October 13, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಉಡುಪಿಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ವಾರ್ಷಿಕ ಸಭೆ – ಸಂಘಟನೆ ಬಲವರ್ಧನೆಗೆ ಪಣ

ಉಡುಪಿ: ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ವಾರ್ಷಿಕ ಮಹಾಸಭೆಯು ಮೇ 1ರಂದು ಶುಕ್ರವಾರ ಬ್ರಹ್ಮಗಿರಿಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಯಶಸ್ವಿಯಾಗಿ ಜರುಗಿತು. ಜಿಲ್ಲೆಯ ಯುವ ಶಕ್ತಿಯನ್ನು ರಾಜಕೀಯವಾಗಿ ಸಂಘಟಿಸುವ ಮತ್ತು ಪಕ್ಷದ ತಳಮಟ್ಟದ ಬಲವರ್ಧನೆಯ ಕುರಿತು ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಲಾಯಿತು.

ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಕೃಷ್ಣ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ, ಸಂಘಟನೆಯ ಮುಂದಿನ ಗುರಿಗಳ ಬಗ್ಗೆ ರೂಪುರೇಷೆ ಸಿದ್ಧಪಡಿಸಲಾಯಿತು. ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸೂರಯ್ಯ ಅಂಜುಮ್ ಅವರು ವಿಶೇಷವಾಗಿ ಭಾಗವಹಿಸಿ, ಯುವಜನರು ರಾಜಕೀಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಅನಿವಾರ್ಯತೆ ಹಾಗೂ ಮುಂಬರುವ ದಿನಗಳಲ್ಲಿ ಅನುಸರಿಸಬೇಕಾದ ಕಾರ್ಯತಂತ್ರಗಳ ಬಗ್ಗೆ ಮಹತ್ವದ ಮಾರ್ಗದರ್ಶನ ನೀಡಿದರು.

ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ, ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ ಮತ್ತು ಪ್ರಧಾನ ಕಾರ್ಯದರ್ಶಿ ಯತೀಶ್ ಕರ್ಕೇರ ಅವರು ಉಪಸ್ಥಿತರಿದ್ದು ಯುವ ಕಾರ್ಯಕರ್ತರಿಗೆ ಹುರಿದುಂಬಿಸಿದರು. ಇದೇ ಸಂದರ್ಭದಲ್ಲಿ ಸಂಘಟನೆಯನ್ನು ಮತ್ತಷ್ಟು ವಿಸ್ತರಿಸುವ ನಿಟ್ಟಿನಲ್ಲಿ ಹೊಸದಾಗಿ ಕೆಲ ನಾಮನಿರ್ದೇಶಿತ ಸದಸ್ಯರನ್ನು ಸಮಿತಿಗೆ ಸೇರ್ಪಡೆಗೊಳಿಸಲಾಯಿತು.

ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಶೇಖ್ ಮೊಹಮ್ಮದ್ ಅಥೀಫ್ ಸೇರಿದಂತೆ ವಿವಿಧ ವಿಧಾನಸಭಾ ಕ್ಷೇತ್ರಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡು, ಜಿಲ್ಲೆಯಾದ್ಯಂತ ಕಾಂಗ್ರೆಸ್ ಪ್ರಭಾವವನ್ನು ಹೆಚ್ಚಿಸಲು ಒಮ್ಮತದ ನಿರ್ಧಾರ ಕೈಗೊಂಡರು.

You may also like

News

‘ಪೊಲೀಸ್–ATS’ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್ ಬೆದರಿಕೆ – ಪುತ್ತೂರಿನ ವ್ಯಕ್ತಿಗೆ ₹1.31 ಕೋಟಿ ವಂಚನೆ

ಪುತ್ತೂರು ತಾಲೂಕಿನ ವ್ಯಕ್ತಿಯೊಬ್ಬರಿಗೆ ಅಪರಿಚಿತ ವ್ಯಕ್ತಿಗಳು ಮುಂಬೈ ಪೊಲೀಸ್ ಹಾಗೂ ATS ಅಧಿಕಾರಿಗಳೆಂದು ಪರಿಚಯಿಸಿಕೊಂಡು ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹1,31,50,000 ಹಣ ವಂಚಿಸಿರುವ ಘಟನೆ ನಡೆದಿದೆ. ಆರೋಪಿಗಳು
News

ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ; ಸೆಮಿಸ್ಟರ್ ಪರೀಕ್ಷೆ ಮುಂದೂಡಿಕೆ – ರಿಜಿಸ್ಟ್ರಾರ್ ಶುಭರೇಖಾ

ದಸರಾ ಸಂಭ್ರಮದ ನಡುವೆಯೇ ಪದವಿ ಸೆಮಿಸ್ಟರ್ ಪರೀಕ್ಷೆಗಳನ್ನು ನಿಗದಿಪಡಿಸಿರುವುದನ್ನು ವಿರೋಧಿಸಿ ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜಿನ ವಿದ್ಯಾರ್ಥಿಗಳು ಪರೀಕ್ಷೆ ಬಹಿಷ್ಕರಿಸಿ ಕಾಲೇಜಿನ ಗೇಟ್ ಎದುರು ಪ್ರತಿಭಟನೆ ನಡೆಸಿದರು. ಅಕ್ಟೋಬರ್

You cannot copy content of this page