July 26, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಹಾಸ್ಟೆಲ್ ಕೊಠಡಿಯಲ್ಲಿ ಕಾಲೇಜು ವಿದ್ಯಾರ್ಥಿನಿ ನೇಣಿಗೆ ಶರಣು

ಬೆಳ್ತಂಗಡಿ ಇಲ್ಲಿನ ಖಾಸಗಿ ಕಾಲೇಜೊಂದರಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ 17 ವರ್ಷದ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯೊಬ್ಬಳು ತಾನು ಉಳಿದುಕೊಂಡಿದ್ದ ಹಾಸ್ಟೆಲ್ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಧೃತಿಗೆಡಿಸುವ ಘಟನೆ ನಡೆದಿದೆ.

ಜೂನ್ 4 ರಂದು ಗುರುವಾರ ಮಧ್ಯಾಹ್ನ ಈ ಘಟನೆ ಬೆಳಕಿಗೆ ಬಂದಿದೆ. ವಿದ್ಯಾರ್ಥಿನಿ ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ತಕ್ಷಣವೇ ಕಾಲೇಜಿನ ಪ್ರಾಂಶುಪಾಲರು ವಿದ್ಯಾರ್ಥಿನಿಯ ಪೋಷಕರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೋಷಕರು ಮಗಳ ಮೃತದೇಹವನ್ನು ಕಂಡು ಕಣ್ಣೀರಿಟ್ಟಿದ್ದಾರೆ.

ಈ ಕುರಿತು ಮೃತರ ಪೋಷಕರು ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಯು.ಡಿ.ಆರ್ (UDR) ಸಂಖ್ಯೆ: 33/2026, ಕಲಂ: 194 ಬಿ.ಎನ್.ಎಸ್.ಎಸ್ (BNSS) ರಡಿಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ಏನೆಂಬುದು ಇನ್ನು ತಿಳಿದುಬಂದಿಲ್ಲವಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.

You may also like

News

ವಿಟ್ಲದ ಇಡ್ಕಿದುವಿನಲ್ಲಿ ಒಂದೇ ರಾತ್ರಿ ದ್ವಿಚಕ್ರ ವಾಹನ ಕಳವು ಹಾಗೂ ವೃದ್ಧನ ಕೊರಳಿನಿಂದ ಚಿನ್ನದ ಸರ ಸುಲಿಗೆ – ಒಂದೇ ಗ್ಯಾಂಗ್ ಕೃತ್ಯ ಶಂಕೆ!

ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಇಡ್ಕಿದು ಗ್ರಾಮದಲ್ಲಿ ಒಂದೇ ರಾತ್ರಿ ಬೈಕ್ ಕಳವು ಹಾಗೂ ಮನೆಯೊಳಗೆ ನುಗ್ಗಿ ವೃದ್ಧನ ಕೊರಳಿನಿಂದ ಚಿನ್ನದ ಸರ ಸುಲಿಗೆ ಮಾಡಿರುವ ಎರಡು
News

Padua College Welcomes Freshers with ‘Utkarsha–2026’

Inspiring Induction Programme Focuses on Values, Leadership and Life Skills Padua College of Commerce and Management organised its “Utkarsha–2026” Induction

You cannot copy content of this page