July 25, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ – ಪ್ರಮುಖ ಆರೋಪಿ ಶಾಖಿರ್ ಬಂಧನ

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಪರಂಗಿಪೇಟೆಯಲ್ಲಿರುವ ಕೆನರಾ ಬ್ಯಾಂಕ್‌ನಲ್ಲಿ ನಡೆದ ಕಳವು ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ತನಿಖೆ ಮುಂದುವರಿದಿದ್ದು, ಇನ್ನಿತರ ಆರೋಪಿಗಳ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ.

ಕಳೆದ ಜುಲಾಯಿ 13ರಂದು ಪರಂಗಿಪೇಟೆಯ ಕೆನರಾ ಬ್ಯಾಂಕಿನ ಮೇಲ್ಛಾವಣಿಯನ್ನು ಕೊರೆದು ಒಳನುಗ್ಗಿದ ದುಷ್ಕರ್ಮಿಗಳು ಬ್ಯಾಂಕಿನಲ್ಲಿದ್ದ ಹಣ ಹಾಗೂ ಚಿನ್ನಾಭರಣಗಳನ್ನು ಕಳವು ಮಾಡಲು ಯತ್ನಿಸಿದ್ದರು. ಘಟನೆ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ.106/2026ರಡಿ ಭಾರತೀಯ ನ್ಯಾಯ ಸಂಹಿತೆ (BNS-2023)ಯ ಕಲಂ 331(3), 331(4), 305(a) ಹಾಗೂ 62ರಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿತ್ತು.

ಪ್ರಕರಣದ ತನಿಖೆ ವೇಳೆ ಆರೋಪಿಗಳ ಪೈಕಿ ಬಂಟ್ವಾಳದ ಮಾರಿಪಳ್ಳ ನಿವಾಸಿ 33 ವರ್ಷ ಪ್ರಾಯದ ಮೊಹಮ್ಮದ್ ಶಾಖಿರ್ ಎಂಬಾತನನ್ನು ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಜುಲೈ 22ರಂದು ದಸ್ತಗಿರಿ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ಪ್ರಕರಣದ ಇತರೆ ಆರೋಪಿಗಳ ಪತ್ತೆ ಹಾಗೂ ಕಳವು ಯತ್ನದ ಸಂಪೂರ್ಣ ಜಾಲವನ್ನು ಬಯಲಿಗೆಳೆಯುವ ನಿಟ್ಟಿನಲ್ಲಿ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

You may also like

News

ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕೊಲಜಿ ಕೇಂದ್ರ ಆರಂಭ – ‘ಆರೋಗ್ಯ ಬೈ RVR’ ದೇಶಾದ್ಯಂತ ವಿಸ್ತರಣೆ ಘೋಷಣೆ

ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ RVR ಹೆಲ್ತ್‌ಕೇರ್ ಮತ್ತೊಂದು ಮಹತ್ವದ ಹೆಜ್ಜೆ ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಯನ್ನು ಜನಸಾಮಾನ್ಯರಿಗೆ ತಲುಪಿಸುವ ಧ್ಯೇಯದೊಂದಿಗೆ ಕಾರ್ಯನಿರ್ವಹಿಸುತ್ತಿರುವ RVR
News

ಬೋಂದೆಲ್ ಸಂತ ಲಾರೆನ್ಸ್ ಪುಣ್ಯಕ್ಷೇತ್ರದಲ್ಲಿ ಆಗಸ್ಟ್ 10ರಂದು ವಿಜೃಂಭಣೆಯಿಂದ ನಡೆಯಲಿರುವ ವಾರ್ಷಿಕ ಮಹೋತ್ಸವ

ವೈದ್ಯಕೀಯ ಸಹಾಯ ನಿಧಿಗೆ ಸಹಾಯ ಹಸ್ತ ನೀಡಲು ರೆಕ್ಟರ್ ಫಾದರ್ ಬೇಸಿಲ್ ವಾಸ್  ಕರೆ ಮಂಗಳೂರು ಧರ್ಮಕ್ಷೇತ್ರಕ್ಕೆ ಒಳಪಟ್ಟ ಪ್ರಸಿದ್ಧ ಬೋಂದೆಲ್ ಸಂತ ಲಾರೆನ್ಸ್ ಚರ್ಚ್ ಮತ್ತು

You cannot copy content of this page