October 10, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಥೊಲಿಕ್ ಸಭಾ ವತಿಯಿಂದ ನಿಡ್ಡೋಡಿ ಚರ್ಚ್‌ನಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ

ಸಾಧನೆಗೆ ಪರಿಶ್ರಮವೇ ಬುನಾದಿ – ಫಾದರ್ ಲಿಯೋ ಲೋಬೊ

ಮಂಗಳೂರು ಧರ್ಮಕ್ಷೇತ್ರದ ನಿಡ್ಡೋಡಿ ಸಂತ ತೆರೆಜಮ್ಮನವರ ಚರ್ಚ್ ನಲ್ಲಿ ಇಂದು ಜುಲಾಯ್ 5ರಂದು ಭಾನುವಾರ ಬಲಿಪೂಜೆಯ ಬಳಿಕ ಕಥೊಲಿಕ್ ಸಭಾ ನಿಡ್ಡೋಡಿ ಘಟಕದ ಆಶ್ರಯದಲ್ಲಿ 9 ಸಾಧಕ ವಿದ್ಯಾರ್ಥಿಗಳಿಗೆ ‘ಪ್ರತಿಭಾ ಪುರಸ್ಕಾರ’ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದ ನೇತೃತ್ವ ವಹಿಸಿ, ಪ್ರತಿಭಾ ಪುರಸ್ಕಾರ ಪ್ರಧಾನ ಮಾಡಿದ ಚರ್ಚ್ ಧರ್ಮಗುರುಗಳಾದ ವಂದನೀಯ ಫಾದರ್ ಲಿಯೋ ವಿಲಿಯಂ ಲೋಬೊ ಅವರು ಮಾತನಾಡಿ, “ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಸಾಧನೆ ಮಾಡಿರುವುದು ಹೆಮ್ಮೆಯ ವಿಷಯ. ಭವಿಷ್ಯದಲ್ಲೂ ಇದೇ ರೀತಿಯ ಉತ್ಸಾಹದಿಂದ ಮುನ್ನಡೆದು ಸಮಾಜಕ್ಕೆ ಕೊಡುಗೆ ನೀಡಬೇಕು” ಎಂದು ಪ್ರೋತ್ಸಾಹದಾಯಕ ನುಡಿಗಳನ್ನಾಡಿದರು.

ಗೌರವಿಸಲ್ಪಟ್ಟ ಪ್ರತಿಭೆಗಳು:

S.S.L.C., ದ್ವಿತೀಯ PUC ಹಾಗೂ ಇಂಜಿನಿಯರಿಂಗ್ ಪರೀಕ್ಷೆಗಳಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ಈ ಕೆಳಗಿನ ಒಂಬತ್ತು ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು:

ರಿಯೋಲಿನ್ ಸಲೋಮಿ ಡಿಸೋಜ, ರಿಶಾ ಡಿಸೋಜ, ಮರಿಶಾ ಸೆರಾವೊ, ಜೇನ್ ಕಾರ್ಡೊಜಾ, ಜೆನಿಟಾ ತಾವ್ರೊ, ಲಿಯೋನಾ ಡಿಸೋಜ, ಆಶೆಲ್ ಲವಿಟಾ ಡಿಸಿಲ್ವ, ಆನ್ಯಾ ಡಿಸೋಜ ಹಾಗೂ ಜೋಶ್ವಾ ಡಿಸೋಜ.

ವೇದಿಕೆಯಲ್ಲಿ ಉಪಸ್ಥಿತರಿದ್ದ ಗಣ್ಯರು:

ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷೆ ಶರ್ಮಿಳಾ ಸೆರಾವೊ, ಕಾರ್ಯದರ್ಶಿ ಪ್ರಿಮಾ ಕೊರೆಯಾ, ಕಥೊಲಿಕ್ ಸಭಾ ನಿಡ್ಡೋಡಿ ಘಟಕದ ಅಧ್ಯಕ್ಷೆ ಸರಿತ ತಾವ್ರೊ ಹಾಗೂ ನಿಕಟಪೂರ್ವ ಅಧ್ಯಕ್ಷ ಕಿಶೋರ್ ಡಿಸೋಜ ಅವರು ಉಪಸ್ಥಿತರಿದ್ದು ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಕಾರ್ಯದರ್ಶಿ ಜೀವನ್ ಕ್ರಾಸ್ತಾ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.

You may also like

News

ಮಂಡ್ಯ ASP ತಿಮ್ಮಯ್ಯ ಇನ್ನಿಲ್ಲ – ಪೊಲೀಸ್ ಇಲಾಖೆಯಲ್ಲಿ ಶೋಕ

ಉಡುಪಿ, ಮಣಿಪಾಲ, ಕೋಟದಲ್ಲೂ ಸೇವೆ ಸಲ್ಲಿಸಿದ್ದ ಅಧಿಕಾರಿ ಮಂಡ್ಯ ಜಿಲ್ಲೆಯ ಅಪರ ಪೊಲೀಸ್ ಅಧೀಕ್ಷಕ (ASP) ತಿಮ್ಮಯ್ಯ ಅವರು ಅನಾರೋಗ್ಯದಿಂದ ಇಂದು ಅಕ್ಟೋಬರ್ 10ರಂದು ಶನಿವಾರ ನಿಧನರಾಗಿದ್ದಾರೆ.
News

ಬೆಳ್ತಂಗಡಿಯ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ಯುವ ಸಂಸತ್ತು–2026

ಯುವ ಸಮುದಾಯ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಲ್ಲಿ ದೇಶದ ಸಂಸದೀಯ ವ್ಯವಸ್ಥೆ ಮತ್ತು ಪ್ರಜಾಪ್ರಭುತ್ವದ ಅರಿವು ಮೂಡಿಸುವ ಉದ್ದೇಶದಿಂದ ತಾಲೂಕು ಮಟ್ಟದ ಯುವ ಸಂಸತ್ತು–2026 ಕಾರ್ಯಕ್ರಮ ಅಕ್ಟೋಬರ್ 8ರಂದು

You cannot copy content of this page