October 13, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕೋರ್ಟ್ ಆವರಣದಲ್ಲೇ ಕುಸಿದು ಬಿದ್ದ ಯುವ ವಕೀಲ ಹೃದಯಾಘಾತದಿಂದ ಸಾವು

ಗಂಗಾವತಿ ನ್ಯಾಯಾಲಯ ಆವರಣದಲ್ಲಿ ಯುವ ವಕೀಲರೊಬ್ಬರು ದಿಢೀರ್ ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟ ದುರ್ಘಟನೆ ನಡೆದಿದೆ. ಕನಕಗಿರಿ ತಾಲೂಕಿನ ಚಿಕ್ಕಮಾದಿಹಾಳ ಗ್ರಾಮದ ನಿವಾಸಿಯಾಗಿದ್ದ 26 ವರ್ಷದ ಯುವ ವಕೀಲ ಕನಕೇಶ್ ಮುರುಡಿ ಮೃತಪಟ್ಟವರು.

ಎಂದಿನಂತೆ ನ್ಯಾಯಾಲಯದ ಕಲಾಪಗಳಿಗೆ ಆಗಮಿಸಿದ್ದ ಕನಕೇಶ್ ಅವರು ಕೋರ್ಟ್ ಆವರಣದಲ್ಲಿ ಇದ್ದ ವೇಳೆ ಏಕಾಏಕಿ ಕುಸಿದು ಬಿದ್ದಿದ್ದಾರೆ. ತಕ್ಷಣ ಅಲ್ಲಿದ್ದ ಸಹೋದ್ಯೋಗಿ ವಕೀಲರು ಅವರನ್ನು ಆಸ್ಪತ್ರೆಗೆ ಸಾಗಿಸಲು ಪ್ರಯತ್ನಿಸಿದರೂ, ಮಾರ್ಗ ಮಧ್ಯದಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಮೃತ ಕನಕೇಶ್ ಅವರು ಹಿರಿಯ ವಕೀಲ ಹೆಚ್.ಎಮ್. ಮಂಜುನಾಥ್ ಅವರ ಬಳಿ ವೃತ್ತಿ ಅಭ್ಯಾಸ ಮಾಡುತ್ತಿದ್ದರು. ಅವರ ಅಕಾಲಿಕ ನಿಧನಕ್ಕೆ ಆಪ್ತ ಸ್ನೇಹಿತ ಆನಂದ ದೇವರಮನಿ ಸೇರಿದಂತೆ ಗಂಗಾವತಿ ವಕೀಲರ ಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದೆ.

ಇತ್ತೀಚಿನ ದಿನಗಳಲ್ಲಿ ಯುವಕರಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದ್ದು, ವೃತ್ತಿ ಜೀವನದ ಒತ್ತಡದ ನಡುವೆಯೂ ಆರೋಗ್ಯದ ಕಡೆ ವಿಶೇಷ ಗಮನ ಹರಿಸುವ ಅಗತ್ಯವಿದೆ ಎಂದು ವೈದ್ಯಕೀಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ನಿಯಮಿತ ಆರೋಗ್ಯ ತಪಾಸಣೆ, ಸಮತೋಲನ ಆಹಾರ, ಸರಿಯಾದ ಜೀವನಶೈಲಿ ಹಾಗೂ ದೈಹಿಕ ವ್ಯಾಯಾಮವನ್ನು ಪಾಲಿಸುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ವೈದ್ಯರು ಸಲಹೆ ನೀಡಿದ್ದಾರೆ.

You may also like

News

‘ಪೊಲೀಸ್–ATS’ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್ ಬೆದರಿಕೆ – ಪುತ್ತೂರಿನ ವ್ಯಕ್ತಿಗೆ ₹1.31 ಕೋಟಿ ವಂಚನೆ

ಪುತ್ತೂರು ತಾಲೂಕಿನ ವ್ಯಕ್ತಿಯೊಬ್ಬರಿಗೆ ಅಪರಿಚಿತ ವ್ಯಕ್ತಿಗಳು ಮುಂಬೈ ಪೊಲೀಸ್ ಹಾಗೂ ATS ಅಧಿಕಾರಿಗಳೆಂದು ಪರಿಚಯಿಸಿಕೊಂಡು ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹1,31,50,000 ಹಣ ವಂಚಿಸಿರುವ ಘಟನೆ ನಡೆದಿದೆ. ಆರೋಪಿಗಳು
News

ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ; ಸೆಮಿಸ್ಟರ್ ಪರೀಕ್ಷೆ ಮುಂದೂಡಿಕೆ – ರಿಜಿಸ್ಟ್ರಾರ್ ಶುಭರೇಖಾ

ದಸರಾ ಸಂಭ್ರಮದ ನಡುವೆಯೇ ಪದವಿ ಸೆಮಿಸ್ಟರ್ ಪರೀಕ್ಷೆಗಳನ್ನು ನಿಗದಿಪಡಿಸಿರುವುದನ್ನು ವಿರೋಧಿಸಿ ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜಿನ ವಿದ್ಯಾರ್ಥಿಗಳು ಪರೀಕ್ಷೆ ಬಹಿಷ್ಕರಿಸಿ ಕಾಲೇಜಿನ ಗೇಟ್ ಎದುರು ಪ್ರತಿಭಟನೆ ನಡೆಸಿದರು. ಅಕ್ಟೋಬರ್

You cannot copy content of this page