October 15, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸಂತ ಫ್ರಾನ್ಸಿಸ್ ಕ್ಸೇವಿಯರ್ ವಿರುದ್ಧ ಅವಹೇಳನಕಾರಿ ಹೇಳಿಕೆ : ಗೌತಮ್ ಕಟ್ಟರ್ ನನ್ನು ಕೂಡಲೇ ಗಡಿಪಾರು ಮಾಡಬೇಕು – ಸ್ಟ್ಯಾನಿ ಪಿಂಟೋ ಬೆಂಗಳೂರು

ಆಕ್ರೋಶ ಬಹಿರಂಗ ಪಡಿಸಿದ ಕರ್ನಾಟಕ ಕ್ರೈಸ್ತ ಸಂಘಟನೆ

ಗೋವಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಂತ ಫ್ರಾನ್ಸಿಸ್ ಕ್ಸೇವಿಯರ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಲಾಗಿದೆ ಎಂಬ ಆರೋಪಕ್ಕೆ ದೇಶದ ವಿವಿಧ ಭಾಗಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಕರ್ನಾಟಕ ಕ್ರೈಸ್ತ ಸಂಘಟನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಸ್ಟ್ಯಾನಿ ಪಿಂಟೋ ಬೆಂಗಳೂರು ಅವರು ಈ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿ, ಆರೋಪಿಯಾಗಿರುವ ಗೌತಮ್ ಕಟ್ಟರ್ ಅವನನ್ನು ಕೂಡಲೇ ಗಡಿಪಾರು ಮಾಡಬೇಕು ಎಂದು ಗೋವಾ ಸರಕಾರವನ್ನು ಒತ್ತಾಯಿಸಿದ್ದಾರೆ.

ಘಟನೆಯ ವಿವರ:

ಏಪ್ರಿಲ್ ತಿಂಗಳಲ್ಲಿ ಗೋವಾದ ವಾಸ್ಕೋದಲ್ಲಿ ನಡೆದ ‘ಭಗವಾನ್ ಪರಶುರಾಮ ಜನ್ಮೋತ್ಸವ’ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಗೌತಮ್ ಕಟ್ಟರ್, ಗೋವಾದ ರಕ್ಷಕ ಸಂತರೆಂದು ಗೌರವಿಸಲ್ಪಡುವ ಸಂತ ಫ್ರಾನ್ಸಿಸ್ ಕ್ಸೇವಿಯರ್ ಅವರನ್ನು ಅವಹೇಳನಕಾರಿ ಪದಗಳಿಂದ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ. ಈ ಹೇಳಿಕೆ ಕ್ರೈಸ್ತ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಾಗಿದೆ ಎಂಬ ಆರೋಪ ಕೇಳಿಬಂದಿದೆ.

 

ವ್ಯಾಪಕ ವಿರೋಧ:ಈ ಹೇಳಿಕೆಗೆ ಗೋವಾ ಸೇರಿದಂತೆ ದೇಶದ ಹಲವೆಡೆ ತೀವ್ರ ವಿರೋಧ ವ್ಯಕ್ತವಾಗಿದೆ. ವಿವಿಧ ಕ್ರೈಸ್ತ ಸಂಘಟನೆಗಳು ಮತ್ತು ರಾಜಕೀಯ ನಾಯಕರು ಪೊಲೀಸ್ ದೂರು ದಾಖಲಿಸಿದ್ದು, ಪ್ರಕರಣವನ್ನು ಗೋವಾ ಕ್ರೈಂ ಬ್ರಾಂಚ್‌ಗೆ ವರ್ಗಾಯಿಸಲಾಗಿದೆ. ಸಮಾಜದ ಶಾಂತಿ ಮತ್ತು ಸೌಹಾರ್ದತೆಗೆ ಧಕ್ಕೆ ಉಂಟುಮಾಡುವ ಪ್ರಯತ್ನ ಇದಾಗಿದೆ ಎಂದು ವಿರೋಧ ಪಕ್ಷದ ನಾಯಕರು ಆರೋಪಿಸಿದ್ದಾರೆ.

ಕಠಿಣ ಕ್ರಮಕ್ಕೆ ಆಗ್ರಹ:

“ಸಂತ ಫ್ರಾನ್ಸಿಸ್ ಕ್ಸೇವಿಯರ್ ಅವರು ಭಾರತದ ಆಧ್ಯಾತ್ಮಿಕ ಇತಿಹಾಸದಲ್ಲಿ ವಿಶಿಷ್ಟ ಸ್ಥಾನ ಹೊಂದಿದ್ದಾರೆ. ಇಂತಹ ಮಹಾನ್ ವ್ಯಕ್ತಿತ್ವವನ್ನು ಅವಹೇಳನ ಮಾಡುವುದು ಅಕ್ಷಮ್ಯ. ಕೂಡಲೇ ಆರೋಪಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಅವರು ಕ್ರೈಸ್ತ ಸಮುದಾಯದ ಕ್ಷಮೆಯಾಚಿಸಬೇಕು” ಎಂದು ಸ್ಟ್ಯಾನಿ ಪಿಂಟೋ ತಮ್ಮ ಪ್ರಕಟಣೆಯಲ್ಲಿ ಹೇಳಿದ್ದಾರೆ.

ಧಾರ್ಮಿಕ ಸೌಹಾರ್ದತೆಗೆ ಕರೆ:

ಈ ಘಟನೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲೂ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿದ್ದು, ಧಾರ್ಮಿಕ ಭಾವನೆಗಳಿಗೆ ಗೌರವ ನೀಡುವಂತೆ ಹಾಗೂ ಸಮಾಜದಲ್ಲಿ ಶಾಂತಿ-ಸೌಹಾರ್ದತೆ ಕಾಪಾಡುವಂತೆ ಸಂಘಟನೆಗಳು ಕರೆ ನೀಡಿದ್ದಾರೆ.

ಸದ್ಯ ಈ ವಿವಾದವು ಮತ್ತಷ್ಟು ತೀವ್ರಗೊಳ್ಳುವ ಲಕ್ಷಣಗಳು ಕಾಣಿಸುತ್ತಿದ್ದು, ಸರ್ಕಾರವು ಸೂಕ್ತ ಕ್ರಮ ಕೈಗೊಳ್ಳುವತ್ತ ಎಲ್ಲರ ಗಮನ ನೆಟ್ಟಿದೆ.

You may also like

News

ಕಳ್ಳತನ ಪ್ರಕರಣ – ಒಂದೂವರೆ ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ವಿಟ್ಲ ಪೊಲೀಸರಿಂದ ಬಂಧನ

ಕಳ್ಳತನ ಪ್ರಕರಣದಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಒಂದೂವರೆ ವರ್ಷದಿಂದ ತಲೆಮರೆಸಿಕೊಂಡಿದ್ದ ಕೇರಳದ ಮಲಪ್ಪುರಂ ನಿವಾಸಿ ರಂಶೀದ್‌ನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ
News

Father Muller Medical College Hospital Showcases Green Healthcare Initiatives at NABH National Patient Safety Conference in Delhi

Selected for a national-level presentation, FMMCH highlights sustainable environmental practices, responsible resource management and resilience in healthcare delivery Father Muller

You cannot copy content of this page