October 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಂಗಳೂರು ಪ್ರೆಸ್ ಕ್ಲಬ್ ದಿನಾಚರಣೆ – ದೀಪಕ್ ಬೆಳ್ತಂಗಡಿಯವರಿಗೆ ವಾರ್ಷಿಕ ಪ್ರಶಸ್ತಿ ಪ್ರದಾನ

ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಹಮ್ಮಿಕೊಳ್ಳಲಾಗಿರುವ ‘ಪ್ರೆಸ್ ಕ್ಲಬ್ ದಿನಾಚರಣೆ’ಯು ಮೇ 24ರಂದು ಬೆಳಿಗ್ಗೆ 10 ಗಂಟೆಗೆ ರೆಡ್ ಕ್ರಾಸ್ ಶತಮಾನೋತ್ಸವ ಭವನದ ಪ್ರೇರಣಾ ಸಭಾಂಗಣದಲ್ಲಿ ಜರುಗಲಿದೆ.

ಈ ವಿಶೇಷ ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ ಅವರು ಉದ್ಘಾಟಿಸಲಿದ್ದಾರೆ. ಇದೇ ಸಂದರ್ಭದಲ್ಲಿ, 2025ನೇ ಸಾಲಿನ ‘ಮಂಗಳೂರು ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿ’ಗೆ ಭಾಜನರಾಗಿರುವ ಖ್ಯಾತ ಸಮಾಜ ಸೇವಕ ದೀಪಕ್ ಜಿ. ಬೆಳ್ತಂಗಡಿ ಅವರಿಗೆ ಮಂಗಳೂರು ನಗರ ಪೊಲೀಸ್ ಕಮಿಷನರೆಟ್‌ನ ಉಪ ಪೊಲೀಸ್ ಆಯುಕ್ತರಾದ (DCP) ಎಚ್.ಎನ್. ಮಿಥುನ್ ಅವರು ಪ್ರಶಸ್ತಿ ನೀಡಿ ಗೌರವಿಸಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ವಹಿಸಲಿದ್ದಾರೆ. ಹಿರಿಯ ಪತ್ರಕರ್ತರಿಗೆ ಗೌರವ ಸನ್ಮಾನವನ್ನು ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಬಿ.ಎ. ಖಾದರ್ ಶಾ ನೆರವೇರಿಸಲಿದ್ದಾರೆ. ಹಾಗೆಯೇ, ದಕ್ಷಿಣ ಕನ್ನಡ ಜಿಲ್ಲಾ ರೆಡ್ ಕ್ರಾಸ್ ಸೊಸೈಟಿಯ ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಅವರು ಅರ್ಹ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್., ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಅನ್ನು ಮಂಗಳೂರು ಹಾಗೂ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ ಭಾಗವಹಿಸಲಿದ್ದಾರೆ ಎಂದು ಪ್ರೆಸ್ ಕ್ಲಬ್‌ನ ಇಬ್ರಾಹಿಂ ಅಡ್ಕಸ್ಥಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

You may also like

News

ಮಂಡ್ಯ ASP ತಿಮ್ಮಯ್ಯ ಇನ್ನಿಲ್ಲ – ಪೊಲೀಸ್ ಇಲಾಖೆಯಲ್ಲಿ ಶೋಕ

ಉಡುಪಿ, ಮಣಿಪಾಲ, ಕೋಟದಲ್ಲೂ ಸೇವೆ ಸಲ್ಲಿಸಿದ್ದ ಅಧಿಕಾರಿ ಮಂಡ್ಯ ಜಿಲ್ಲೆಯ ಅಪರ ಪೊಲೀಸ್ ಅಧೀಕ್ಷಕ (ASP) ತಿಮ್ಮಯ್ಯ ಅವರು ಅನಾರೋಗ್ಯದಿಂದ ಇಂದು ಅಕ್ಟೋಬರ್ 10ರಂದು ಶನಿವಾರ ನಿಧನರಾಗಿದ್ದಾರೆ.
News

ಬೆಳ್ತಂಗಡಿಯ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ಯುವ ಸಂಸತ್ತು–2026

ಯುವ ಸಮುದಾಯ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಲ್ಲಿ ದೇಶದ ಸಂಸದೀಯ ವ್ಯವಸ್ಥೆ ಮತ್ತು ಪ್ರಜಾಪ್ರಭುತ್ವದ ಅರಿವು ಮೂಡಿಸುವ ಉದ್ದೇಶದಿಂದ ತಾಲೂಕು ಮಟ್ಟದ ಯುವ ಸಂಸತ್ತು–2026 ಕಾರ್ಯಕ್ರಮ ಅಕ್ಟೋಬರ್ 8ರಂದು

You cannot copy content of this page