August 13, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಆಕಾಶಕ್ಕೇರಿದ ಕೌಡೂರಿನ ಶೈನಿ ಅಸ್ಮಾ ಸಲ್ಡಾನ್ಹಾ  – ಉಡುಪಿ ಜಿಲ್ಲೆಯ ಮೊದಲ ಮಹಿಳಾ ಪೈಲಟ್

ಕಾರ್ಕಳ ಕೌಡೂರಿನ ಪ್ರತಿಭಾವಂತ ಯುವತಿ ಶೈನಿ ಅಸ್ಮಾ ಸಲ್ಡಾನ್ಹಾ ಅವರು ಪೈಲಟ್ ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ಕಮರ್ಷಿಯಲ್ ಪೈಲಟ್ ಲೈಸೆನ್ಸ್ (CPL) ಪಡೆದುಕೊಳ್ಳುವ ಮೂಲಕ ಉಡುಪಿ ಜಿಲ್ಲೆಯ ಮೊದಲ ಮಹಿಳಾ ಪೈಲಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಕೌಡೂರು ರಂಗನಪಲ್ಕೆಯ ಅಶೋಕ್ ಜಾಕೋಬ್ ಸಲ್ಡಾನಾ ಮತ್ತು ಮರಿಯಾ ಗ್ರೆಟ್ಟಾ ಸಲ್ಡಾನಾ ದಂಪತಿಯ ಪುತ್ರಿಯಾಗಿರುವ ಶೈನಿ, ಕಾರ್ಕಳದ ಕ್ರೈಸ್ಟ್ ಕಿಂಗ್ ಎಜ್ಯುಕೇಷನಲ್ ಇನ್‌ಸ್ಟಿಟ್ಯೂಷನ್‌ನಲ್ಲಿ ಶಾಲಾ ಹಾಗೂ ಪದವಿಪೂರ್ವ ಶಿಕ್ಷಣವನ್ನು ಪೂರ್ಣಗೊಳಿಸಿದರು. ಬಾಲ್ಯದಿಂದಲೇ ಪೈಲಟ್ ಆಗಬೇಕೆಂಬ ಕನಸು ಹೊಂದಿದ್ದ ಅವರು, ಅದನ್ನು ನನಸಾಗಿಸುವ ದೃಢಸಂಕಲ್ಪದೊಂದಿಗೆ ಬೆಂಗಳೂರಿನಲ್ಲಿ ನಡೆದ ಇಂದಿರಾಗಾಂಧಿ ರಾಷ್ಟ್ರೀಯ ಉಡಾನ್ ಅಕಾಡೆಮಿ (IGRUA) ಪ್ರವೇಶ ಪರೀಕ್ಷೆಯಲ್ಲಿ ಯಶಸ್ವಿಯಾಗಿ ತೇರ್ಗಡೆ ಹೊಂದಿದರು.

ಬಳಿಕ ಉತ್ತರ ಪ್ರದೇಶದ ಫುರ್ಸತ್‌ಗಂಜ್‌ನಲ್ಲಿರುವ IGRUA ಸಂಸ್ಥೆಯಲ್ಲಿ 2023ರ ಆಗಸ್ಟ್‌ನಿಂದ ವೃತ್ತಿಪರ ಪೈಲಟ್ ತರಬೇತಿ ಪಡೆದ ಶೈನಿ, ತರಬೇತಿಯ ವಿವಿಧ ಹಂತಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ಕಮರ್ಷಿಯಲ್ ಪೈಲಟ್ ಲೈಸೆನ್ಸ್ ಪಡೆದುಕೊಂಡಿದ್ದಾರೆ.

ತಮ್ಮ ಬಾಲ್ಯದ ಕನಸನ್ನು ನನಸಾಗಿಸಿಕೊಂಡಿರುವ ಶೈನಿಯವರ ಸಾಧನೆ ಕಾರ್ಕಳ ಹಾಗೂ ಉಡುಪಿ ಜಿಲ್ಲೆಗೆ ಹೆಮ್ಮೆಯ ಸಂಗತಿಯಾಗಿದೆ. ವಿಮಾನಯಾನ ಕ್ಷೇತ್ರದಲ್ಲಿ ಸಾಧನೆ ಮಾಡಬೇಕೆಂಬ ಕನಸು ಕಾಣುತ್ತಿರುವ ಜಿಲ್ಲೆಯ ಯುವತಿಯರಿಗೆ ಅವರು ಪ್ರೇರಣೆಯ ಮಾದರಿಯಾಗಿದ್ದಾರೆ.

ಶೈನಿಯವರ ಈ ಗಮನಾರ್ಹ ಸಾಧನೆಗೆ ಕುಟುಂಬಸ್ಥರು, ಸ್ನೇಹಿತರು ಹಾಗೂ ಸ್ಥಳೀಯರು ಅಭಿನಂದನೆ ಸಲ್ಲಿಸಿದ್ದು, ಅವರ ಮುಂದಿನ ವೃತ್ತಿಜೀವನಕ್ಕೆ ಶುಭ ಹಾರೈಸಿದ್ದಾರೆ.

You may also like

News

ಬಂಟ್ವಾಳದಲ್ಲಿ ಗ್ರಾಮಾಂತರ ಪೊಲೀಸರ ಬೇಟೆ – ಲಕ್ಷಾಂತರ ಮೌಲ್ಯದ MDMA, ಗಾಂಜಾ ಜಪ್ತಿ

ಮೂವರು ಖತರ್ನಾಕ್ ಪೆಡ್ಲರ್‌ಗಳು ವಶಕ್ಕೆ! ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ನಿಷೇಧಿತ ಮಾದಕ ದ್ರವ್ಯಗಳನ್ನು ವಶಪಡಿಸಿಕೊಳ್ಳುವಲ್ಲಿ
News

WIM ಬಂಟ್ವಾಳ ಕ್ಷೇತ್ರ ಸಮಿತಿಗೆ ಝುಬೈದ ಬಂಟ್ವಾಳ ಸಾರಥ್ಯ – ಝೈನಬ ಕಾವಲ್ ಕಟ್ಟೆ ಕಾರ್ಯದರ್ಶಿ

ವಿಮೆನ್ ಇಂಡಿಯಾ ಮೂವ್ಮೆಂಟ್ (WIM) ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿಯ ಅಸೆಂಬ್ಲಿ ಪ್ರತಿನಿಧಿ ಸಭೆಯು ಪಾಣೆಮಂಗಳೂರಿನ ಎಚ್.ಎಚ್. ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯಿತು. ಸಭೆಯಲ್ಲಿ 2026–29ನೇ ಸಾಲಿನ ನೂತನ

You cannot copy content of this page