October 9, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮೈಸೂರು ಧರ್ಮಕ್ಷೇತ್ರದ ಸಹ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ಗ್ರೇಶಿಯನ್ ರೊಡ್ರಿಗಸ್ ನೇಮಕ

ಮೈಸೂರು ಧರ್ಮಕ್ಷೇತ್ರದ ಸಹ ಸಾರ್ವಜನಿಕ ಸಂಪರ್ಕಾಧಿಕಾರಿ (Associate Public Relations Officer – APRO)ಯಾಗಿ ಗ್ರೇಶಿಯನ್ ರೊಡ್ರಿಗಸ್ ಅವರನ್ನು ನೇಮಕಗೊಳಿಸಲಾಗಿದೆ. ಈ ಕುರಿತು ಮೈಸೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಫ್ರಾನ್ಸಿಸ್ ಸೆರಾವೊ ಎಸ್‌ಜೆ ಅವರು ಅಧಿಕೃತ ನೇಮಕಾತಿ ಆದೇಶ ಹೊರಡಿಸಿದ್ದು, ಆಗಸ್ಟ್ 1ರಿಂದ ಈ ನೇಮಕ ಜಾರಿಗೆ ಬಂದಿದೆ.

 

ಹೊಸ ಜವಾಬ್ದಾರಿಯಲ್ಲಿ ಗ್ರೆಶಿಯನ್ ರೊಡ್ರಿಗಸ್ ಅವರು ಧರ್ಮಕ್ಷೇತ್ರದ ವಿಕಾರ್ ಜನರಲ್ ಹಾಗೂ ಸಾರ್ವಜನಿಕ ಸಂಪರ್ಕಾಧಿಕಾರಿ ಮೊನ್ಸಿಂಜ್ಞೊರ್ ಆಂಥಪ್ಪ ಎಂ. ಅವರ ಮಾರ್ಗದರ್ಶನದಲ್ಲಿ ಹಾಗೂ ಧರ್ಮಾಧ್ಯಕ್ಷರ ಸಲಹೆಯಂತೆ ಕಾರ್ಯನಿರ್ವಹಿಸಲಿದ್ದಾರೆ.

ಅಧಿಕೃತ ಆದೇಶದ ಪ್ರಕಾರ, ಸರ್ಕಾರದ ವಿವಿಧ ಇಲಾಖೆಗಳು, ಜನಪ್ರತಿನಿಧಿಗಳು, ನಾಗರಿಕ ಆಡಳಿತ, ಸಾರ್ವಜನಿಕ ಸಂಸ್ಥೆಗಳು ಹಾಗೂ ಸಮಾಜದ ವಿವಿಧ ಸಂಘಟನೆಗಳೊಂದಿಗೆ ಧರ್ಮಕ್ಷೇತ್ರದ ಉತ್ತಮ ಬಾಂಧವ್ಯವನ್ನು ಬೆಳೆಸಲು ಮತ್ತು ಬಲಪಡಿಸಲು ಅವರು ಸಹಕರಿಸಲಿದ್ದಾರೆ. ವಿವಿಧ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಧರ್ಮಕ್ಷೇತ್ರವನ್ನು ಪ್ರತಿನಿಧಿಸುವುದು, ಸಾರ್ವಜನಿಕ ಸಂಸ್ಥೆಗಳೊಂದಿಗೆ ಸಮನ್ವಯ ಸಾಧಿಸುವುದು ಹಾಗೂ ಧರ್ಮಕ್ಷೇತ್ರದ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಆಯೋಜಿಸಲು ನೆರವಾಗುವ ಮೂಲಕ ಚರ್ಚಿನ ಸೇವೆ ಮತ್ತು ಧ್ಯೇಯವನ್ನು ಜನರಿಗೆ ತಲುಪಿಸುವ ಜವಾಬ್ದಾರಿಯನ್ನೂ ಅವರು ನಿರ್ವಹಿಸಲಿದ್ದಾರೆ.

ಇದರ ಜೊತೆಗೆ, ರಾಷ್ಟ್ರೀಯ ಹಬ್ಬಗಳು ಹಾಗೂ ವಿವಿಧ ಧರ್ಮಗಳ ಪ್ರಮುಖ ಹಬ್ಬಗಳ ಸಂದರ್ಭದಲ್ಲಿ ಧರ್ಮಾಧ್ಯಕ್ಷರ ಶುಭಾಶಯ ಸಂದೇಶಗಳನ್ನು ಸಾರ್ವಜನಿಕರಿಗೆ ತಲುಪಿಸುವ ಕಾರ್ಯದಲ್ಲಿಯೂ ಅವರು ಸಾರ್ವಜನಿಕ ಸಂಪರ್ಕಾಧಿಕಾರಿಗಳಿಗೆ ನೆರವಾಗಲಿದ್ದು, ಧರ್ಮಸೌಹಾರ್ದತೆ, ಪರಸ್ಪರ ಗೌರವ ಮತ್ತು ಸೌಹಾರ್ದಯುತ ಸಂಬಂಧಗಳನ್ನು ವೃದ್ಧಿಸಲು ಕೈಜೋಡಿಸಲಿದ್ದಾರೆ.

ನೇಮಕಾತಿ ಕುರಿತು ಸಂತಸ ವ್ಯಕ್ತಪಡಿಸಿರುವ ಗ್ರೇಶಿಯನ್ ರೊಡ್ರಿಗಸ್ ಅವರು, “ಮೈಸೂರು ಧರ್ಮಕ್ಷೇತ್ರದ ಸಹ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ನೇಮಕಗೊಂಡಿರುವುದು ನನಗೆ ಅತ್ಯಂತ ಗೌರವದ ಸಂಗತಿ. ನನ್ನ ಮೇಲೆ ವಿಶ್ವಾಸವಿಟ್ಟು ಈ ಜವಾಬ್ದಾರಿಯನ್ನು ನೀಡಿದ ಧರ್ಮಾಧ್ಯಕ್ಷರಿಗೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸುತ್ತೇನೆ. ಈ ಹೊಣೆಗಾರಿಕೆಯನ್ನು ವಿನಮ್ರತೆಯಿಂದ ಸ್ವೀಕರಿಸಿದ್ದು, ಸಮರ್ಪಣೆ, ಪ್ರಾಮಾಣಿಕತೆ ಹಾಗೂ ಬದ್ಧತೆಯಿಂದ ಧರ್ಮಕ್ಷೇತ್ರದ ಸೇವೆಗೆ ನನ್ನನ್ನು ಅರ್ಪಿಸಿಕೊಳ್ಳುತ್ತೇನೆ“ ಎಂದು ತಿಳಿಸಿದ್ದಾರೆ.

You may also like

News

ಆಲ್ಬರ್ಟ್ ರೇಗೊ ಸಾವು ನಿಗೂಢ – ಎರಡು ತಿಂಗಳ ಬಳಿಕ ಶವ ಹೊರತೆಗೆದು FSL ಪರೀಕ್ಷೆ!

ಮಂಗಳೂರಿನಲ್ಲಿ ಅಪರೂಪದ ಪ್ರಕರಣ – ಮಗಳ ವಿರುದ್ಧ ದೂರು, ದೆರೆಬೈಲ್ ಚರ್ಚ್ ಆವರಣದ ದಫನಭೂಮಿಯಲ್ಲಿ ಪೊಲೀಸ್ ತನಿಖೆ ಮಂಗಳೂರು : ಆಸ್ತಿಗಾಗಿ ಮಗಳೇ ತನ್ನ ತಂದೆಯನ್ನು ಕೊಂದು,
News

ನೈನಾಡಿನಲ್ಲಿ ಪಾದುವಾ ಕಾಲೇಜಿನ 7 ದಿನಗಳ NSS ಶಿಬಿರಕ್ಕೆ ಚಾಲನೆ

“ಸೇವೆಯ ಮೂಲಕ ವಿದ್ಯಾರ್ಥಿಗಳು ಜೀವನದ ಮೌಲ್ಯಗಳನ್ನು ಕಲಿಯುತ್ತಾರೆ” –  ಫಾದರ್ ಅರುಣ್ ವಿಲ್ಸನ್ ಲೋಬೊ ಪಾದುವಾ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (NSS) ಘಟಕದ ಏಳು

You cannot copy content of this page