಿ ನಡೆಯಿತು. ಭಜನಾ ಕಮ್ಮಟದ

You cannot copy content of this page