October 10, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸುಳ್ಯದಲ್ಲಿ ಹೃದಯಾಘಾತಕ್ಕೆ 9ನೇ ತರಗತಿ ವಿದ್ಯಾರ್ಥಿ ಬಲಿ

ಅನಾರೋಗ್ಯದಿಂದ ಬಳಲುತ್ತಿದ್ದ 9ನೇ ತರಗತಿ ವಿದ್ಯಾರ್ಥಿಯೊಬ್ಬ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಹೃದಯಾಘಾತದಿಂದ ಮೃತಪಟ್ಟ ಹೃದಯವಿದ್ರಾವಕ ಘಟನೆ ಸುಳ್ಯ ತಾಲೂಕಿನ ಎಡಮಂಗಲ ಗ್ರಾಮದ ಕರಿಂಬಿಲದಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಕರಿಂಬಿಲ ನಿವಾಸಿ ಹಾಗೂ ಎನ್ನೂರು ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ 14 ವರ್ಷ ಪ್ರಾಯದ ಶಿಶಿಲ್ ಎಂದು ಗುರುತಿಸಲಾಗಿದೆ.

ಕುಟುಂಬದವರ ಮಾಹಿತಿ ಪ್ರಕಾರ, ಶಿಶಿಲ್ ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಕಾಣಿಯೂರು, ಪುತ್ತೂರು ಹಾಗೂ ಮಂಗಳೂರಿನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಾಣದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲು ಕುಟುಂಬ ನಿರ್ಧರಿಸಿತ್ತು.

ಆದರೆ ಜುಲಾಯ್ 5ರಂದು ಭಾನುವಾರ ರಾತ್ರಿ ಶಿಶಿಲ್ ಅವರ ಆರೋಗ್ಯ ಏಕಾಏಕಿ ಹದಗೆಟ್ಟಿದ್ದು, ತಕ್ಷಣ ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗಮಧ್ಯೆ ಹೃದಯಾಘಾತಕ್ಕೊಳಗಾಗಿ ಕೊನೆಯುಸಿರೆಳೆದಿದ್ದಾರೆ. ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ ಶಿಶಿಲ್, ಯಕ್ಷಗಾನ ಹಾಗೂ ರಂಗಭೂಮಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು. ಅವರ ಅಕಾಲಿಕ ನಿಧನ ಕುಟುಂಬ, ಶಾಲೆ ಹಾಗೂ ಗ್ರಾಮದಲ್ಲಿ ತೀವ್ರ ದುಃಖದ ವಾತಾವರಣ ಸೃಷ್ಟಿಸಿದೆ. ಶಿಶಿಲ್ ತಂದೆ-ತಾಯಿ ಹಾಗೂ ಒಬ್ಬ ಸಹೋದರನನ್ನು ಅಗಲಿದ್ದಾರೆ.

You may also like

News

ಮಂಡ್ಯ ASP ತಿಮ್ಮಯ್ಯ ಇನ್ನಿಲ್ಲ – ಪೊಲೀಸ್ ಇಲಾಖೆಯಲ್ಲಿ ಶೋಕ

ಉಡುಪಿ, ಮಣಿಪಾಲ, ಕೋಟದಲ್ಲೂ ಸೇವೆ ಸಲ್ಲಿಸಿದ್ದ ಅಧಿಕಾರಿ ಮಂಡ್ಯ ಜಿಲ್ಲೆಯ ಅಪರ ಪೊಲೀಸ್ ಅಧೀಕ್ಷಕ (ASP) ತಿಮ್ಮಯ್ಯ ಅವರು ಅನಾರೋಗ್ಯದಿಂದ ಇಂದು ಅಕ್ಟೋಬರ್ 10ರಂದು ಶನಿವಾರ ನಿಧನರಾಗಿದ್ದಾರೆ.
News

ಬೆಳ್ತಂಗಡಿಯ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ಯುವ ಸಂಸತ್ತು–2026

ಯುವ ಸಮುದಾಯ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಲ್ಲಿ ದೇಶದ ಸಂಸದೀಯ ವ್ಯವಸ್ಥೆ ಮತ್ತು ಪ್ರಜಾಪ್ರಭುತ್ವದ ಅರಿವು ಮೂಡಿಸುವ ಉದ್ದೇಶದಿಂದ ತಾಲೂಕು ಮಟ್ಟದ ಯುವ ಸಂಸತ್ತು–2026 ಕಾರ್ಯಕ್ರಮ ಅಕ್ಟೋಬರ್ 8ರಂದು

You cannot copy content of this page