October 10, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಥೊಲಿಕ್ ಸಭಾ ಕೇಂದ್ರೀಯ ಸಮಿತಿಯ ನೂತನ ಆಧ್ಯಾತ್ಮಿಕ ನಿರ್ದೇಶಕರಾದ ವಂದನೀಯ ಫಾದರ್ ಐವನ್ ಮೈಕಲ್ ರೊಡ್ರಿಗಸ್ ಅವರಿಗೆ ಭಾವಪೂರ್ಣ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ಅತ್ಯಂತ ಬಲಿಷ್ಠ ಹಾಗೂ ಪ್ರಭಾವಿ ಸಂಘಟನೆಯಾದ ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.)ಇದರ ಕೇಂದ್ರೀಯ ಸಮಿತಿಯ ನೂತನ ಆಧ್ಯಾತ್ಮಿಕ ನಿರ್ದೇಶಕರಾಗಿ ನೇಮಕಗೊಂಡಿರುವ ವಂದನೀಯ ಫಾದರ್ ಐವನ್ ಮೈಕಲ್ ರೊಡ್ರಿಗಸ್ ಅವರನ್ನು ಇಂದು ಜೂನ್ 14ರಂದು ಭಾನುವಾರ ಅಧಿಕೃತವಾಗಿ ಮಂಗಳೂರು ಧರ್ಮಾಧ್ಯಕ್ಷರ ನಿವಾಸದ ಸಭಾಂಗಣದಲ್ಲಿ ಅಭಿನಂದಿಸಲಾಯಿತು.

ಇಂದು ನಡೆದ ಕೇಂದ್ರೀಯ ಕಾರ್ಯಕಾರಿ ಸಮಿತಿಯ ಪ್ರಮುಖ ಸಭೆಯಲ್ಲಿ, ಕಥೊಲಿಕ್ ಸಭಾ ಕೇಂದ್ರೀಯ ಸಮಿತಿಯ ಅಧ್ಯಕ್ಷ ಸಂತೋಷ್ ಡಿಸೋಜ ಬಜ್ಪೆ ಅವರು ನೂತನ ನಿರ್ದೇಶಕರಿಗೆ ಹೂಗುಚ್ಛ ನೀಡಿ, ಸಂಘಟನೆಯ ಪರವಾಗಿ ಆತ್ಮೀಯವಾಗಿ ಸ್ವಾಗತಿಸಿ, ಶುಭ ಹಾರೈಸಿದರು.

ಈ ಗೌರವಾನ್ವಿತ ಮತ್ತು ಸೌಹಾರ್ದಯುತ ಸಂದರ್ಭದಲ್ಲಿ ಸಂಘಟನೆಯ ಪ್ರಮುಖ ಪದಾಧಿಕಾರಿಗಳು ಉಪಸ್ಥಿತರಿದ್ದು ಸಾಕ್ಷಿಯಾದರು. ವೇದಿಕೆಯಲ್ಲಿ ನಿಕಟಪೂರ್ವ ಅಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್, ಪ್ರಧಾನ ಕಾರ್ಯದರ್ಶಿ ವಿಲ್ಮಾ ಮೊಂತೇರೊ ದೆರೆಬೈಲ್, ಕೋಶಾಧಿಕಾರಿ ಫ್ರಾನ್ಸಿಸ್ ಮೊಂತೇರೊ ಮರಿಯಾಶ್ರಮ್, ಪ್ರಥಮ ಉಪಾಧ್ಯಕ್ಷ ಸ್ಟೀವನ್ ರೊಡ್ರಿಗಸ್, ದ್ವಿತೀಯ ಉಪಾಧ್ಯಕ್ಷ ಆಲ್ಬರ್ಟ್ ಸುನಿಲ್ ಮೊನಿಸ್, ಸಹ ಕಾರ್ಯದರ್ಶಿ ಟ್ರೆಸ್ಸಿ ರೊಡ್ರಿಗಸ್ ಅಮ್ಮೆಂಬಳ ಹಾಗೂ ಸಹ ಕೋಶಾಧಿಕಾರಿ ಸ್ಟ್ಯಾನಿ ಮಿರಾಂದ ನಿರುಡೆ ಉಪಸ್ಥಿತರಿದ್ದರು.

ಇವರೊಂದಿಗೆ ಸಂಘಟನೆಯ ಮಾಜಿ ಅಧ್ಯಕ್ಷರುಗಳು ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರು ಭಾಗವಹಿಸಿ, ನೂತನ ನಿರ್ದೇಶಕರ ನೇತೃತ್ವದಲ್ಲಿ ಸಂಘಟನೆಯು ಮತ್ತಷ್ಟು ಬಲಿಷ್ಠವಾಗಿ ಬೆಳೆಯಲಿ ಎಂದು ಹಾರೈಸಿದರು.

You may also like

News

ಮಂಡ್ಯ ASP ತಿಮ್ಮಯ್ಯ ಇನ್ನಿಲ್ಲ – ಪೊಲೀಸ್ ಇಲಾಖೆಯಲ್ಲಿ ಶೋಕ

ಉಡುಪಿ, ಮಣಿಪಾಲ, ಕೋಟದಲ್ಲೂ ಸೇವೆ ಸಲ್ಲಿಸಿದ್ದ ಅಧಿಕಾರಿ ಮಂಡ್ಯ ಜಿಲ್ಲೆಯ ಅಪರ ಪೊಲೀಸ್ ಅಧೀಕ್ಷಕ (ASP) ತಿಮ್ಮಯ್ಯ ಅವರು ಅನಾರೋಗ್ಯದಿಂದ ಇಂದು ಅಕ್ಟೋಬರ್ 10ರಂದು ಶನಿವಾರ ನಿಧನರಾಗಿದ್ದಾರೆ.
News

ಬೆಳ್ತಂಗಡಿಯ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ಯುವ ಸಂಸತ್ತು–2026

ಯುವ ಸಮುದಾಯ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಲ್ಲಿ ದೇಶದ ಸಂಸದೀಯ ವ್ಯವಸ್ಥೆ ಮತ್ತು ಪ್ರಜಾಪ್ರಭುತ್ವದ ಅರಿವು ಮೂಡಿಸುವ ಉದ್ದೇಶದಿಂದ ತಾಲೂಕು ಮಟ್ಟದ ಯುವ ಸಂಸತ್ತು–2026 ಕಾರ್ಯಕ್ರಮ ಅಕ್ಟೋಬರ್ 8ರಂದು

You cannot copy content of this page