August 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಂಗಳೂರು ಪ್ರೆಸ್ ಕ್ಲಬ್‌ನ ‘ಸಮಾಚಾರ’ 9ನೇ ಸಂಚಿಕೆ ಬಿಡುಗಡೆ

ಸಂಸ್ಥೆಗಳ ಸಾಧನೆ ದಾಖಲೀಕರಣ ಅಗತ್ಯ – ಪ್ರದೀಪ್ ಡಿಸೋಜ

ಸಂಘ-ಸಂಸ್ಥೆಗಳ ಕಾರ್ಯಚಟುವಟಿಕೆಗಳು ಹಾಗೂ ಸಾಧನೆಗಳನ್ನು ವ್ಯವಸ್ಥಿತವಾಗಿ ದಾಖಲಿಸುವುದು ಅತ್ಯಗತ್ಯ. ಇದರಿಂದ ಸಂಸ್ಥೆಯ ಸಾಧನೆಗಳು ಹಾಗೂ ಅದರ ಸಾಮಾಜಿಕ ಕೊಡುಗೆಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸಲು ಸಾಧ್ಯವಾಗುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪ ನಿರ್ದೇಶಕ ಪ್ರದೀಪ್ ಡಿಸೋಜ ಹೇಳಿದರು.

ಮಂಗಳೂರು ಪ್ರೆಸ್ ಕ್ಲಬ್‌ನ ಗೃಹ ಪತ್ರಿಕೆ ‘ಮಂಗಳೂರು ಪ್ರೆಸ್ ಕ್ಲಬ್ ಸಮಾಚಾರ’ದ 9ನೇ ಸಂಚಿಕೆಯನ್ನು ಸೋಮವಾರ ನಗರದ ಪತ್ರಿಕಾ ಭವನದಲ್ಲಿ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಪ್ರಸ್ತುತ ದೃಶ್ಯ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಗಳನ್ನು ವೇಗವಾಗಿ ಪ್ರಸಾರ ಮಾಡುವ ಪೈಪೋಟಿ ಹೆಚ್ಚಾಗಿದೆ. ಇಂತಹ ಸಂದರ್ಭದಲ್ಲಿ ಸುದ್ದಿಯ ಸತ್ಯಾಸತ್ಯತೆ ಪರಿಶೀಲಿಸುವುದು ಕೆಲವೊಮ್ಮೆ ಕಷ್ಟಕರವಾಗುತ್ತಿದೆ. ಹೀಗಾಗಿ ನೈಜ, ಮಾನವೀಯ ಹಾಗೂ ಸಮಾಜಕ್ಕೆ ಉಪಯುಕ್ತವಾದ ಸುದ್ದಿಗಳನ್ನು ಜನರಿಗೆ ತಲುಪಿಸುವಲ್ಲಿ ಪತ್ರಿಕೆಗಳು ಮಹತ್ವದ ಜವಾಬ್ದಾರಿ ವಹಿಸಬೇಕಾಗಿದೆ ಎಂದು ಅವರು ಹೇಳಿದರು.

ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್., ಮಂಗಳೂರು ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಅನ್ನು ಮಂಗಳೂರು ಹಾಗೂ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ಇಂದಾಜೆ ಉಪಸ್ಥಿತರಿದ್ದರು. ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ವಂದಿಸಿದರು. ಉಪಾಧ್ಯಕ್ಷ ಮಹಮ್ಮದ್ ಆರಿಫ್ ಪಡುಬಿದ್ರೆ ಕಾರ್ಯಕ್ರಮ ನಿರೂಪಿಸಿದರು.

You may also like

News

ನೂತನ ಪಾಲಿಕೆ ಆಯುಕ್ತರಿಗೆ ಕಾಂಗ್ರೆಸ್ ನಿಯೋಗದ ಮನವಿ

ನಾಗರಿಕ ಸಮಸ್ಯೆಗಳಿಗೆ ತ್ವರಿತ ಪರಿಹಾರ – ಅಭಿವೃದ್ಧಿಗೆ ಆದ್ಯತೆ ನೀಡುವಂತೆ MLC ಐವನ್ ಡಿಸೋಜ ಆಗ್ರಹ ಮಂಗಳೂರು ನಗರದ ಸಮಗ್ರ ಅಭಿವೃದ್ಧಿ ಹಾಗೂ ವಿವಿಧ ನಾಗರಿಕ ಸಮಸ್ಯೆಗಳ
News

ಮಿಜಾರಿನಲ್ಲಿ ಸಿಲಿಂಡರ್ ಸ್ಫೋಟ – ಒಂದೇ ಕುಟುಂಬದ ಮೂವರಿಗೆ ಸುಟ್ಟ ಗಾಯ

ಮೂಡುಬಿದಿರೆಯ ಮಿಜಾರ್ ಸಮೀಪ ಬಾಡಿಗೆ ಮನೆಯಲ್ಲಿ ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಒಂದೇ ಕುಟುಂಬದ ಮೂವರು ಸುಟ್ಟ ಗಾಯಗೊಂಡ ಘಟನೆ ಇಂದು ಆಗಸ್ಟ್ 11ರಂದು ಮಂಗಳವಾರ

You cannot copy content of this page