October 10, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ನೀಟ್ ಹೋರಾಟಕ್ಕೆ ಧಾರ್ಮಿಕ ಬಣ್ಣ, ಶಾಂತಿ ಭಂಗಕ್ಕೆ ಯತ್ನ – ವಿಟ್ಲದಲ್ಲಿ ವ್ಯಕ್ತಿಯ ಬಂಧನ

ನೀಟ್ (NEET) ಹೋರಾಟಕ್ಕೆ ಧಾರ್ಮಿಕ ಬಣ್ಣ ಬಳಿದು, ಸಮುದಾಯಗಳ ನಡುವೆ ದ್ವೇಷ ಮೂಡಿಸುವ ಹಾಗೂ ಸಾರ್ವಜನಿಕ ಶಾಂತಿ-ನೆಮ್ಮದಿಗೆ ಭಂಗ ತರುವಂತಹ ಅವಹೇಳನಕಾರಿ ಸಂದೇಶ ಪ್ರಸಾರ ಮಾಡಿದ ಆರೋಪಿಯನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಂಟ್ವಾಳದ ಕೇಪು ನಿವಾಸಿ 36 ವರ್ಷ ಪ್ರಾಯದ ಭರತ್ ಎಂದು ಗುರುತಿಸಲಾಗಿದೆ.

ಘಟನೆಯ ಹಿನ್ನೆಲೆ:

ದೂರುದಾರರು ‘KFC KHANDIGA’ ಎಂಬ ವಾಟ್ಸಾಪ್ ಗ್ರೂಪ್‌ನಲ್ಲಿ ಸದಸ್ಯರಾಗಿದ್ದು, ಜುಲಾಯಿ 23ರಂದು ಗ್ರೂಪ್‌ಗೆ ಬಂದ ಸ್ಕ್ರೀನ್‌ಶಾಟ್‌ ಒಂದನ್ನು ಗಮನಿಸಿದ್ದರು. ಅದರಲ್ಲಿ ಸಮಾಜದಲ್ಲಿ ವೈಮನಸ್ಸು ಬೆಳೆಸುವಂತಹ ಬರಹಗಳಿದ್ದು, ಈ ಕುರಿತು ಪರಿಶೀಲಿಸಿದಾಗ ಆರೋಪಿ ಭರತ್ ತನ್ನ ವಾಟ್ಸಾಪ್ ಸ್ಟೇಟಸ್‌ನಲ್ಲಿ ಈ ಅವಹೇಳನಕಾರಿ ಬರಹವನ್ನು ಹಂಚಿಕೊಂಡಿರುವುದು ಕಂಡುಬಂದಿತ್ತು. ಈ ಸಂಬಂಧ ನೀಡಿದ ದೂರಿನ ಮೇರೆಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

* ಪ್ರಕರಣ ಕ್ರಮಾಂಕ: ಅ.ಕ್ರ: 160/2026

* ದಾಖಲಾದ ಕಾಯ್ದೆ: ಭಾರತೀಯ ನ್ಯಾಯ ಸಂಹಿತೆ (BNS 2023) ಕಲಂ 197(1)(a), 197(1)(c) ಹಾಗೂ 353(2)

ಪ್ರಕರಣ ದಾಖಲಿಸಿಕೊಂಡ ವಿಟ್ಲ ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿ ಭರತ್‌ನನ್ನು ದಸ್ತಗಿರಿ ಮಾಡಿದ್ದು, ಸದ್ಯ ಬಂಧಿತನನ್ನು ಸುದೀರ್ಘ ವಿಚಾರಣೆಗೆ ಒಳಪಡಿಸಿದ್ದಾರೆ.

You may also like

News

ಮಂಡ್ಯ ASP ತಿಮ್ಮಯ್ಯ ಇನ್ನಿಲ್ಲ – ಪೊಲೀಸ್ ಇಲಾಖೆಯಲ್ಲಿ ಶೋಕ

ಉಡುಪಿ, ಮಣಿಪಾಲ, ಕೋಟದಲ್ಲೂ ಸೇವೆ ಸಲ್ಲಿಸಿದ್ದ ಅಧಿಕಾರಿ ಮಂಡ್ಯ ಜಿಲ್ಲೆಯ ಅಪರ ಪೊಲೀಸ್ ಅಧೀಕ್ಷಕ (ASP) ತಿಮ್ಮಯ್ಯ ಅವರು ಅನಾರೋಗ್ಯದಿಂದ ಇಂದು ಅಕ್ಟೋಬರ್ 10ರಂದು ಶನಿವಾರ ನಿಧನರಾಗಿದ್ದಾರೆ.
News

ಬೆಳ್ತಂಗಡಿಯ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ಯುವ ಸಂಸತ್ತು–2026

ಯುವ ಸಮುದಾಯ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಲ್ಲಿ ದೇಶದ ಸಂಸದೀಯ ವ್ಯವಸ್ಥೆ ಮತ್ತು ಪ್ರಜಾಪ್ರಭುತ್ವದ ಅರಿವು ಮೂಡಿಸುವ ಉದ್ದೇಶದಿಂದ ತಾಲೂಕು ಮಟ್ಟದ ಯುವ ಸಂಸತ್ತು–2026 ಕಾರ್ಯಕ್ರಮ ಅಕ್ಟೋಬರ್ 8ರಂದು

You cannot copy content of this page