October 13, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮುಖ್ಯ ಶಿಕ್ಷಕರ ಕಿರುಕುಳ ಆರೋಪ -10ನೇ ತರಗತಿ ವಿದ್ಯಾರ್ಥಿಯ ದಾರುಣ ಅಂತ್ಯ

ಶಾಲೆಯ ಮುಖ್ಯ ಶಿಕ್ಷಕರ ಮಾನಸಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಬೀದರ್ ಜಿಲ್ಲೆಯ ಪ್ರತಾಪ್ ನಗರ ಸಮೀಪದ ಖಾಸಗಿ ಶಾಲೆಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು 16 ವರ್ಷ ಪ್ರಾಯದ ಸಮೀರ್ ಎಂದು ಗುರುತಿಸಲಾಗಿದೆ. ಜೂನ್ 10ರಂದು ಬುಧವಾರ ಎಂದಿನಂತೆ ಶಾಲೆಗೆ ತೆರಳಿದ್ದ ಸಮೀರ್, ಬಳಿಕ ಶಾಲಾ ಕಟ್ಟಡದ ನಾಲ್ಕನೇ ಮಹಡಿಯಿಂದ ಕೆಳಗೆ ಬಿದ್ದು ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಘಟನೆಯ ಬೆನ್ನಲ್ಲೇ ಶಾಲಾ ಆಡಳಿತ ಮಂಡಳಿಯ ನಡೆ ಹಲವು ಅನುಮಾನಗಳಿಗೆ ಕಾರಣವಾಗಿದೆ. ವಿದ್ಯಾರ್ಥಿ ಕಟ್ಟಡದಿಂದ ಬಿದ್ದ ವಿಚಾರವನ್ನು ಪೋಷಕರಿಗೆ ತಕ್ಷಣ ತಿಳಿಸದೆ, ಮೃತದೇಹವನ್ನು ನೇರವಾಗಿ ಬೀದರ್ ವೈದ್ಯಕೀಯ ವಿಜ್ಞಾನ ಸಂಸ್ಥೆ (BRIMS) ಶವಗಾರಕ್ಕೆ ರವಾನಿಸಲಾಗಿದೆ ಎನ್ನಲಾಗಿದೆ. ಈ ಕ್ರಮ ಕುಟುಂಬಸ್ಥರು ಹಾಗೂ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಬ್ರಿಮ್ಸ್ ಆಸ್ಪತ್ರೆಯ ಶವಗಾರದ ಎದುರು ಜಮಾಯಿಸಿದ ಪೋಷಕರು ಮತ್ತು ಸಂಬಂಧಿಕರು ಕಣ್ಣೀರಿನಲ್ಲಿ ಮುಳುಗಿದ್ದು, ತಮ್ಮ ಮಗನ ಸಾವಿಗೆ ಶಾಲೆಯ ಮುಖ್ಯ ಶಿಕ್ಷಕರ ಮಾನಸಿಕ ಕಿರುಕುಳವೇ ಕಾರಣ ಎಂದು ಗಂಭೀರ ಆರೋಪ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದು, ಮೃತ ವಿದ್ಯಾರ್ಥಿಯ ಪೋಷಕರು ನೀಡಿದ ದೂರಿನ ಆಧಾರದ ಮೇಲೆ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಾಲಾ ಆಡಳಿತ ಮಂಡಳಿ ಹಾಗೂ ಮುಖ್ಯ ಶಿಕ್ಷಕರ ವಿರುದ್ಧ ತನಿಖೆ ಆರಂಭಗೊಂಡಿದ್ದು, ವಿದ್ಯಾರ್ಥಿಯ ಸಾವಿನ ನಿಜವಾದ ಕಾರಣ ಏನು ಎಂಬುದು ತನಿಖೆಯ ಬಳಿಕವೇ ಸ್ಪಷ್ಟವಾಗಲಿದೆ. ವಿದ್ಯಾರ್ಥಿಯ ಅಕಾಲಿಕ ಸಾವಿನಿಂದ ಕುಟುಂಬಸ್ಥರು, ಸ್ನೇಹಿತರು ಹಾಗೂ ಸ್ಥಳೀಯರಲ್ಲಿ ತೀವ್ರ ದುಃಖ ಆವರಿಸಿದೆ.

You may also like

News

‘ಪೊಲೀಸ್–ATS’ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್ ಬೆದರಿಕೆ – ಪುತ್ತೂರಿನ ವ್ಯಕ್ತಿಗೆ ₹1.31 ಕೋಟಿ ವಂಚನೆ

ಪುತ್ತೂರು ತಾಲೂಕಿನ ವ್ಯಕ್ತಿಯೊಬ್ಬರಿಗೆ ಅಪರಿಚಿತ ವ್ಯಕ್ತಿಗಳು ಮುಂಬೈ ಪೊಲೀಸ್ ಹಾಗೂ ATS ಅಧಿಕಾರಿಗಳೆಂದು ಪರಿಚಯಿಸಿಕೊಂಡು ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹1,31,50,000 ಹಣ ವಂಚಿಸಿರುವ ಘಟನೆ ನಡೆದಿದೆ. ಆರೋಪಿಗಳು
News

ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ; ಸೆಮಿಸ್ಟರ್ ಪರೀಕ್ಷೆ ಮುಂದೂಡಿಕೆ – ರಿಜಿಸ್ಟ್ರಾರ್ ಶುಭರೇಖಾ

ದಸರಾ ಸಂಭ್ರಮದ ನಡುವೆಯೇ ಪದವಿ ಸೆಮಿಸ್ಟರ್ ಪರೀಕ್ಷೆಗಳನ್ನು ನಿಗದಿಪಡಿಸಿರುವುದನ್ನು ವಿರೋಧಿಸಿ ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜಿನ ವಿದ್ಯಾರ್ಥಿಗಳು ಪರೀಕ್ಷೆ ಬಹಿಷ್ಕರಿಸಿ ಕಾಲೇಜಿನ ಗೇಟ್ ಎದುರು ಪ್ರತಿಭಟನೆ ನಡೆಸಿದರು. ಅಕ್ಟೋಬರ್

You cannot copy content of this page