July 10, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಅಕ್ರಮ ಮರಳು ಸಾಗಾಟ – ವಿಟ್ಲ ಪೊಲೀಸರಿಂದ ಎರಡು ಟಿಪ್ಪರ್ ಲಾರಿಗಳ ಜಪ್ತಿ, ಇಬ್ಬರ ಬಂಧನ

ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಲಾರಿಯಲ್ಲಿ ಮರಳು ಸಾಗಾಟ ಮಾಡುತ್ತಿದ್ದ ಎರಡು ಟಿಪ್ಪರ್ ಲಾರಿಗಳನ್ನು ವಿಟ್ಲ ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡಿದ್ದು, ಇಬ್ಬರು ಚಾಲಕರನ್ನು ಬಂಧಿಸಿದ್ದಾರೆ. ಪುತ್ತೂರಿನ ಕೊಡಿಪಾಡಿ ನಿವಾಸಿ 28 ವರ್ಷ ಪ್ರಾಯದ ಮೊಹಮ್ಮದ್ ಇರ್ಪಾನ್ ಹಾಗೂ ಕಬಕ ನಿವಾಸಿ 26 ವರ್ಷ ಪ್ರಾಯದ ನೌಷದ್ ಬಂಧಿತ ಚಾಲಕರು.

ಘಟನೆಯ ವಿವರ:

ದಿನಾಂಕ 04.07.2026 ರಂದು ಮಧ್ಯಾಹ್ನ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಲಾರಿಯಲ್ಲಿ ಮರಳು ಸಾಗಾಟ ಮಾಡುತ್ತಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಪ್ರಕಾಶ ದೇವಾಡಿಗ ಅವರಿಗೆ ಖಚಿತ ಮಾಹಿತಿ ದೊರೆತಿತ್ತು. ತಕ್ಷಣವೇ ಕಾರ್ಯಪ್ರವೃತ್ತರಾದ ಅವರು ತಮ್ಮ ಸಿಬ್ಬಂದಿಗಳೊಂದಿಗೆ ಬಂಟ್ವಾಳ ತಾಲೂಕಿನ ಕುಳ ಗ್ರಾಮದ ಓಜಾಲ ಎಂಬಲ್ಲಿಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಈ ವೇಳೆ ಸ್ಥಳದಲ್ಲಿ KA-51-AA-3057 ಮತ್ತು KA-21-C-6924 ನೊಂದಣಿ ಸಂಖ್ಯೆಯ ಮರಳು ತುಂಬಿದ ಎರಡು ಟಿಪ್ಪರ್ ಲಾರಿಗಳು ಪತ್ತೆಯಾಗಿವೆ. ಲಾರಿ ಚಾಲಕರನ್ನು ವಿಚಾರಣೆಗೊಳಪಡಿಸಿದಾಗ, ಅವರು ಈ ಮರಳನ್ನು ಕಡಬ ತಾಲೂಕಿನ ಅಲಂಕಾರ್ ಎಂಬಲ್ಲಿಂದ ಯಾವುದೇ ಪರವಾನಿಗೆ ಅಥವಾ ಅಧಿಕೃತ ದಾಖಲಾತಿ ಇಲ್ಲದೆ ಕಳ್ಳತನದಿಂದ ತುಂಬಿಸಿಕೊಂಡು ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ.

ಪ್ರಕರಣ ದಾಖಲು:

ಮುಂದಿನ ಕಾನೂನು ಕ್ರಮಕ್ಕಾಗಿ ಪೊಲೀಸರು ಎರಡು ಟಿಪ್ಪರ್ ಲಾರಿಗಳನ್ನು ಹಾಗೂ ಮರಳನ್ನು ವಶಕ್ಕೆ ಪಡೆದಿದ್ದಾರೆ. ಈ ಅಕ್ರಮದ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ: 149/2026 ರಂತೆ, ಭಾರತೀಯ ನ್ಯಾಯ ಸಂಹಿತೆ (BNS 2023) ಕಲಂ 303(2), ಎಂಎಂಡಿಆರ್ ಕಾಯ್ದೆ 1957 ರ ಕಲಂ 4(1), 4(1A), 21 ಹಾಗೂ ಕರ್ನಾಟಕ ಉಪ ಖನಿಜ ಸೌಲತ್ತು ನಿಯಮಾವಳಿ 1994 ರ ಕಲಂ 3, 44 ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

You may also like

News

ಶಿಲುಬೆ ಧ್ವಂಸಗೊಳಿಸಿದರೆ ನಂಬಿಕೆ ನಾಶವಾಗದು – ಪಶ್ಚಿಮ ಬಂಗಾಳದ ಚರ್ಚ್ ಮೇಲಿನ ದಾಳಿಗೆ AICU ರಾಜಾಧ್ಯಕ್ಷ ಅಲ್ವಿನ್ ಡಿಸೋಜ ಪಾನೀರ್ ಆಕ್ರೋಶ

ಪಶ್ಚಿಮ ಬಂಗಾಳದ ಬರೂಯಿಪುರದಲ್ಲಿ ಹೊಸದಾಗಿ ನಿರ್ಮಾಣಗೊಂಡಿರುವ ಚರ್ಚ್ ಮೇಲೆ ದಾಳಿ ನಡೆಸಿ, ಪವಿತ್ರ ಶಿಲುಬೆಯನ್ನು ಧ್ವಂಸಗೊಳಿಸಿರುವ ಘಟನೆ ಅತ್ಯಂತ ಖಂಡನೀಯವಾಗಿದ್ದು, ಧಾರ್ಮಿಕ ಸೌಹಾರ್ದತೆಗೆ ಧಕ್ಕೆ ತರುವ ಇಂತಹ
News

Former CSST General Councillor Sr Josephette Passes Away

The Congregation of the Carmelite Sisters of Saint Teresa (CSST) is mourning the passing of Sr Josephette, former General Councillor

You cannot copy content of this page