August 5, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಿಲಾಗ್ರಿಸ್ ಕಾಲೇಜಿನಲ್ಲಿ ವಿದ್ಯಾರ್ಥಿ ಪರಿಷತ್‌, ಸಂಘಗಳು, ಆಡ್-ಆನ್ ಕೋರ್ಸ್‌ಗಳಿಗೆ ಚಾಲನೆ

ಮಂಗಳೂರು ನಗರದ ಮಿಲಾಗ್ರಿಸ್ ಕಾಲೇಜಿನಲ್ಲಿ ವಿದ್ಯಾರ್ಥಿ ಪರಿಷತ್‌, ವಿವಿಧ ವಿದ್ಯಾರ್ಥಿ ಸಂಘಗಳು ಹಾಗೂ ಆಡ್-ಆನ್ ಕೋರ್ಸ್‌ಗಳ ಉದ್ಘಾಟನಾ ಸಮಾರಂಭ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ನಗರ ಸಂಚಾರ ವಿಭಾಗದ ಸಹಾಯಕ ಪೊಲೀಸ್ ಆಯುಕ್ತೆ ನಜ್ಮಾ ಫಾರೂಕಿ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ವಿದ್ಯಾರ್ಥಿಗಳು ಕೇವಲ ಶೈಕ್ಷಣಿಕ ಸಾಧನೆಗೆ ಸೀಮಿತವಾಗದೆ ನಾಯಕತ್ವ, ಶಿಸ್ತು, ಸಾಮಾಜಿಕ ಜವಾಬ್ದಾರಿ ಹಾಗೂ ಉತ್ತಮ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು. ವಿದ್ಯಾರ್ಥಿ ಪರಿಷತ್ತು ಹಾಗೂ ವಿವಿಧ ಸಂಘಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದರಿಂದ ಸಂಘಟನಾ ಕೌಶಲ್ಯ, ಆತ್ಮವಿಶ್ವಾಸ ಮತ್ತು ಸೇವಾ ಮನೋಭಾವ ವೃದ್ಧಿಯಾಗುತ್ತದೆ. ಸಮಾಜದತ್ತ ಜವಾಬ್ದಾರಿಯುತ ನಿಲುವು ಬೆಳೆಸಿಕೊಳ್ಳುವುದು ಇಂದಿನ ಯುವಜನರ ಪ್ರಮುಖ ಕರ್ತವ್ಯವಾಗಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಿಲಾಗ್ರಿಸ್ ಶೈಕ್ಷಣಿಕ ಸಂಸ್ಥೆಗಳ ಪ್ರತಿನಿಧಿ ಹಾಗೂ ಮಿಲಾಗ್ರಿಸ್ ಚರ್ಚ್ ಇದರ ಪ್ರಧಾನ ಧರ್ಮಗುರು ವಂದನೀಯ ಐವನ್ ಮೈಕಲ್ ರೊಡ್ರಿಗಸ್ ಮಾತನಾಡಿ, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ವಿದ್ಯಾರ್ಥಿ ಸಂಘಟನೆಗಳು ಹಾಗೂ ಆಡ್-ಆನ್ ಕೋರ್ಸ್‌ಗಳು ಪ್ರಮುಖ ಪಾತ್ರವಹಿಸುತ್ತವೆ. ಪಠ್ಯಕ್ರಮದೊಂದಿಗೆ ಕೌಶಲ್ಯಾಧಾರಿತ ಶಿಕ್ಷಣವನ್ನು ಅಳವಡಿಸಿಕೊಳ್ಳುವುದರಿಂದ ಭವಿಷ್ಯದ ಉದ್ಯೋಗಾವಕಾಶಗಳಿಗೆ ವಿದ್ಯಾರ್ಥಿಗಳು ಸಮರ್ಥವಾಗಿ ಸಜ್ಜಾಗಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲ ಹಾಗೂ ಕ್ಯಾಂಪಸ್ ನಿರ್ದೇಶಕರಾದ ವಂದನೀಯ ಆಲ್ವಿನ್ ಸೆರಾವೊ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

ಕಾರ್ಯಕ್ರಮದಲ್ಲಿ ಚರ್ಚ್ ಪಾಲನಾ ಪರಿಷತ್ ಇದರ ಉಪಾಧ್ಯಕ್ಷ ಡಿಕ್ಸನ್, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಮೆಲ್ವಿನ್ ವಾಸ್, ಮಿಲಾಗ್ರಿಸ್ ಸೆಂಟ್ರಲ್ ಸ್ಕೂಲ್‌ನ ಪ್ರಾಂಶುಪಾಲ ವಂದನೀಯ ಉದಯ್ ಫೆರ್ನಾಂಡಿಸ್, ಐಕ್ಯೂಎಸಿ ಸಂಯೋಜಕಿ ಚೇತನಾ, ಎನ್‌ಸಿಸಿ ಅಧಿಕಾರಿ ಲೆ. ಡೆನ್ಜಿಲ್ ಎಡ್ರೋಡ್ ಪಿಂಟೊ, ಆಡ್-ಆನ್ ಕೋರ್ಸ್ ಸಂಯೋಜಕಿ ಹರ್ಷಾ, ಸಂಘಗಳ ಸಂಯೋಜಕಿ ಮಂಜುಷಾ, ವಿವಿಧ ಸಂಪನ್ಮೂಲ ವ್ಯಕ್ತಿಗಳು, ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿ ನಾಯಕ ವಿಯೋಲ್ ರೆನ್ವಿಲ್ ಮೊಂತೇರೊ ಸ್ವಾಗತಿಸಿದರು. ಫಾತಿಮಾ ಫರಾನ ವಂದಿಸಿದರು. ಪ್ರಿನ್ಸೆಲ್ ಕಾರ್ಯಕ್ರಮ ನಿರೂಪಿಸಿದರು.

 

You may also like

News

ಯುನಿಕೋಡ್ ಪರಿವರ್ತನೆ – ಬಂಟ್ವಾಳ ಭೂಮಿ ಶಾಖೆಯ ಸೇವೆ ತಾತ್ಕಾಲಿಕ ಸ್ಥಗಿತ

ಭೂಮಿ ತಂತ್ರಾಂಶದಲ್ಲಿ ಯುನಿಕೋಡ್ ಪರಿವರ್ತನೆ (Unicode Conversion) ಕಾರ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕು ಭೂಮಿ ಶಾಖೆಯ ಕೆಲವು ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ತಹಶೀಲ್ದಾರ್ ಪ್ರಕಟಣೆಯಲ್ಲಿ
News

ಸಾರ್ವಜನಿಕರ ಧ್ವನಿಗೆ ಸಿಕ್ಕ ಜಯ – ಕರಾವಳಿ ಸುದ್ದಿ ವರದಿ ಬಳಿಕ ಜೋಗಿಬೆಟ್ಟು ರಸ್ತೆಯಲ್ಲಿ ಕಾಮಗಾರಿ ಆರಂಭ

ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಮಳೆ ಬಂದಾಗಲೆಲ್ಲ ಉಂಟಾಗುತ್ತಿದ್ದ ಕೃತಕ ನೆರೆ ಸಮಸ್ಯೆಗೆ ಕೊನೆಗೂ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗುತ್ತಿಗೆ ವಹಿಸಿಕೊಂಡಿರುವ ಕಂಪೆನಿ ಎಚ್ಚೆತ್ತುಕೊಂಡಿದೆ.

You cannot copy content of this page