August 25, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಾಜಿ ಮೇಯರ್ ಹಿಲ್ಡಾ ಆಳ್ವಾ ನಿಧನ

ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ಹಾಗೂ ಹಿರಿಯ ರಾಜಕಾರಣಿ ಹಿಲ್ಡಾ ಆಳ್ವಾ ಅವರು ಜೂನ್ 25ರಂದು ಗುರುವಾರ  ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.

ಮಂಗಳೂರಿನ ಪ್ರಗತಿಪರ ನಾಯಕಿಯಾಗಿದ್ದ ಹಿಲ್ಡಾ ಆಳ್ವಾ ಅವರು ತಮ್ಮ ಮೇಯರ್ ಅವಧಿಯಲ್ಲಿ ನಗರದ ಮೂಲಸೌಕರ್ಯ ವೃದ್ಧಿ ಹಾಗೂ ಮಹಿಳಾ ಸಬಲೀಕರಣಕ್ಕೆ ಶ್ರಮಿಸಿದ್ದರು. ಜನಸ್ನೇಹಿ ಆಡಳಿತದ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದರು.

ಮೃತರ ಪಾರ್ಥಿವ ಶರೀರದ ಸಾರ್ವಜನಿಕ ದರ್ಶನ ಹಾಗೂ ಅಂತ್ಯಕ್ರಿಯೆಯ ವಿವರಗಳನ್ನು ಕುಟುಂಬದ ಮೂಲಗಳು ಶೀಘ್ರದಲ್ಲೇ ಪ್ರಕಟಿಸಲಿವೆ ಎಂದು ತಿಳಿದುಬಂದಿದೆ. ಹಿಲ್ಡಾ ಆಳ್ವಾ ಅವರ ನಿಧನಕ್ಕೆ ಜಿಲ್ಲೆಯ ಪ್ರಮುಖ ರಾಜಕೀಯ ಮುಖಂಡರು, ಜನಪ್ರತಿನಿಧಿಗಳು ಹಾಗೂ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

You may also like

News

ಮಡಂತ್ಯಾರಿನಲ್ಲಿ ಸಂಭ್ರಮದ ಕೊಂಕಣಿ ಮಾನ್ಯತಾ ದಿವಸ್

ಕೊಂಕಣಿ ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಸಂರಕ್ಷಿಸಿ, ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಐಸಿವೈಎಂ ಮಡಂತ್ಯಾರು ಘಟಕ, ಸಾಮಾಜಿಕ ಸಂವಹನ ಆಯೋಗ, ಕಥೊಲಿಕ್ ಸಭಾ ಮಡಂತ್ಯಾರು ಹಾಗೂ
News

ಸಂಚಾರ ನಿಯಮ ಉಲ್ಲಂಘನೆ – ಪುತ್ತೂರಿನಲ್ಲಿ ಗ್ಲಾಸ್ ಸ್ಟಿಕ್ಕರ್ ಅಳವಡಿಸಿದ ಹಾಗೂ ನಂಬರ್ ಪ್ಲೇಟ್ ಮರೆಮಾಚಿದ ವಾಹನಗಳಿಗೆ ಪೊಲೀಸರ ದಂಡ!

ಪುತ್ತೂರು: ವಾಹನಗಳ ಗ್ಲಾಸ್‌ಗಳಿಗೆ ದಟ್ಟವಾದ ಸ್ಟಿಕ್ಕರ್ ಅಳವಡಿಸಿ ಚಾಲನೆಗೆ ಅಡ್ಡಿಪಡಿಸುತ್ತಿದ್ದ ಹಾಗೂ ನೋಂದಣಿ ಸಂಖ್ಯೆ (ನಂಬರ್ ಪ್ಲೇಟ್) ಮರೆಮಾಚುವ ರೀತಿಯಲ್ಲಿ ಸ್ಟಿಕ್ಕರ್‌ಗಳನ್ನು ಹಾಕಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿ

You cannot copy content of this page