October 9, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಾಣಿ ಮೂಲದ ಹಿರಿಯ ವಕೀಲ ಚಿದಾನಂದ ಡಿ. ಹೈಕೋರ್ಟ್ ಸರ್ಕಾರಿ ವಕೀಲರಾಗಿ ಆಯ್ಕೆ

ಪ್ರಸಿದ್ಧ ಜವುಳಿ ವ್ಯಾಪಾರಿಯಾಗಿದ್ದ ದಿವಂಗತ ಕೆ.ಎಂ. ಗಿರಿಯಪ್ಪ ಪೂಜಾರಿ ಹಾಗೂ ಸೀತಮ್ಮ ದಂಪತಿಯ ಪುತ್ರ

ಕರ್ನಾಟಕ ಹೈಕೋರ್ಟ್‌ಗೆ ಹೆಚ್ಚುವರಿ ರಾಜ್ಯ ಸರ್ಕಾರಿ ವಕೀಲರಾಗಿ (A.G.A.) ಮಾಣಿ ಮೂಲದ ಚಿದಾನಂದ ಡಿ. ಬಂಟ್ವಾಳ ಅವರು ನೇಮಕಗೊಂಡಿದ್ದಾರೆ. ಇವರು ಮಾಣಿಯ ಪ್ರಸಿದ್ಧ ಜವುಳಿ ವ್ಯಾಪಾರಿಯಾಗಿದ್ದ ದಿವಂಗತ ಕೆ.ಎಂ. ಗಿರಿಯಪ್ಪ ಪೂಜಾರಿ ಮತ್ತು ಸೀತಮ್ಮ ದಂಪತಿಯ ಪುತ್ರರಾಗಿದ್ದಾರೆ.

ಪ್ರತಿಭಾವಂತ ಹಳೆ ವಿದ್ಯಾರ್ಥಿ:

ತಮ್ಮ ಪ್ರಾಥಮಿಕ ಶಿಕ್ಷಣವನ್ನು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಬರಿಮಾರಿನಲ್ಲಿ ಪೂರೈಸಿದ ಇವರು, ಪ್ರೌಢ ಶಿಕ್ಷಣವನ್ನು ಕರ್ನಾಟಕ ಹೈಸ್ಕೂಲ್ ಮಾಣಿಯಲ್ಲಿ ಮುಗಿಸಿದರು. ಬಳಿಕ ಮಂಗಳೂರಿನ ಪ್ರತಿಷ್ಠಿತ SDM ಕಾನೂನು ಕಾಲೇಜಿನಲ್ಲಿ ನ್ಯಾಯಶಾಸ್ತ್ರ ಪದವಿ ಪಡೆದು, ಸಂಸ್ಥೆಯ ಪ್ರತಿಭಾವಂತ ಹಳೆ ವಿದ್ಯಾರ್ಥಿಯಾಗಿ ಗುರುತಿಸಿಕೊಂಡಿದ್ದಾರೆ.

ಪ್ರಸ್ತುತ ಹೈಕೋರ್ಟ್‌ನ ಹೆಚ್ಚುವರಿ ರಾಜ್ಯ ಸರ್ಕಾರಿ ವಕೀಲರಾಗಿ ನೇಮಕಗೊಳ್ಳುವ ಮೂಲಕ ಇವರು ಬಂಟ್ವಾಳ ಮತ್ತು ಮಾಣಿ ವಲಯಕ್ಕೆ ಕೀರ್ತಿ ತಂದಿದ್ದಾರೆ. ಇವರ ಈ ಸಾಧನೆಗೆ ಸ್ಥಳೀಯ ಗಣ್ಯರು ಹಾಗೂ ಸಾರ್ವಜನಿಕರು ಹರ್ಷ ವ್ಯಕ್ತಪಡಿಸಿ, ಅಭಿನಂದನೆ ಸಲ್ಲಿಸಿದ್ದಾರೆ.

You may also like

News

ಆಲ್ಬರ್ಟ್ ರೇಗೊ ಸಾವು ನಿಗೂಢ – ಎರಡು ತಿಂಗಳ ಬಳಿಕ ಶವ ಹೊರತೆಗೆದು FSL ಪರೀಕ್ಷೆ!

ಮಂಗಳೂರಿನಲ್ಲಿ ಅಪರೂಪದ ಪ್ರಕರಣ – ಮಗಳ ವಿರುದ್ಧ ದೂರು, ದೆರೆಬೈಲ್ ಚರ್ಚ್ ಆವರಣದ ದಫನಭೂಮಿಯಲ್ಲಿ ಪೊಲೀಸ್ ತನಿಖೆ ಮಂಗಳೂರು : ಆಸ್ತಿಗಾಗಿ ಮಗಳೇ ತನ್ನ ತಂದೆಯನ್ನು ಕೊಂದು,
News

ನೈನಾಡಿನಲ್ಲಿ ಪಾದುವಾ ಕಾಲೇಜಿನ 7 ದಿನಗಳ NSS ಶಿಬಿರಕ್ಕೆ ಚಾಲನೆ

“ಸೇವೆಯ ಮೂಲಕ ವಿದ್ಯಾರ್ಥಿಗಳು ಜೀವನದ ಮೌಲ್ಯಗಳನ್ನು ಕಲಿಯುತ್ತಾರೆ” –  ಫಾದರ್ ಅರುಣ್ ವಿಲ್ಸನ್ ಲೋಬೊ ಪಾದುವಾ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (NSS) ಘಟಕದ ಏಳು

You cannot copy content of this page