August 23, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪುತ್ತೂರಿನಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ – ಮೂರು ಜಾನುವಾರುಗಳ ರಕ್ಷಣೆ, ವಾಹನ ಸಹಿತ ಆರೋಪಿ ವಶಕ್ಕೆ

ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಪಿಕ್‌ಅಪ್ ವಾಹನವನ್ನು ಪುತ್ತೂರು ನಗರ ಠಾಣೆ ಪೊಲೀಸರು ತಡೆದು ಪರಿಶೀಲಿಸಿ, ವಾಹನದಲ್ಲಿದ್ದ ಮೂರು ಜಾನುವಾರುಗಳನ್ನು ರಕ್ಷಿಸಿರುವ ಘಟನೆ ಪುತ್ತೂರು ಚಿಕ್ಕಮುಡ್ನೂರು ಗ್ರಾಮದ ಜಿಡೆಕಲ್ಲು ಎಂಬಲ್ಲಿ ನಡೆದಿದೆ. ಆನಡ್ಕ ಕಡೆಯಿಂದ ಪಡೀಲ್ ಕಡೆಗೆ ವಾಹನವೊಂದರಲ್ಲಿ ಅಕ್ರಮವಾಗಿ ಜಾನುವಾರು ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಪುತ್ತೂರು ನಗರ ಠಾಣೆಯ ಪೊಲೀಸ್ ಉಪನಿರೀಕ್ಷಕ ಸುರೇಶ್ ಸಿ.ಟಿ. ಅವರಿಗೆ ದೊರೆತಿತ್ತು. ಮಾಹಿತಿ ಆಧರಿಸಿ ಅವರು ಸಿಬ್ಬಂದಿಯೊಂದಿಗೆ ಜಿಡೆಕಲ್ಲು ಬಳಿ ಕಾರ್ಯಾಚರಣೆ ನಡೆಸಿ, KA 19 D 0948 ನೋಂದಣಿಯ ಪಿಕ್‌ಅಪ್ ವಾಹನವನ್ನು ತಡೆದು ಪರಿಶೀಲಿಸಿದ್ದಾರೆ.

ಈ ವೇಳೆ ವಾಹನದಲ್ಲಿ ಮೂರು ಜಾನುವಾರುಗಳನ್ನು ಹಿಂಸಾತ್ಮಕವಾಗಿ ಕಟ್ಟಿ ಹಾಕಿರುವುದು ಪೊಲೀಸರ ಗಮನಕ್ಕೆ ಬಂದಿದೆ. ವಾಹನ ಚಾಲಕ ಮಹಮ್ಮದ್ ಜಬ್ಬಾರ್ ಅವರನ್ನು ವಿಚಾರಿಸಿದಾಗ, ಶಾಂತಿಗೋಡು ಗ್ರಾಮದ ನಿವಾಸಿ ಅಶೋಕ್ ಎಂಬವರಿಂದ ಜಾನುವಾರುಗಳನ್ನು ಖರೀದಿಸಿ, ಯಾವುದೇ ಪರವಾನಗಿ ಇಲ್ಲದೆ ವಧೆ ಮಾಡುವ ಉದ್ದೇಶದಿಂದ ಸಾಗಿಸುತ್ತಿರುವುದಾಗಿ ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಜಾನುವಾರುಗಳನ್ನು ಹಾಗೂ ಪಿಕ್‌ಅಪ್ ವಾಹನವನ್ನು ವಶಕ್ಕೆ ಪಡೆದ ಪೊಲೀಸರು, ಆರೋಪಿಯನ್ನು ಕೂಡ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ .ಕ್ರ. 101/2026, ಪ್ರಾಣಿ ಹಿಂಸಾ ಕಾಯ್ದೆಯ ಕಲಂ 11(D) ಹಾಗೂ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ–2020ರ ಕಲಂ 4, 5, 12, ಜೊತೆಗೆ IMV Act ಕಲಂ 66 R/w 192(A) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

You may also like

News

ಸಾಮಾಜಿಕ ಜಾಲತಾಣದಲ್ಲಿ ಧಾರ್ಮಿಕ ವೈಮನಸ್ಸು, ಭಯ ಮೂಡಿಸುವ ಸಂದೇಶ – ಫೇಸ್‌ಬುಕ್ ಖಾತೆದಾರನ ವಿರುದ್ಧ ಪ್ರಕರಣ

ಪುತ್ತೂರು ದರ್ಭೆ ಪ್ರದೇಶದಲ್ಲಿ ಆಗಸ್ಟ್ 21ರಂದು ಶುಕ್ರವಾರ ಅಂಗಡಿಯೊಂದರಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಧಾರ್ಮಿಕ ವೈಮನಸ್ಸು ಹಾಗೂ ಸಾರ್ವಜನಿಕರಲ್ಲಿ ಭಯ ಉಂಟುಮಾಡುವ ರೀತಿಯಲ್ಲಿ ಸಂದೇಶ
News

ವರ್ಗೀಯ ವೈಮನಸ್ಸಿಗೆ ಪ್ರಚೋದನೆ – ವಾಟ್ಸಾಪ್‌ ಗ್ರೂಪ್‌ನಲ್ಲಿ ಬಂದ್‌ಗೆ ಕರೆ ನೀಡಿದ್ದ ವ್ಯಕ್ತಿಯ ವಿರುದ್ಧ ಪುತ್ತೂರಿನಲ್ಲಿ ಪ್ರಕರಣ ದಾಖಲು

ಸಾರ್ವಜನಿಕ ಶಾಂತಿ ಕದಡುವ ಹಾಗೂ ಧಾರ್ಮಿಕ ವೈಮನಸ್ಸು ಸೃಷ್ಟಿಸುವ ರೀತಿಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶ ಹರಿಬಿಟ್ಟು ಬಂದ್‌ಗೆ ಕರೆ ನೀಡಿದ್ದ ವ್ಯಕ್ತಿಯ ವಿರುದ್ಧ ಪುತ್ತೂರು ನಗರ ಪೊಲೀಸ್‌

You cannot copy content of this page