October 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಶ್ಲಾಘನೀಯ ಪೊಲೀಸ್ ಸೇವೆಗೆ ರಾಜ್ಯಮಟ್ಟದ ಗೌರವ – ‘ಡಿಜಿಪಿ ಕಮಾಂಡೇಷನ್ ಡಿಸ್ಕ್’ ಪ್ರಶಸ್ತಿಗೆ ಶೋನ್ ಶಾ ಕೆ.ಜಿ. ಆಯ್ಕೆ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಹಾಗೂ ಶ್ಲಾಘನೀಯ ಸೇವೆ ಸಲ್ಲಿಸಿದ ಪೊಲೀಸ್ ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ ‘ಡಿಜಿಪಿ ಕಮಾಂಡೇಷನ್ ಡಿಸ್ಕ್’ ಪ್ರಶಸ್ತಿಗೆ 2025-26ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆಯ ಎ.ಆರ್.ಎಸ್.ಐ. ಶೋನ್ ಶಾ ಕೆ.ಜಿ. ಅವರು ಆಯ್ಕೆಯಾಗಿರುವುದು ಜಿಲ್ಲೆಯ ಪೊಲೀಸ್ ವಲಯಕ್ಕೆ ಹೆಮ್ಮೆಯ ವಿಷಯವಾಗಿದೆ.

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಂದ (ಡಿಜಿಪಿ) ಪ್ರದಾನಗೊಳ್ಳುವ ಈ ಪ್ರಶಸ್ತಿಯು ಪೊಲೀಸ್ ಇಲಾಖೆಯಲ್ಲಿ ಕರ್ತವ್ಯನಿಷ್ಠೆ, ಪ್ರಾಮಾಣಿಕತೆ, ದಕ್ಷತೆ ಹಾಗೂ ಸಾರ್ವಜನಿಕ ಸೇವೆಯಲ್ಲಿ ತೋರಿದ ವಿಶಿಷ್ಟ ಸಾಧನೆಯನ್ನು ಪರಿಗಣಿಸಿ ನೀಡಲಾಗುವ ಅತ್ಯುನ್ನತ ಗೌರವಗಳಲ್ಲಿ ಒಂದಾಗಿದೆ.

ಶೋನ್ ಶಾ ಕೆ.ಜಿ. ಅವರು ತಮ್ಮ ಸೇವಾ ಅವಧಿಯಲ್ಲಿ ವಿವಿಧ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿ ಜನಸ್ನೇಹಿ ಪೊಲೀಸ್ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದಾರೆ. ವಿಶೇಷವಾಗಿ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸಿದ ಅವಧಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಮತ್ತು ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಬಳಿಕ ಉಳ್ಳಾಲ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಕರ್ತವ್ಯ ನಿರ್ವಹಿಸುತ್ತಾ ತಮ್ಮ ಪ್ರಾಮಾಣಿಕತೆ, ನಿಷ್ಠೆ ಹಾಗೂ ಕರ್ತವ್ಯಪರತೆಯಿಂದ ಮೇಲಧಿಕಾರಿಗಳ ಮೆಚ್ಚುಗೆಗೆ ಪಾತ್ರರಾಗಿದ್ದರು.

ಅವರ ಸಮರ್ಪಿತ ಸೇವೆ, ವೃತ್ತಿಪರ ನೈಪುಣ್ಯ ಹಾಗೂ ಇಲಾಖೆಯ ಅಭಿವೃದ್ಧಿಗೆ ನೀಡಿದ ಕೊಡುಗೆಯನ್ನು ಗುರುತಿಸಿ ಈ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಶೋನ್ ಶಾ ಅವರ ಈ ಸಾಧನೆಗೆ ಪೊಲೀಸ್ ಇಲಾಖೆಯ ಅಧಿಕಾರಿಗಳು, ಸಹೋದ್ಯೋಗಿಗಳು, ಸ್ನೇಹಿತರು ಹಾಗೂ ಸಾರ್ವಜನಿಕ ವಲಯದಿಂದ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ. ಈ ಗೌರವವು ಅವರ ಮುಂದಿನ ಸೇವಾ ಜೀವನಕ್ಕೆ ಮತ್ತಷ್ಟು ಪ್ರೇರಣೆಯಾಗಿದ್ದು, ಯುವ ಪೊಲೀಸ್ ಸಿಬ್ಬಂದಿಗೆ ಮಾದರಿಯಾಗಿದೆ.

You may also like

News

ಕಾಜೂರು ಮಖಾಂ ಉರೂಸ್‌ಗೆ ದಿನಾಂಕ ನಿಗದಿ – 2027ರ ಮಾರ್ಚ್ 19ರಿಂದ 28ರವರೆಗೆ

ಸಯ್ಯಿದ್ ಕುಂಬೋಳ್ ತಂಙಳ್ ಅವರಿಂದ ದಿನಾಂಕ ಘೋಷಣೆ – ಉರೂಸ್ ಪೋಸ್ಟರ್ ಬಿಡುಗಡೆ ಬೆಳ್ತಂಗಡಿ: ದಕ್ಷಿಣ ಭಾರತದ ಅಜ್ಮೀರ್ ಎಂದೇ ಪ್ರಸಿದ್ಧಿ ಪಡೆದಿರುವ ಇತಿಹಾಸ ಪ್ರಸಿದ್ಧ ಆಧ್ಯಾತ್ಮಿಕ
News

ಮಂಡ್ಯ ASP ತಿಮ್ಮಯ್ಯ ಇನ್ನಿಲ್ಲ – ಪೊಲೀಸ್ ಇಲಾಖೆಯಲ್ಲಿ ಶೋಕ

ಉಡುಪಿ, ಮಣಿಪಾಲ, ಕೋಟದಲ್ಲೂ ಸೇವೆ ಸಲ್ಲಿಸಿದ್ದ ಅಧಿಕಾರಿ ಮಂಡ್ಯ ಜಿಲ್ಲೆಯ ಅಪರ ಪೊಲೀಸ್ ಅಧೀಕ್ಷಕ (ASP) ತಿಮ್ಮಯ್ಯ ಅವರು ಅನಾರೋಗ್ಯದಿಂದ ಇಂದು ಅಕ್ಟೋಬರ್ 10ರಂದು ಶನಿವಾರ ನಿಧನರಾಗಿದ್ದಾರೆ.

You cannot copy content of this page