August 25, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ತನ್ನಿಂತಾನೇ ಚಲಿಸಿದ ಟಿಪ್ಪರ್‌ – ಚಕ್ರದಡಿಗೆ ಸಿಲುಕಿ ಚಾಲಕ ದಾರುಣ ಸಾವು

ನಿಲ್ಲಿಸಿದ್ದ ಟಿಪ್ಪರ್ ಲಾರಿಯೊಂದು ಏಕಾಏಕಿ ತನ್ನಿಂತಾನೇ ಚಲಿಸಿದ ಪರಿಣಾಮ, ಅದರ ಚಕ್ರದಡಿಗೆ ಸಿಲುಕಿ ಚಾಲಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಹೃದಯವಿದ್ರಾವಕ ಘಟನೆ ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಪಾದೆಕಲ್ಲು–ಪೆರೋಡಿ ಸರವುಗುಡ್ಡೆ ಪ್ರದೇಶದಲ್ಲಿ ಗುರುವಾರ ಸಂಭವಿಸಿದೆ. ಮೃತರನ್ನು ಬೆಳ್ತಂಗಡಿ ತಾಲೂಕಿನ ಬಂದಾರು ನಿವಾಸಿ ಮಹೇಶ್ ಎಂದು ಗುರುತಿಸಲಾಗಿದೆ.

ಜೂನ್ 18ರಂದು ಗುರುವಾರ ಬೆಳಿಗ್ಗೆ ಸುಮಾರು 10 ಗಂಟೆ ವೇಳೆಗೆ ಈ ದುರ್ಘಟನೆ ನಡೆದಿದೆ. ಕನ್ಯಾನ ಗ್ರಾಮದ ಪಾದೆಕಲ್ಲು–ಪೆರೋಡಿ ಸರವುಗುಡ್ಡೆ ಪ್ರದೇಶದಲ್ಲಿ ಹೊರರಾಜ್ಯಗಳಿಗೆ ಸಾಗಿಸಲಾಗುತ್ತಿದ್ದ ಮಣ್ಣಿನ ತೆರವು ಕಾರ್ಯ ನಡೆಯುತ್ತಿತ್ತು. ಈ ಕಾಮಗಾರಿಗಾಗಿ ಮಹೇಶ್ ಚಾಲನೆ ಮಾಡುತ್ತಿದ್ದ ಟಿಪ್ಪರ್ ಲಾರಿಯನ್ನು ಸ್ಥಳಕ್ಕೆ ತರಲಾಗಿತ್ತು.

ಈ ವೇಳೆ ಟಿಪ್ಪರ್ ಲಾರಿಯಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ವಾಹನವನ್ನು ನಿಲ್ಲಿಸಿದ ಮಹೇಶ್ ಅವರು ಅದರ ದುರಸ್ತಿ ಕಾರ್ಯದಲ್ಲಿ ತೊಡಗಿದ್ದರು. ಲಾರಿಯ ಕೆಳಭಾಗಕ್ಕೆ ಇಳಿದು ದೋಷ ಸರಿಪಡಿಸುತ್ತಿದ್ದ ಸಂದರ್ಭದಲ್ಲೇ ಏಕಾಏಕಿ ಟಿಪ್ಪರ್ ಹಿಂದಕ್ಕೆ ಚಲಿಸಲು ಆರಂಭಿಸಿದೆ.

ಅನಿರೀಕ್ಷಿತವಾಗಿ ಚಲಿಸಿದ ಲಾರಿಯ ಮುಂದಿನ ಚಕ್ರದಡಿಗೆ ಮಹೇಶ್ ಸಿಲುಕಿಕೊಂಡಿದ್ದು, ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನೆ ತಿಳಿಯುತ್ತಿದ್ದಂತೆ ಸ್ಥಳದಲ್ಲಿದ್ದ ಕಾರ್ಮಿಕರು ಹಾಗೂ ಕನ್ಯಾನದ ಸದ್ಗುರು ಅಂಬ್ಯುಲೆನ್ಸ್ ಸಿಬ್ಬಂದಿ ತಕ್ಷಣ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಬಳಿಕ ಲಾರಿಯ ಅಡಿಯಿಂದ ಮೃತದೇಹವನ್ನು ಹೊರತೆಗೆದು ವಿಟ್ಲ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತು. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

You may also like

News

ಮಡಂತ್ಯಾರಿನಲ್ಲಿ ಸಂಭ್ರಮದ ಕೊಂಕಣಿ ಮಾನ್ಯತಾ ದಿವಸ್

ಕೊಂಕಣಿ ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಸಂರಕ್ಷಿಸಿ, ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಐಸಿವೈಎಂ ಮಡಂತ್ಯಾರು ಘಟಕ, ಸಾಮಾಜಿಕ ಸಂವಹನ ಆಯೋಗ, ಕಥೊಲಿಕ್ ಸಭಾ ಮಡಂತ್ಯಾರು ಹಾಗೂ
News

ಸಂಚಾರ ನಿಯಮ ಉಲ್ಲಂಘನೆ – ಪುತ್ತೂರಿನಲ್ಲಿ ಗ್ಲಾಸ್ ಸ್ಟಿಕ್ಕರ್ ಅಳವಡಿಸಿದ ಹಾಗೂ ನಂಬರ್ ಪ್ಲೇಟ್ ಮರೆಮಾಚಿದ ವಾಹನಗಳಿಗೆ ಪೊಲೀಸರ ದಂಡ!

ಪುತ್ತೂರು: ವಾಹನಗಳ ಗ್ಲಾಸ್‌ಗಳಿಗೆ ದಟ್ಟವಾದ ಸ್ಟಿಕ್ಕರ್ ಅಳವಡಿಸಿ ಚಾಲನೆಗೆ ಅಡ್ಡಿಪಡಿಸುತ್ತಿದ್ದ ಹಾಗೂ ನೋಂದಣಿ ಸಂಖ್ಯೆ (ನಂಬರ್ ಪ್ಲೇಟ್) ಮರೆಮಾಚುವ ರೀತಿಯಲ್ಲಿ ಸ್ಟಿಕ್ಕರ್‌ಗಳನ್ನು ಹಾಕಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿ

You cannot copy content of this page