August 26, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಜ್ಪೆ ಬೆಥನಿ ಶಾಲೆಯಲ್ಲಿ ಪರಿಸರ ದಿನಾಚರಣೆ – ಹಸಿರು ಪರಿಸರ ನಿರ್ಮಾಣಕ್ಕೆ ವಿದ್ಯಾರ್ಥಿಗಳ ಸಂಕಲ್ಪ

ಬಜ್ಪೆ ಇಲ್ಲಿನ ಬೆಥನಿ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಅತ್ಯಂತ ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು. ವಿದ್ಯಾರ್ಥಿಗಳಲ್ಲಿ ಪ್ರಕೃತಿಯ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಶಾಲಾ ಆವರಣದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಪರಿಸರ ಆಸಕ್ತರಾದ ಗ್ಲಾಡಿಸ್ ಡಿಸೋಜ ಅವರು ಮಾತನಾಡಿ, “ಪರಿಸರ ಸಂರಕ್ಷಣೆ ಇಂದಿನ ತುರ್ತು ಅಗತ್ಯವಾಗಿದೆ. ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದಲ್ಲಿ ಪರಿಸರ ಸ್ನೇಹಿ ಶೈಲಿಯನ್ನು ಅಳವಡಿಸಿಕೊಳ್ಳಬೇಕು. ಗಿಡಗಳನ್ನು ನೆಟ್ಟು ಪೋಷಿಸುವ ಮೂಲಕ ಪ್ರಕೃತಿಯನ್ನು ಸಮತೋಲನದಲ್ಲಿಡುವುದು ನಮ್ಮೆಲ್ಲರ ಜವಾಬ್ದಾರಿ” ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಶಾಲೆಯ ಮುಖ್ಯ ಶಿಕ್ಷಕರಾದ ವಂದನೀಯ ಭಗಿನಿ ವೀಣಾ ಡಿಸೋಜ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, “ಪ್ರಕೃತಿಯನ್ನು ಕಾಪಾಡುವುದು ಕೇವಲ ಒಂದು ದಿನದ ಆಚರಣೆಯಾಗಬಾರದು, ಅದು ನಮ್ಮ ನಿತ್ಯದ ಕರ್ತವ್ಯ. ವಿದ್ಯಾರ್ಥಿಗಳು ಬಾಲ್ಯದಿಂದಲೇ ಪರಿಸರ ಪ್ರೇಮವನ್ನು ಬೆಳೆಸಿಕೊಂಡಾಗ ಮಾತ್ರ ದೇಶಕ್ಕೆ ಉತ್ತಮ ಭವಿಷ್ಯ ನಿರ್ಮಿಸಲು ಸಾಧ್ಯ” ಎಂದು ತಿಳಿಸಿದರು.

ಸಾಂಸ್ಕೃತಿಕ ವೈವಿಧ್ಯ-ಪ್ರತಿಜ್ಞಾ ವಿಧಿ ಸ್ವೀಕಾರ:

ಪರಿಸರ ಜಾಗೃತಿಯನ್ನು ಮೂಡಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಪ್ರದರ್ಶಿಸಿದ ಪರಿಸರ ಗೀತೆ, ಆಕರ್ಷಕ ನೃತ್ಯ, ಕವನ ವಾಚನ ಹಾಗೂ ಕಿರುನಾಟಕಗಳು ಎಲ್ಲರ ಗಮನ ಸೆಳೆದವು. ಇದೇ ಸಂದರ್ಭದಲ್ಲಿ ಶಾಲಾ ಆವರಣದಲ್ಲಿ ಗಿಡಗಳನ್ನು ನೆಡುವ ಮೂಲಕ ವೃಕ್ಷಾರೋಪಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ವಿದ್ಯಾರ್ಥಿಗಳು ಹಸಿರು ಪರಿಸರ ನಿರ್ಮಾಣಕ್ಕಾಗಿ ಬದ್ಧತೆಯಿಂದ ಶ್ರಮಿಸುವುದಾಗಿ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದರು.

ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕ ವೃಂದ, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಂಡಿದ್ದರು. ಶಿಕ್ಷಕಿ ರಾಜೇಶ್ವರಿ ಅವರು ಎಲ್ಲರನ್ನೂ ಸ್ವಾಗತಿಸಿ, ವಂದನೀಯ ಭಗಿನಿ ಜಾಸ್ಮಿನ್ ವಿಲ್ಮಾ ಅವರು ಕಾರ್ಯಕ್ರಮ ನಿರೂಪಿಸಿದರು. ಕೊನೆಯಲ್ಲಿ ರಾಜೇಶ್ವರಿ ಅವರು ಧನ್ಯವಾದ ಸಮರ್ಪಿಸಿದರು.

You may also like

News

ಮಡಂತ್ಯಾರಿನಲ್ಲಿ ಸಂಭ್ರಮದ ಕೊಂಕಣಿ ಮಾನ್ಯತಾ ದಿವಸ್

ಕೊಂಕಣಿ ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಸಂರಕ್ಷಿಸಿ, ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಐಸಿವೈಎಂ ಮಡಂತ್ಯಾರು ಘಟಕ, ಸಾಮಾಜಿಕ ಸಂವಹನ ಆಯೋಗ, ಕಥೊಲಿಕ್ ಸಭಾ ಮಡಂತ್ಯಾರು ಹಾಗೂ
News

ಸಂಚಾರ ನಿಯಮ ಉಲ್ಲಂಘನೆ – ಪುತ್ತೂರಿನಲ್ಲಿ ಗ್ಲಾಸ್ ಸ್ಟಿಕ್ಕರ್ ಅಳವಡಿಸಿದ ಹಾಗೂ ನಂಬರ್ ಪ್ಲೇಟ್ ಮರೆಮಾಚಿದ ವಾಹನಗಳಿಗೆ ಪೊಲೀಸರ ದಂಡ!

ಪುತ್ತೂರು: ವಾಹನಗಳ ಗ್ಲಾಸ್‌ಗಳಿಗೆ ದಟ್ಟವಾದ ಸ್ಟಿಕ್ಕರ್ ಅಳವಡಿಸಿ ಚಾಲನೆಗೆ ಅಡ್ಡಿಪಡಿಸುತ್ತಿದ್ದ ಹಾಗೂ ನೋಂದಣಿ ಸಂಖ್ಯೆ (ನಂಬರ್ ಪ್ಲೇಟ್) ಮರೆಮಾಚುವ ರೀತಿಯಲ್ಲಿ ಸ್ಟಿಕ್ಕರ್‌ಗಳನ್ನು ಹಾಕಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿ

You cannot copy content of this page