August 18, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಅಜ್ಜಿಯ ಚಿನ್ನದ ಬಳೆ ಕಸಿದುಕೊಂಡ ಮೊಮ್ಮಗನ ಬಂಧನ

ಮನೆಯಲ್ಲಿ ಒಬ್ಬಂಟಿಯಾಗಿದ್ದ 82 ವರ್ಷದ ವೃದ್ಧೆಯ ಕೈಯಲ್ಲಿದ್ದ ಸುಮಾರು ₹5 ಲಕ್ಷ ಮೌಲ್ಯದ ಎರಡು ಚಿನ್ನದ ಬಳೆಗಳನ್ನು ಬಲವಂತವಾಗಿ ಎಳೆದುಕೊಂಡು ಪರಾರಿಯಾಗಿದ್ದ ಪ್ರಕರಣವನ್ನು ಪುಂಜಾಲಕಟ್ಟೆ ಪೊಲೀಸರು ಭೇದಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ವೃದ್ಧೆಯ ಮೊಮ್ಮಗನನ್ನೇ ಬಂಧಿಸಿದ್ದಾರೆ. ಬಂಧಿತನಿಂದ ಕಳವು ಮಾಡಲಾಗಿದ್ದ ಎರಡು ಚಿನ್ನದ ಬಳೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ತೆಂಕಕಜೆಕಾರು ಉದ್ದದ ಗುಡ್ಡೆ ಎಂಬಲ್ಲಿ ಈ ಘಟನೆ ನಡೆದಿತ್ತು. ಪ್ರಕರಣದ ಪಿರ್ಯಾದಿದಾರ ಸಾದಿಕ್ ಅವರ ತಾಯಿ 82 ವರ್ಷ ಪ್ರಾಯದ ಅವ್ವಮ್ಮ ಅವರು ಆಗಸ್ಟ್ 14ರಂದು ಮನೆಯಲ್ಲಿ ಒಬ್ಬಂಟಿಯಾಗಿದ್ದ ವೇಳೆ ಮುಖಕ್ಕೆ ಬಟ್ಟೆ ಸುತ್ತಿಕೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬ ಏಕಾಏಕಿ ಮನೆಯೊಳಗೆ ಪ್ರವೇಶಿಸಿದ್ದಾನೆ ಎನ್ನಲಾಗಿದೆ.

ಆರೋಪಿ ವೃದ್ಧೆಯ ಕೈಯಲ್ಲಿದ್ದ ಸುಮಾರು 40 ಗ್ರಾಂ ತೂಕದ ಎರಡು ಚಿನ್ನದ ಬಳೆಗಳನ್ನು ಬಲವಂತವಾಗಿ ಎಳೆದುಕೊಂಡು ಪರಾರಿಯಾಗಿದ್ದಾನೆ. ಈ ಸಂದರ್ಭದಲ್ಲಿ ವೃದ್ಧೆಯ ಕೈಗೆ ರಕ್ತಗಾಯವಾಗಿತ್ತು. ಘಟನೆ ಕುರಿತು ಸಾದಿಕ್ ನೀಡಿದ ದೂರಿನ ಆಧಾರದ ಮೇಲೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಠಾಣಾ ಅ.ಕ್ರ. 70/2026, ಕಲಂ 309(6) BNS-2023ರಂತೆ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಲಾಗಿತ್ತು.

ತನಿಖೆಯನ್ನು ಚುರುಕುಗೊಳಿಸಿದ ಪೊಲೀಸರು ಪ್ರಕರಣದ ಹಿಂದಿರುವ ವ್ಯಕ್ತಿಯ ಬಗ್ಗೆ ಮಾಹಿತಿ ಕಲೆಹಾಕಿ, ಆಗಸ್ಟ್ 16ರಂದು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಬಂಟ್ವಾಳ ತೆಂಕಕಜೆಕಾರು ನಿವಾಸಿ ಹಾಗೂ ಅವ್ವಮ್ಮ ಅವರ ಮೊಮ್ಮಗ 33 ವರ್ಷ ಪ್ರಾಯದ ಶಬ್ಬೀರ್ ಎಂದು ಗುರುತಿಸಲಾಗಿದೆ.

ಬಂಧಿತ ಶಬೀರ್‌ನಿಂದ ವೃದ್ಧೆಯ ಕೈಯಿಂದ ಕಸಿದುಕೊಂಡಿದ್ದ ಎರಡೂ ಚಿನ್ನದ ಬಳೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ವಿಚಾರಣೆ ನಡೆಸಿದ ಬಳಿಕ ಮಾನ್ಯ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದ ಪತ್ತೆಕಾರ್ಯವನ್ನು ಬೆಳ್ತಂಗಡಿ DYSP ರೋಹಿಣಿ ಸಿ.ಕೆ. ಅವರ ನೇತೃತ್ವದಲ್ಲಿ ನಡೆಸಲಾಗಿದ್ದು, ಬೆಳ್ತಂಗಡಿ ಗ್ರಾಮಾಂತರ CPI ರವಿ ಬಿ.ಎಸ್., ಪುಂಜಾಲಕಟ್ಟೆ ಠಾಣಾ PSI ರಾಜೇಶ್ ಕೆ.ವಿ. ಹಾಗೂ ಸಿಬ್ಬಂದಿಗಳಾದ ASI ಬೆನ್ನಿಚ್ಚನ್, ಪ್ರವೀಣ್ ಮೂರುಗೋಳಿ, ರಾಜೇಶ್, ವಿಜಯ್ ಕುಮಾರ್, ರಾಹುಲ್ ರಾವ್, ನಾಗರಾಜ್, ರಜಿತ್, ಬಸವರಾಜ್ ಮತ್ತು ಸತೀಶ್ ಅವರು ಕರ್ತವ್ಯ ನಿರ್ವಹಿಸಿದ್ದಾರೆ. ಜಿಲ್ಲಾ ತಾಂತ್ರಿಕ ವಿಭಾಗದ ದಿವಾಕರ್ ಹಾಗೂ ಸಂಪತ್ ಅವರು ಕೂಡ ಪ್ರಕರಣದ ಪತ್ತೆಕಾರ್ಯಕ್ಕೆ ತಾಂತ್ರಿಕ ನೆರವು ನೀಡಿದ್ದಾರೆ.

You may also like

News

ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ – ಆರೋಪಿ ಉಮೇಶ್ ಬಂಧನ

ಅಪ್ರಾಪ್ತ ಬಾಲಕನಿಗೆ ಅನುಚಿತವಾಗಿ ವರ್ತಿಸಿ, ಬಳಿಕ ಮನೆಗೆ ತೆರಳಿ ಲೈಂಗಿಕ ಕಿರುಕುಳ ನೀಡಿ ಬೆದರಿಕೆ ಹಾಕಿದ ಆರೋಪದ ಮೇಲೆ ವಿಟ್ಲ ಪೊಲೀಸರು 53 ವರ್ಷದ ವ್ಯಕ್ತಿಯೊಬ್ಬರನ್ನು ಬಂಧಿಸಿದ್ದಾರೆ.
News

ಚಾಮರಾಜನಗರ ಶೂಟೌಟ್‌: ‘ಹೊಸ ಚಪ್ಪಲಿ, ಚರ್ಮವಿಲ್ಲದ ಮಾಂಸ’ದ ನಿಗೂಢತೆ – SIT ತನಿಖೆಗೆ ಸ್ಟ್ಯಾನಿ ಪಿಂಟೋ ಬೆಂಗಳೂರು ಆಗ್ರಹ

ಮೂವರ ಸಾವಿನ ಪ್ರಕರಣದಲ್ಲಿ ಜಪ್ತಿ ವಸ್ತುಗಳೇ ಹುಟ್ಟುಹಾಕಿದ ಹಲವು ಪ್ರಶ್ನೆಗಳು – ನಿಷ್ಪಕ್ಷಪಾತ ತನಿಖೆಗೆ ಕ್ರೈಸ್ತ ಸಂಘಟನೆ ಆಗ್ರಹ ಚಾಮರಾಜನಗರ ಜಿಲ್ಲೆಯ ಕಾವೇರಿ ವನ್ಯಧಾಮದಲ್ಲಿ ನಡೆದ ಗುಂಡಿನ

You cannot copy content of this page