July 26, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಂಗಳೂರಿನ ದೇರಳಕಟ್ಟೆಯ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ವೀಣಾ ಡೇಸಾ ಇನ್ನಿಲ್ಲ

ಮಂಗಳೂರಿನ ದೇರಳಕಟ್ಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ರಾಣಿಪುರದ 49 ವರ್ಷ ಪ್ರಾಯದ ವೀಣಾ ಡೇಸಾ ಅವರು ಜೂನ್ 7ರಂದು ಭಾನುವಾರ ನಿಧನರಾಗಿದ್ದಾರೆ.

ಮೃತರು ಉಳ್ಳಾಲ ಕಾಪಿಕಾಡ್‌ನ ‘ಜೋನ್ ಬೇಕರಿ’ ಮಾಲೀಕರಾದ ಜೋನ್ ಡೆಸಾ ಅವರ ಪುತ್ರಿಯಾಗಿದ್ದು, ಉರ್ಬನ್ ಡಿಸೋಜ ಅವರ ಧರ್ಮಪತ್ನಿಯಾಗಿದ್ದಾರೆ. ಸದಾ ಹಸನ್ಮುಖಿ ಹಾಗೂ ವಿದ್ಯಾರ್ಥಿಗಳ ಪ್ರೀತಿಯ ಶಿಕ್ಷಕಿಯಾಗಿದ್ದ ವೀಣಾ ಅವರ ನಿಧನಕ್ಕೆ ಶಾಲಾ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ರಾಣಿಪುರ ಪರಿಸರದ ಸಾರ್ವಜನಿಕರು ತೀವ್ರ ಸಂತಾಪ ಸೂಚಿಸಿದ್ದಾರೆ.

ಅಂತಿಮ ಸಂಸ್ಕಾರ:

ಮೃತರ ಅಂತಿಮ ದರ್ಶನ ಹಾಗೂ ಧಾರ್ಮಿಕ ವಿಧಿವಿಧಾನಗಳು ಜೂನ್ 9ರಂದು ಮಂಗಳವಾರ ನಡೆಯಲಿವೆ. ಅಂದು ಸಂಜೆ 4:00 ಗಂಟೆಗೆ ಮೃತರ ನಿವಾಸದಿಂದ ಶವಯಾತ್ರೆಯು ಹೊರಟು, ರಾಣಿಪುರದ ‘ಲೇಡಿ ಕ್ವೀನ್ ಆಫ್ ಯುನಿವರ್ಸ್’ ಚರ್ಚ್‌ನಲ್ಲಿ ಅಂತಿಮ ಸಂಸ್ಕಾರ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

You may also like

News

ವಿಟ್ಲದ ಇಡ್ಕಿದುವಿನಲ್ಲಿ ಒಂದೇ ರಾತ್ರಿ ದ್ವಿಚಕ್ರ ವಾಹನ ಕಳವು ಹಾಗೂ ವೃದ್ಧನ ಕೊರಳಿನಿಂದ ಚಿನ್ನದ ಸರ ಸುಲಿಗೆ – ಒಂದೇ ಗ್ಯಾಂಗ್ ಕೃತ್ಯ ಶಂಕೆ!

ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಇಡ್ಕಿದು ಗ್ರಾಮದಲ್ಲಿ ಒಂದೇ ರಾತ್ರಿ ಬೈಕ್ ಕಳವು ಹಾಗೂ ಮನೆಯೊಳಗೆ ನುಗ್ಗಿ ವೃದ್ಧನ ಕೊರಳಿನಿಂದ ಚಿನ್ನದ ಸರ ಸುಲಿಗೆ ಮಾಡಿರುವ ಎರಡು
News

Padua College Welcomes Freshers with ‘Utkarsha–2026’

Inspiring Induction Programme Focuses on Values, Leadership and Life Skills Padua College of Commerce and Management organised its “Utkarsha–2026” Induction

You cannot copy content of this page