August 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ 11 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ವಿದೇಶಕ್ಕೆ ಪರಾರಿಯಾಗಿದ್ದ, ಸುಮಾರು 35 ಬಾರಿ ವಾರಂಟ್ ಜಾರಿಯಾಗಿದ್ದ ಗಂಭೀರ ಪ್ರಕರಣದ ಆರೋಪಿಯನ್ನು ವಿಟ್ಲ ಪೊಲೀಸರು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಪೆರುವಾಯಿ ನಿವಾಸಿ ಅಬ್ಬಾಸ್ ಜಿ. ಬಂಧಿತ ಆರೋಪಿ.

ಪ್ರಕರಣದ ಹಿನ್ನೆಲೆ:

2015ರಲ್ಲಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಅಬ್ಬಾಸ್ ವಿರುದ್ಧ ಗಲಭೆ, ಹಲ್ಲೆ ಹಾಗೂ ಜೀವ ಬೆದರಿಕೆ ಸೇರಿದಂತೆ ವಿವಿಧ ಕಲಂ (IPC 143, 147, 148, 504, 506, 323, 324, 326 r/w 149) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾದ ಬಳಿಕ ನ್ಯಾಯಾಲಯದ ವಿಚಾರಣೆಗೆ ಹಾಜರಾಗದ ಈತ, ಕಾನೂನಿನ ಕಣ್ಣು ತಪ್ಪಿಸಿ ವಿದೇಶಕ್ಕೆ ಪರಾರಿಯಾಗಿದ್ದ. ಈತನ ಪತ್ತೆಗಾಗಿ ನ್ಯಾಯಾಲಯವು ಬರೋಬ್ಬರಿ 35 ಬಾರಿ ವಾರಂಟ್ ಹೊರಡಿಸಿತ್ತು.

ಬಂಧನ ಕಾರ್ಯಾಚರಣೆ:

ಆರೋಪಿ ಅಬ್ಬಾಸ್ ಏಪ್ರಿಲ್ 16ರಂದು ವಿದೇಶದಿಂದ ಮಂಗಳೂರಿಗೆ ಮರಳುತ್ತಿದ್ದಾನೆ ಎಂಬ ಖಚಿತ ಮಾಹಿತಿ ಮೇರೆಗೆ ವಿಟ್ಲ ಪೊಲೀಸರು ಕಾರ್ಯಪ್ರವೃತ್ತರಾಗಿದ್ದರು. ವಿಮಾನ ನಿಲ್ದಾಣದ ಇಮಿಗ್ರೇಶನ್ ವಿಭಾಗದ ಅಧಿಕಾರಿಗಳ ಸಹಕಾರದೊಂದಿಗೆ ವಿಟ್ಲ ಠಾಣೆಯ ಹೆಡ್ ಕಾನ್ಸ್ಟೇಬಲ್ ಮೋಹನ (HC 2264), ಸಿಬ್ಬಂದಿಗಳಾದ ವೆಂಕಪ್ಪ (PC 2355) ಮತ್ತು ತಂಡವು ಆತನನ್ನು ವಶಕ್ಕೆ ಪಡೆದರು.

ನ್ಯಾಯಾಂಗ ಬಂಧನ:

ಬಂಧಿತ ಆರೋಪಿಯನ್ನು ಪೊಲೀಸರು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

You may also like

News

ಕಸ ಗುಡಿಸುವ ಕಾಯಕದಿಂದ ಫಾರ್ಚುನರ್‌ವರೆಗೆ – ಸೇಸಪ್ಪ ಅವರ ಯಶೋಗಾಥೆ!

ಬಡತನ ಕನಸು ಕಾಣುವುದಕ್ಕೆ ಅಡ್ಡಿಯಾಗದು ಎಂಬುದಕ್ಕೆ ಬಂಟ್ವಾಳ ತಾಲೂಕಿನ ನಾವೂರು ನಿವಾಸಿ ಹಾಗೂ ಬಂಟ್ವಾಳ ಪುರಸಭೆಯ ಪೌರಕಾರ್ಮಿಕ ಸೇಸಪ್ಪ ಅವರ ಬದುಕು ಉತ್ತಮ ಉದಾಹರಣೆ. ಲಕ್ಷಾಂತರ ರೂಪಾಯಿ
News

ಪೊಂಪೈ ಕಾಲೇಜು ಐಕಳದಲ್ಲಿ ಮಾದಕ ವಸ್ತು, ಮಾನವ ಕಳ್ಳಸಾಗಣೆ ವಿರುದ್ಧ ಜಾಗೃತಿ

ಯುವಜನತೆ ಜಾಗೃತರಾದರೆ ಸಮಾಜ ಸುಧಾರಣೆ ಸಾಧ್ಯ – ಗಣೇಶ್ ಕುಮಾರ್ ಪೊಂಪೈ ಕಾಲೇಜು ಐಕಳದ ಆಂತರಿಕ ಗುಣಮಟ್ಟ ಭರವಸೆ ಕೋಶ, ಮಾನವ ಕಳ್ಳಸಾಗಣೆ ವಿರೋಧಿ ಸಂಘ, ಮಾದಕ

You cannot copy content of this page