October 9, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಯುನಿಕೋಡ್ ಪರಿವರ್ತನೆ – ಬಂಟ್ವಾಳ ಭೂಮಿ ಶಾಖೆಯ ಸೇವೆ ತಾತ್ಕಾಲಿಕ ಸ್ಥಗಿತ

ಭೂಮಿ ತಂತ್ರಾಂಶದಲ್ಲಿ ಯುನಿಕೋಡ್ ಪರಿವರ್ತನೆ (Unicode Conversion) ಕಾರ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕು ಭೂಮಿ ಶಾಖೆಯ ಕೆಲವು ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಹಶೀಲ್ದಾರ್ ಕಚೇರಿ ಹೊರಡಿಸಿರುವ ಪ್ರಕಟಣೆಯ ಪ್ರಕಾರ, 2026 ಆಗಸ್ಟ್ 3ರಿಂದ ಆಗಸ್ಟ್ 17ರವರೆಗೆ ಬಂಟ್ವಾಳ ತಾಲೂಕು ಭೂಮಿ ಶಾಖೆಯಲ್ಲಿ ಯಾವುದೇ ಹೊಸ ಅರ್ಜಿಗಳ ಸ್ವೀಕಾರ ಹಾಗೂ ಸಂಬಂಧಿತ ವ್ಯವಹಾರಗಳನ್ನು ನಡೆಸಲಾಗುವುದಿಲ್ಲ. ಇದೇ ಅವಧಿಯಲ್ಲಿ ಆರ್‌ಟಿಸಿ (RTC) ಮತ್ತು ಮ್ಯುಟೇಷನ್ (Mutation) ಪ್ರತಿಗಳನ್ನು ಸಾರ್ವಜನಿಕರಿಗೆ ವಿತರಿಸುವ ಸೇವೆಯೂ ಲಭ್ಯವಿರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಭೂಮಿ ತಂತ್ರಾಂಶದ ಯುನಿಕೋಡ್ ಪರಿವರ್ತನೆ ಕಾರ್ಯವನ್ನು ಸುಗಮವಾಗಿ ಮತ್ತು ಶೀಘ್ರ ಪೂರ್ಣಗೊಳಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ಸಾರ್ವಜನಿಕರು ಈ ಮಾಹಿತಿಯನ್ನು ಗಮನಿಸಿ ಅನಗತ್ಯವಾಗಿ ಕಚೇರಿಗೆ ಭೇಟಿ ನೀಡುವುದನ್ನು ತಪ್ಪಿಸಿ ಸಹಕರಿಸುವಂತೆ ತಹಶೀಲ್ದಾರ್ ಮನವಿ ಮಾಡಿದ್ದಾರೆ.

You may also like

News

ಆಲ್ಬರ್ಟ್ ರೇಗೊ ಸಾವು ನಿಗೂಢ – ಎರಡು ತಿಂಗಳ ಬಳಿಕ ಶವ ಹೊರತೆಗೆದು FSL ಪರೀಕ್ಷೆ!

ಮಂಗಳೂರಿನಲ್ಲಿ ಅಪರೂಪದ ಪ್ರಕರಣ – ಮಗಳ ವಿರುದ್ಧ ದೂರು, ದೆರೆಬೈಲ್ ಚರ್ಚ್ ಆವರಣದ ದಫನಭೂಮಿಯಲ್ಲಿ ಪೊಲೀಸ್ ತನಿಖೆ ಮಂಗಳೂರು : ಆಸ್ತಿಗಾಗಿ ಮಗಳೇ ತನ್ನ ತಂದೆಯನ್ನು ಕೊಂದು,
News

ನೈನಾಡಿನಲ್ಲಿ ಪಾದುವಾ ಕಾಲೇಜಿನ 7 ದಿನಗಳ NSS ಶಿಬಿರಕ್ಕೆ ಚಾಲನೆ

“ಸೇವೆಯ ಮೂಲಕ ವಿದ್ಯಾರ್ಥಿಗಳು ಜೀವನದ ಮೌಲ್ಯಗಳನ್ನು ಕಲಿಯುತ್ತಾರೆ” –  ಫಾದರ್ ಅರುಣ್ ವಿಲ್ಸನ್ ಲೋಬೊ ಪಾದುವಾ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (NSS) ಘಟಕದ ಏಳು

You cannot copy content of this page