August 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸುರತ್ಕಲ್‌ನಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಗುತ್ತಿಗೆದಾರ ಸಾವು

ಅಪಾರ್ಟ್‌ಮೆಂಟ್ ಮೇಲ್ಭಾಗದಲ್ಲಿ ಶೀಟ್ ಅಳವಡಿಸುವ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿದ ಪರಿಣಾಮ ಗುತ್ತಿಗೆದಾರರೊಬ್ಬರು ಮೃತಪಟ್ಟ ಘಟನೆ ಸುರತ್ಕಲ್ ನ ಕೃಷ್ಣಾಪುರ 6ನೇ ಬ್ಲಾಕ್‌ನ ಪ್ಲಾಝಾ ಅಪಾರ್ಟ್‌ಮೆಂಟ್‌ನಲ್ಲಿ ಸೋಮವಾರ ಸಂಜೆ ನಡೆದಿದೆ. ಮೃತರನ್ನು 65 ವರ್ಷ ಪ್ರಾಯದ ಭಾಸ್ಕರ್ ಜಿ. ಕರ್ಕೇರ ಎಂದು ಗುರುತಿಸಲಾಗಿದೆ. ಅಪಾರ್ಟ್‌ಮೆಂಟ್‌ನ ಮೇಲ್ಭಾಗದಲ್ಲಿ ಶೀಟ್ ಅಳವಡಿಸುವ ಕಾಮಗಾರಿ ನಡೆಯುತ್ತಿದ್ದ ವೇಳೆ, ಅಲ್ಲೇ ಹಾದು ಹೋಗಿದ್ದ ವಿದ್ಯುತ್ ತಂತಿ ಭಾಸ್ಕರ್ ಅವರಿಗೆ ತಾಗಿದ್ದು, ಅವರು ವಿದ್ಯುತ್‌ ಆಘಾತಕ್ಕೆ ಒಳಗಾಗಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಘಟನೆಯ ಬಳಿಕ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ನಡೆಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಅಪಾರ್ಟ್‌ಮೆಂಟ್ ಮೇಲ್ಭಾಗದಲ್ಲಿ ಅಪಾಯಕಾರಿ ರೀತಿಯಲ್ಲಿ ವಿದ್ಯುತ್ ತಂತಿಗಳು ಹಾದು ಹೋಗಿದ್ದರೂ, ಕಾಮಗಾರಿಯಲ್ಲಿ ತೊಡಗಿದ್ದ ಕಾರ್ಮಿಕರಿಗೆ ಅಗತ್ಯ ಸುರಕ್ಷತಾ ಸಲಕರಣೆಗಳನ್ನು ಒದಗಿಸಿರಲಿಲ್ಲ ಎಂಬ ಆರೋಪವೂ ಕೇಳಿಬಂದಿದೆ.

ಘಟನೆಯ ಕುರಿತು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ಕಾರಣವಾದ ಅಂಶಗಳು ಹಾಗೂ ಸುರಕ್ಷತಾ ಕ್ರಮಗಳ ಪಾಲನೆಯ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

You may also like

News

ಮಂಗಳೂರು ಪ್ರೆಸ್ ಕ್ಲಬ್‌ನ ‘ಸಮಾಚಾರ’ 9ನೇ ಸಂಚಿಕೆ ಬಿಡುಗಡೆ

ಸಂಸ್ಥೆಗಳ ಸಾಧನೆ ದಾಖಲೀಕರಣ ಅಗತ್ಯ – ಪ್ರದೀಪ್ ಡಿಸೋಜ ಸಂಘ-ಸಂಸ್ಥೆಗಳ ಕಾರ್ಯಚಟುವಟಿಕೆಗಳು ಹಾಗೂ ಸಾಧನೆಗಳನ್ನು ವ್ಯವಸ್ಥಿತವಾಗಿ ದಾಖಲಿಸುವುದು ಅತ್ಯಗತ್ಯ. ಇದರಿಂದ ಸಂಸ್ಥೆಯ ಸಾಧನೆಗಳು ಹಾಗೂ ಅದರ ಸಾಮಾಜಿಕ
News

ಮಿಜಾರಿನಲ್ಲಿ ಸಿಲಿಂಡರ್ ಸ್ಫೋಟ – ಒಂದೇ ಕುಟುಂಬದ ಮೂವರಿಗೆ ಸುಟ್ಟ ಗಾಯ

ಮೂಡುಬಿದಿರೆಯ ಮಿಜಾರ್ ಸಮೀಪ ಬಾಡಿಗೆ ಮನೆಯಲ್ಲಿ ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಒಂದೇ ಕುಟುಂಬದ ಮೂವರು ಸುಟ್ಟ ಗಾಯಗೊಂಡ ಘಟನೆ ಇಂದು ಆಗಸ್ಟ್ 11ರಂದು ಮಂಗಳವಾರ

You cannot copy content of this page