October 9, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪತ್ರಕರ್ತನ ಮೇಲೆ ವೈದ್ಯನ ಹಲ್ಲೆ ಖಂಡನೀಯ – ಆರೋಪಿ ವಿರುದ್ಧ ಕಠಿಣ ಕ್ರಮಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಗ್ರಹ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಶ್ರೀಕಾಂತ್ ಹೆಮ್ಮಾಡಿ ಅವರ ಮೇಲೆ ವೈದ್ಯರೊಬ್ಬರು ದೈಹಿಕ ಹಲ್ಲೆ ನಡೆಸಿರುವ ಘಟನೆಗೆ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ತೀವ್ರ ಖಂಡನೆ ವ್ಯಕ್ತಪಡಿಸಿದೆ. ಪತ್ರಕರ್ತರ ಮೇಲೆ ನಡೆಯುವ ಇಂತಹ ಗೂಂಡಾ ಪ್ರವೃತ್ತಿಯ ಕೃತ್ಯಗಳಿಗೆ ಕಡಿವಾಣ ಹಾಕಲು ಆರೋಪಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಂಘ ಆಗ್ರಹಿಸಿದೆ.

ಕುಂದಾಪುರ ಸರ್ಕಾರಿ ಆಸ್ಪತ್ರೆಯ ವರದಿಗೆ ಸಂಬಂಧಿಸಿದ ವಿಚಾರದಲ್ಲಿ ಅಲ್ಲಿನ ವೈದ್ಯಾಧಿಕಾರಿಯಾಗಿದ್ದ ಡಾ. ಮಹೇಂದ್ರ ಶೆಟ್ಟಿ ಅವರು ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಅವರ ಮೇಲೆ ಏಕಾಏಕಿ ದೈಹಿಕ ಹಲ್ಲೆ ನಡೆಸಿರುವುದು ಖಂಡನೀಯ. ಪತ್ರಕರ್ತರು ತಮ್ಮ ವೃತ್ತಿಯ ಭಾಗವಾಗಿ ಸಾರ್ವಜನಿಕ ಹಿತಾಸಕ್ತಿಯ ವಿಷಯಗಳನ್ನು ವರದಿ ಮಾಡುವ ಸಂದರ್ಭದಲ್ಲಿ ಅವರ ಮೇಲೆ ಹಲ್ಲೆ ನಡೆಸುವುದು ಪತ್ರಿಕಾ ಸ್ವಾತಂತ್ರ್ಯಕ್ಕೆ ಧಕ್ಕೆ ತರುವಂತಹ ಕೃತ್ಯವಾಗಿದೆ ಎಂದು ಸಂಘ ತಿಳಿಸಿದೆ.

ಈ ಪ್ರಕರಣವನ್ನು ಸಂಬಂಧಪಟ್ಟ ಇಲಾಖೆ ಗಂಭೀರವಾಗಿ ಪರಿಗಣಿಸಿ, ಘಟನೆಗೆ ಕಾರಣರಾದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಇಂತಹ ಘಟನೆಗಳು ರಾಜ್ಯದಲ್ಲಿ ಮರುಕಳಿಸದಂತೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವೂ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್. ಹಾಗೂ ಪ್ರಧಾನ ಕಾರ್ಯದರ್ಶಿ ರಾಜೇಶ್ ಕೆ. ಪೂಜಾರಿ ಅವರು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

ಪತ್ರಕರ್ತರ ವೃತ್ತಿ ಸ್ವಾತಂತ್ರ್ಯ ಹಾಗೂ ಸುರಕ್ಷತೆಗೆ ಧಕ್ಕೆ ತರುವ ಯಾವುದೇ ರೀತಿಯ ದೌರ್ಜನ್ಯವನ್ನು ಸಹಿಸುವ ಪ್ರಶ್ನೆಯೇ ಇಲ್ಲ. ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸುವ ಮೂಲಕ ಪತ್ರಕರ್ತರಿಗೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಸಂಘ ಆಗ್ರಹಿಸಿದೆ.

 

You may also like

News

ಆಲ್ಬರ್ಟ್ ರೇಗೊ ಸಾವು ನಿಗೂಢ – ಎರಡು ತಿಂಗಳ ಬಳಿಕ ಶವ ಹೊರತೆಗೆದು FSL ಪರೀಕ್ಷೆ!

ಮಂಗಳೂರಿನಲ್ಲಿ ಅಪರೂಪದ ಪ್ರಕರಣ – ಮಗಳ ವಿರುದ್ಧ ದೂರು, ದೆರೆಬೈಲ್ ಚರ್ಚ್ ಆವರಣದ ದಫನಭೂಮಿಯಲ್ಲಿ ಪೊಲೀಸ್ ತನಿಖೆ ಮಂಗಳೂರು : ಆಸ್ತಿಗಾಗಿ ಮಗಳೇ ತನ್ನ ತಂದೆಯನ್ನು ಕೊಂದು,
News

ನೈನಾಡಿನಲ್ಲಿ ಪಾದುವಾ ಕಾಲೇಜಿನ 7 ದಿನಗಳ NSS ಶಿಬಿರಕ್ಕೆ ಚಾಲನೆ

“ಸೇವೆಯ ಮೂಲಕ ವಿದ್ಯಾರ್ಥಿಗಳು ಜೀವನದ ಮೌಲ್ಯಗಳನ್ನು ಕಲಿಯುತ್ತಾರೆ” –  ಫಾದರ್ ಅರುಣ್ ವಿಲ್ಸನ್ ಲೋಬೊ ಪಾದುವಾ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (NSS) ಘಟಕದ ಏಳು

You cannot copy content of this page