October 10, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸರ ಸುಲಿಗೆ ಪ್ರಕರಣವನ್ನು ಭೇದಿಸಿದ ಸುರತ್ಕಲ್ ಪೊಲೀಸರು – ಕುಖ್ಯಾತ ಆರೋಪಿ ಜಾಫರ್ ಬಂಧನ

ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ಮಹಿಳೆಯರನ್ನು ಗುರಿಯಾಗಿಸಿ ನಡೆದಿದ್ದ ಎರಡು ಪ್ರಮುಖ ಸರ ಸುಲಿಗೆ ಪ್ರಕರಣಗಳನ್ನು ಭೇದಿಸುವಲ್ಲಿ ಸುರತ್ಕಲ್ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಳವಾಗಿದ್ದ ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿರುವ ಪೊಲೀಸರು, ಆರೋಪಿ 28 ವರ್ಷ ಪ್ರಾಯದ ಮೊಹಮ್ಮದ್ ಅಬ್ದುಲ್ ಜಾಫರ್ ಎಂಬಾತನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ಸುರತ್ಕಲ್‌ನ ಕಾಟಿಪಳ್ಳ 2ನೇ ಬ್ಲಾಕ್ ನಿವಾಸಿಯಾಗಿದ್ದು, ಈತನಿಂದ ಕಳವು ಮಾಡಲಾಗಿದ್ದ ಚಿನ್ನಾಭರಣಗಳನ್ನು ಯಥಾಸ್ಥಿತಿಯಲ್ಲಿ ವಶಕ್ಕೆ ಪಡೆಯಲಾಗಿದೆ.

ನಡೆದಿದ್ದೇನು?

* ಮೊದಲ ಪ್ರಕರಣ (ಜೂನ್ 26): ಚೊಕ್ಕಬೆಟ್ಟು ಆಜಾದ್ ನಗರದ 2ನೇ ಬ್ಲಾಕ್‌ನ ನಿವಾಸಿ ಜಾಹೀದ್ ಎಂಬವರು ಮನೆಯ ಬೆಡ್‌ರೂಮ್‌ನಲ್ಲಿ ಮಲಗಿದ್ದಾಗ, ಮುಂಜಾನೆ 2:00 ಗಂಟೆ ಸುಮಾರಿಗೆ ಬಂದ ಆರೋಪಿಯು ಕಿಟಕಿ ಮೂಲಕ ಕೈಹಾಕಿ ಕುತ್ತಿಗೆಯಲ್ಲಿದ್ದ ಕರಿಮಣಿ ಸರವನ್ನು ಎಳೆದಿದ್ದನು. ಈ ವೇಳೆ ಸರ ತುಂಡಾಗಿದ್ದು, ಸುಮಾರು ₹20,000 ಮೌಲ್ಯದ ಸರದ ಭಾಗವನ್ನು ಆರೋಪಿ ಹೊತ್ತೊಯ್ದಿದ್ದನು.

* ಎರಡನೇ ಪ್ರಕರಣ (ಜೂನ್ 27): ಚೊಕ್ಕಬೆಟ್ಟು 8ನೇ ಬ್ಲಾಕ್‌ನ ಫಯಾಜ್ ಎಂಬವರು ಮುಂಜಾನೆ 5:00 ಗಂಟೆಗೆ ಮಸೀದಿಗೆ ಪ್ರಾರ್ಥನೆಗೆ ತೆರಳಿದ್ದಾಗ, ಮನೆಯ ಬಾಗಿಲು ತೆರೆದು ಒಳನುಗ್ಗಿದ ಆರೋಪಿ, ಮಲಗಿದ್ದ ಅಪ್ರೀನಾ ಅವರ ಕುತ್ತಿಗೆಯಿಂದ ₹1,00,000 ಮೌಲ್ಯದ ಚಿನ್ನದ ಸರವನ್ನು ಸುಲಿಗೆ ಮಾಡಿ ಪರಾರಿಯಾಗಿದ್ದನು.

ಬಂಧನ ಪ್ರಕ್ರಿಯೆ: ಬೆನ್ನಟ್ಟಿ ಕಾರ್ಯಾಚರಣೆ ನಡೆಸಿದ ಸುರತ್ಕಲ್ ಪೊಲೀಸರು ಇಂದು ಜೂನ್ 29ರಂದು ಸೋಮವಾರ ಮಂಗಳೂರು ನಗರದ ಸ್ಟೇಟ್ ಬ್ಯಾಂಕ್ ಬಳಿ ಚಿನ್ನಾಭರಣಗಳ ಸಮೇತ ಇದ್ದ ಆರೋಪಿ ಮೊಹಮ್ಮದ್ ಅಬ್ದುಲ್ ಜಾಫರ್‌ನನ್ನು ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಹಳೇ ಆರೋಪಿ: ಬಂಧಿತ ಆರೋಪಿ ಜಾಫರ್ ಹಳೇ ಅಪರಾಧ ಹಿನ್ನೆಲೆಯುಳ್ಳವನಾಗಿದ್ದು, ಈತನ ವಿರುದ್ಧ ಈಗಾಗಲೇ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಒಂದು ಬಿ.ಎನ್.ಎಸ್. (BNS) ಪ್ರಕರಣ ಹಾಗೂ ಉರ್ವಾ ಪೊಲೀಸ್ ಠಾಣೆಯಲ್ಲಿ ಐಪಿಸಿ (IPC) ಅಡಿಯಲ್ಲಿ ಹಲ್ಲೆ ಮತ್ತು ಜೀವಬೆದರಿಕೆ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

You may also like

News

ಮಂಡ್ಯ ASP ತಿಮ್ಮಯ್ಯ ಇನ್ನಿಲ್ಲ – ಪೊಲೀಸ್ ಇಲಾಖೆಯಲ್ಲಿ ಶೋಕ

ಉಡುಪಿ, ಮಣಿಪಾಲ, ಕೋಟದಲ್ಲೂ ಸೇವೆ ಸಲ್ಲಿಸಿದ್ದ ಅಧಿಕಾರಿ ಮಂಡ್ಯ ಜಿಲ್ಲೆಯ ಅಪರ ಪೊಲೀಸ್ ಅಧೀಕ್ಷಕ (ASP) ತಿಮ್ಮಯ್ಯ ಅವರು ಅನಾರೋಗ್ಯದಿಂದ ಇಂದು ಅಕ್ಟೋಬರ್ 10ರಂದು ಶನಿವಾರ ನಿಧನರಾಗಿದ್ದಾರೆ.
News

ಬೆಳ್ತಂಗಡಿಯ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ಯುವ ಸಂಸತ್ತು–2026

ಯುವ ಸಮುದಾಯ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಲ್ಲಿ ದೇಶದ ಸಂಸದೀಯ ವ್ಯವಸ್ಥೆ ಮತ್ತು ಪ್ರಜಾಪ್ರಭುತ್ವದ ಅರಿವು ಮೂಡಿಸುವ ಉದ್ದೇಶದಿಂದ ತಾಲೂಕು ಮಟ್ಟದ ಯುವ ಸಂಸತ್ತು–2026 ಕಾರ್ಯಕ್ರಮ ಅಕ್ಟೋಬರ್ 8ರಂದು

You cannot copy content of this page